Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಬಲ್ ಡೆಕ್ಕರ್ ಬಸ್ ಪಲ್ಟಿ: ಪೊಲೀಸ್ ಸಿಬ್ಬಂದಿ ಸೇರಿ ಹಲವರು ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    ಡಬಲ್ ಡೆಕ್ಕರ್ ಬಸ್ ಪಲ್ಟಿ: ಪೊಲೀಸ್ ಸಿಬ್ಬಂದಿ ಸೇರಿ ಹಲವರು ಆಸ್ಪತ್ರೆಗೆ ದಾಖಲು

    May 26, 2026
    Share

    ಲಕ್ನೋ: ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಎಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ.ಉನ್ನಾವೋ ಜಿಲ್ಲೆಯ ಔರಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ನಿಭಾ ಖೇಡಾ ಗ್ರಾಮದ ಸಮೀಪ, ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇಯಲ್ಲಿ ಬೆಳಗ್ಗೆ ಸುಮಾರು 5:15ರ ವೇಳೆಗೆ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಸುಮಾರು 50 ಪ್ರಯಾಣಿಕರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಪೋಲಿಸ್ ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಅತಿವೇಗದಲ್ಲಿ ಸಂಚರಿಸುತ್ತಿದ್ದು, ಈ ವೇಳೆ ಚಾಲಕ ನಿದ್ರೆಗೆ ಜಾರಿದ್ದಾನೆ. ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕೆಲ ಪ್ರಯಾಣಿಕರು ಕಿಟಕಿಗಳ ಮೂಲಕ ಹೊರಗೆ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರು ಪೊಲೀಸ್ ಸಿಬ್ಬಂದಿ ಸೇರಿ ಹಲವರನ್ನ ಲಖ್ನೋ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 136

    PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.