Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರವಾರ: ಕುಮಟಾದಲ್ಲಿ ವಿಕ್ರಮ ತೈಲನ ತಿಗಳಾರಿ ಶಾಸನ ಪತ್ತೆ
    ಇತ್ತೀಚಿನ ಸುದ್ದಿ

    ಕಾರವಾರ: ಕುಮಟಾದಲ್ಲಿ ವಿಕ್ರಮ ತೈಲನ ತಿಗಳಾರಿ ಶಾಸನ ಪತ್ತೆ

    September 6, 2022
    Share

    ಕಾರವಾರ: ಇತಿಹಾಸ ಸಂಶೋಧಕ ಶ್ಯಾಮಸುಂದರ ಗೌಡ ಅಂಕೋಲಾ ಅವರು ಉತ್ತರ ಕನ್ನಡ ಜಿಲ್ಲಾ ಶಾಸನ ಸಂಪುಟದ ರಚನೆಯ ಹಿನ್ನೆಲೆಯಲ್ಲಿ ಕುಮಟಾ ತಾಲೂಕಿನ ಕೋಡ್ಕಣಿಯಲ್ಲಿ ಕೈಗೊಂಡ ಎರಡನೇ ಹಂತದ ಕ್ಷೇತ್ರಕಾರ್ಯದ ಸಂದರ್ಭದಲ್ಲಿ ಅಲ್ಲಿನ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿನ ತೆಂಗಿನ ಮರದ ಬುಡದಲ್ಲಿ ಹನ್ನೆರಡನೇ ಶತಮಾನದ ಅವಧಿಗೆ ಸೇರಿದ ಹೊಸ ಅಪ್ರಕಟಿತ ತಿಗಳಾರಿ ಲಿಪಿ ಮತ್ತು ಕನ್ನಡ ಭಾಷೆಯಲ್ಲಿರುವ ಶಾಸನ ಪತ್ತೆ ಮಾಡಿದ್ದಾರೆ. ಈಗ ದೊರೆತಿರುವ ತಿಗಳಾರಿ ಲಿಪಿಯಲ್ಲಿರುವ ಈ ಶಾಸನ ಒಟ್ಟೂ ಮೂವತ್ತೆರಡು ಸಾಲುಗಳಲ್ಲಿ ಬರೆದಿದ್ದು, ಶಿಶುಗಲಿ ಪಾಂಡ್ಯರ ರಾಜ ವಿಕ್ರಮ ತೈಲನದ್ದಾಗಿದೆ. ಹೆರ್ಗ್ಗಡಹೇಯ (ಬಹುಶಃ ಈಗಿನ ಹೆಗಡೆ) ಗ್ರಾಮದಲ್ಲಿ ಲಿಷ್ಣಮನ ತಮ್ಮ ನಾರಾಯಣ ಮತ್ತು ಸೀಗೆಯ ನಾರಾಯಣರು ಪ್ರತಿಷ್ಠಾಪಿಸಿದ ದೇವರಿಗೆ ನಂದಾದೀಪ ಮತ್ತು ನೈವೇದ್ಯಕ್ಕಾಗಿ ವಿಕ್ರಮತೈಲ ಭೂಮಿದಾನ ನೀಡಿದ ವಿಷಯ ತಿಳಿಸುತ್ತದೆ. ಮುಂದುವರೆದ ಶಾಸನ ಹಟ್ಟಣದ (ಪಟ್ಟಣದ) ತೈಲನೂ ದೇವರಿಗೆ ಭೂಮಿ ಮತ್ತು ಹಣದಾನ ನೀಡಿದ್ದನ್ನು ಶಾಸನ ಉಲ್ಲೇಖಿಸುತ್ತದೆ. ಈ ಶಾಸನದಲ್ಲಿ ಸ್ಪಷ್ಟವಾದ ತೇದಿಯ ಉಲ್ಲೇಖವಿಲ್ಲ. ಕೇವಲ ಮೀನದ ಬೃಹಸ್ಪತಿ ಎಂದು ಶಾಸನ ಮುಂದುವರೆಯುತ್ತದೆ. ಗುಂಡಬಾಳ ಮತ್ತು ತಂಬೊಳ್ಳಿಯಲ್ಲಿ ಈ ಮೊದಲು ದೊರೆತ ಶಾಸನಗಳ ಆಧಾರದಿಂದ ವಿಕ್ರಮ ತೈಲನ ಆಳ್ವಿಕೆ ಕ್ರಿ.ಶ. 1119 ರಿಂದ 1125 ಎಂದು ವಿದ್ವಾಂಸರು ಗುರುತಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    Post Views: 251

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.