Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪ್ರಾಪ್ತೆ ಮೇಲೆ ದೌರ್ಜನ್ಯ ಎಸಗಿ ಕೊಲೆ: 77 ದಿನದಲ್ಲೇ ಅಪರಾಧಿಗೆ ಗಲ್ಲು ಶಿಕ್ಷೆ
    ಇತ್ತೀಚಿನ ಸುದ್ದಿ

    ಅಪ್ರಾಪ್ತೆ ಮೇಲೆ ದೌರ್ಜನ್ಯ ಎಸಗಿ ಕೊಲೆ: 77 ದಿನದಲ್ಲೇ ಅಪರಾಧಿಗೆ ಗಲ್ಲು ಶಿಕ್ಷೆ

    May 26, 2026
    Share

    ಚೆನ್ನೈ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಅಪರಾಧಿಗೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಪೋಕ್ಸೋ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
    ಧರ್ಮ ಮುನೀಶ್ವರನ್ ಶಿಕ್ಷೆಗೆ ಗುರಿಯಾದ ಅಪರಾಧಿ.

    ಅಪರಾಧಿಯು ಕೃತ್ಯ ಎಸಗಿದ 77 ದಿನಗಳಲ್ಲೇ ಆತನಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ಲೈಂಗಿಕ ದೌರ್ಜನ್ಯ ಹಾಗೂ ಕೊಲೆ, ಎರಡೂ ಪ್ರಕರಣದಲ್ಲೂ ಆತ ಅಪರಾಧಿ ಎಂದು ಸಾಬೀತಾಗಿದ್ದು, ಪ್ರತ್ಯೇಕವಾಗಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ.

    ವಿಲಾತಿಕುಲಂನ 12 ನೇ ತರಗತಿಯ ೧೭ ವರ್ಷದ ವಿದ್ಯಾರ್ಥಿನಿ ಈ ವರ್ಷ ಮಾರ್ಚ್‌ನಲ್ಲಿ ನಾಪತ್ತೆಯಾಗಿದ್ದಳು. ಆಕೆಯ ಶವ ಮನೆಯ ಸಮೀಪವಿರುವ ಕುರುಚಲು ಪ್ರದೇಶದಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಅಪರಾಧಿಯನ್ನು ಪತ್ತೆ ಹಚ್ಚಲು ಪೊಲೀಸರು ಅಪರಾಧ ನಡೆದ ಸ್ಥಳದ ಬಳಿ ಸಿಸಿಟಿವಿ ಕ್ಯಾಮೆರಾಗಳಿಲ್ಲದ ಕಾರಣ, 10 ವಿಶೇಷ ತಂಡಗಳು ಇತರ ಸ್ಥಳಗಳಲ್ಲಿ 98 ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು.

    ಟವರ್ ಡಂಪ್ ವಿಧಾನವನ್ನು ಬಳಸಿಕೊಂಡು 2,574 ಫೋನ್ ಸಂಖ್ಯೆಗಳನ್ನು ಪರಿಶೀಲಿಸಲಾಗಿತ್ತು. ಅಪರಾಧ ನಡೆದ ಸ್ಥಳದ ಬಳಿ ಅನುಮಾನಾಸ್ಪದ ದ್ವಿಚಕ್ರ ವಾಹನದ ಫೋಟೋ ವಿಂಡ್‌ಮಿಲ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ತನಿಖೆ ವೇಳೆ ಆ ಬೈಕ್‌ನ ನೋಂದಣಿ ಸಂಖ್ಯೆ ತಿರುಚಲಾಗಿದ್ದು, ಬೈಕ್ ಕದ್ದಿರುವುದು ಬೆಳಕಿಗೆ ಬಂದಿತ್ತು. ಇದೇ ಆಧಾರದ ಮೇಲೆ ಅಪರಾಧಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    Post Views: 121

    CrimeNews PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.