Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿದೇಶಿ ಉದ್ಯೋಗ ಕನಸು ಭಂಗ: ₹6.23 ಲಕ್ಷ ಪಡೆದು ಜಾಲ ಪರಾರಿ
    ಇತ್ತೀಚಿನ ಸುದ್ದಿ

    ವಿದೇಶಿ ಉದ್ಯೋಗ ಕನಸು ಭಂಗ: ₹6.23 ಲಕ್ಷ ಪಡೆದು ಜಾಲ ಪರಾರಿ

    May 25, 2026
    Share

    ಉಡುಪಿ: ವಿದೇಶದಲ್ಲಿ ಆಕರ್ಷಕ ಕೆಲಸ ಕೊಡಿಸುವುದಾಗಿ ನಂಬಿಸಿ ನಿಟ್ಟೂರು ನಿವಾಸಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ ಹಾಗೂ ಪಾಸ್‌ಪೋರ್ಟ್ ಪಡೆದು ವಂಚಿಸಿರುವ ಜಾಲದ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನ್ಯಾಯಾಲಯದ ಖಾಸಗಿ ದೂರಿನ ಅನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ನಿಟ್ಟೂರು ನಿವಾಸಿ ಎನ್. ಆರ್. ಪದ್ಮನಾಭ ಉಪಾಧ್ಯ ವಂಚನೆಗೊಳಗಾದ ಪಿರ್ಯಾದಿದಾರರು. ಇವರಿಂದ ಹಣ ಪಡೆದು ವಂಚಿಸಿದ ಆರೋಪಿಗಳಾದ ಆಶ್ಲೆ ಕರ್ನೇಲಿಯೋ, ಸವಿತಾ, ಪ್ರಕೃತಿ ಮತ್ತು ಪ್ರಶಾಂತ್ ಎಂಬ ನಾಲ್ವರ ವಿರುದ್ಧ ಪೊಲೀಸರು ಕೇಸ್ ಬುಕ್ ಮಾಡಿದ್ದಾರೆ.ಉದ್ಯೋಗ ಹುಡುಕುತ್ತಿದ್ದ ಪದ್ಮನಾಭ ಉಪಾಧ್ಯ ಅವರನ್ನು 2025ರ ಫೆಬ್ರವರಿ 12ರಂದು ಸಂಪರ್ಕಿಸಿದ್ದ 1ನೇ ಆರೋಪಿ ಆಶ್ಲೆ ಕರ್ನೇಲಿಯೋ, ಯುನೈಟೆಡ್ ಕಿಂಗ್‌ಡಮ್ (UK) ದೇಶದಲ್ಲಿ ‘ಹೌಸ್ ಕೀಪಿಂಗ್ ಸೂಪರ್‌ವೈಸರ್’ ಉದ್ಯೋಗವಿದ್ದು, ತಾನು ಕೆಲಸ ಕೊಡಿಸುವುದಾಗಿ ನಂಬಿಸಿದ್ದನು. ಬಳಿಕ ತನ್ನ ಸಹಾಯಕಿ, 2ನೇ ಆರೋಪಿ ಸವಿತಾಳ ಮೊಬೈಲ್ ಸಂಖ್ಯೆಯನ್ನು ನೀಡಿದ್ದನು. ಪಿರ್ಯಾದಿದಾರರು ಸವಿತಾಳನ್ನು ಸಂಪರ್ಕಿಸಿದಾಗ, ಯು.ಕೆ. ವೀಸಾ ಪ್ರಕ್ರಿಯೆಗಾಗಿ ₹2,00,000 ಪ್ರೊಸೆಸಿಂಗ್ ಶುಲ್ಕ ಪಾವತಿಸುವಂತೆ ತಿಳಿಸಿದ್ದಾಳೆ. ಅದರಂತೆ ಪದ್ಮನಾಭ ಅವರು 2025ರ ಮಾರ್ಚ್ 19ರಂದು ಸವಿತಾಳ ಬ್ಯಾಂಕ್ ಆಫ್ ಬರೋಡಾ ಖಾತೆಗೆ ₹2 ಲಕ್ಷ ಜಮಾ ಮಾಡಿದ್ದರು.ಬಳಿಕ ಈ ಜಾಲದ ಇತರ ಆರೋಪಿಗಳಾದ 3ನೇ ಆರೋಪಿ ಪ್ರಕೃತಿ ಮತ್ತು 4ನೇ ಆರೋಪಿ ಪ್ರಶಾಂತ್ ಎಂಬುವವರು ಸೇರಿಕೊಂಡು ಮೆಡಿಕಲ್ ಪರೀಕ್ಷೆ, ವೀಸಾ ಸ್ಟಾಂಪಿಂಗ್ ಹಾಗೂ ಎಂಬಸಿ ಪ್ರೊಸೆಸಿಂಗ್ ಹೆಸರಿನಲ್ಲಿ ಪದ್ಮನಾಭ ಅವರಿಂದ ಹಂತ ಹಂತವಾಗಿ ಒಟ್ಟು ₹6,23,000 ನಗದು ಹಾಗೂ ಅಸಲಿ ಪಾಸ್‌ಪೋರ್ಟ್ ಅನ್ನು ಪಡೆದುಕೊಂಡಿದ್ದಾರೆ.ಹಣ ಪಡೆದ ಕೆಲ ದಿನಗಳ ಬಳಿಕ ಆರೋಪಿಗಳು, “ನಿಮ್ಮ ವೀಸಾ ತಿರಸ್ಕೃತವಾಗಿದೆ (Reject)” ಎಂದು ಸುಳ್ಳು ಹೇಳಿದ್ದಾರೆ. ಅಲ್ಲದೆ ಪಡೆದಿದ್ದ ಲಕ್ಷಾಂತರ ಹಣ ಹಾಗೂ ಪಾಸ್‌ಪೋರ್ಟ್ ಅನ್ನು ವಾಪಸ್ ನೀಡುವುದಾಗಿ ನಂಬಿಸಿದ್ದಾರೆ. ಆದರೆ ಆ ನಂತರ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡು, ಸಂಪರ್ಕಕ್ಕೆ ಸಿಗದೆ ತಲೆಮರೆಸಿಕೊಂಡಿದ್ದಾರೆ. ತಾವು ಮೋಸ ಹೋಗಿರುವುದನ್ನು ಅರಿತ ಪದ್ಮನಾಭ ಉಪಾಧ್ಯ ಅವರು ಮಾನ್ಯ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಕೋರ್ಟ್ ನೀಡಿದ ನಿರ್ದೇಶನದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 67/2026 ರಂತೆ, ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 316(2) (ವಿಶ್ವಾಸದ್ರೋಹ) ಮತ್ತು 318 (ವಂಚನೆ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

    Post Views: 180

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.