Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಾದಕವಸ್ತು ಮಾರಾಟಕ್ಕೆ ಸಾಗಾಟ ಮಾಡುತ್ತಿದ್ದ ಆರೋಪಿಗಳು ಪೊಲೀಸರ ಬಲೆಗೆ
    ಇತ್ತೀಚಿನ ಸುದ್ದಿ

    ಮಾದಕವಸ್ತು ಮಾರಾಟಕ್ಕೆ ಸಾಗಾಟ ಮಾಡುತ್ತಿದ್ದ ಆರೋಪಿಗಳು ಪೊಲೀಸರ ಬಲೆಗೆ

    May 29, 2026
    Share

    ಬೆಳ್ತಂಗಡಿ : ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ ಎಂಡಿಎಂಎ (MDMA) ಮಾದಕವಸ್ತುವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಸಾವಿರ ರೂಪಾಯಿ ಮೌಲ್ಯದ ಮಾದಕವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

    ಬಂಧಿತರನ್ನು ಮಂಗಳೂರು ತಾಲೂಕಿನ ಪುತ್ತಿಗೆ ಗ್ರಾಮದ ಹಂಡೇಲು ನಿವಾಸಿ ತನ್ವೀರ್ (27) ಹಾಗೂ ಮೂಡಬಿದಿರೆಯ ಕಲ್ಲಬೆಟ್ಟು ನಿವಾಸಿ ಮುಹಮ್ಮದ್ ಸಲ್ವಾನ್ (22) ಎಂದು ಗುರುತಿಸಲಾಗಿದೆ. ಪ್ರಕರಣದ ಮೂರನೇ ಆರೋಪಿ, ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಹಂಝತ್ ಕರಾರ್ ಎಂಬಾತ ಸದ್ಯ ತಲೆಮರೆಸಿಕೊಂಡಿದ್ದಾನೆ.

    ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಮೇ 27 ರಂದು ಮಾದಕವಸ್ತು ಸಾಗಾಟದ ಕುರಿತು ಖಚಿತ ಮಾಹಿತಿ ದೊರೆತಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್‌ಐ ಹಾಗೂ ಸಿಬ್ಬಂದಿ ತಂಡ, ಗುರುವಾಯನಕೆರೆ–ಮೂಡಬಿದಿರೆ ರಸ್ತೆಯ ಕಂಬಳದಡ್ಡ ಎಂಬಲ್ಲಿ ನಾಖಾಬಂದಿ (ರಸ್ತೆ ತಡೆ) ಹಾಕಿ ವಾಹನ ತಪಾಸಣೆ ಆರಂಭಿಸಿದರು. ಈ ವೇಳೆ ಅನುಮಾನಾಸ್ಪದವಾಗಿ ಬಂದ ಕಾರನ್ನು ತಡೆದು ತೀವ್ರ ಪರಿಶೀಲನೆ ನಡೆಸಿದಾಗ, ಮಾರಾಟಕ್ಕಾಗಿ ಅಕ್ರಮವಾಗಿ ಸಾಗಿಸುತ್ತಿದ್ದ 4 ಗ್ರಾಂ ತೂಕದ ನಿಷೇಧಿತ MDMA ಪತ್ತೆಯಾಗಿದೆ. ಇದರ ಅಂದಾಜು ಮೌಲ್ಯ ₹40,000 ಎಂದು ಪೊಲೀಸರು ಅಂದಾಜಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ತಮಗೆ ಬೆಳ್ತಂಗಡಿಯ ಹಂಝತ್ ಕರಾರ್ ಎಂಬಾತ ಗ್ರಾಹಕರಿಗೆ ಮಾರಾಟ ಮಾಡಲು ಈ ಮಾದಕವಸ್ತುವನ್ನು ನೀಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ಮೇ 28 ರಂದು ಮಂಗಳೂರಿನ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಗಿದ್ದು, ಗೌರವಾನ್ವಿತ ನ್ಯಾಯಾಧೀಶರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ತಲೆಮರೆಸಿಕೊಂಡಿರುವ ಮುಖ್ಯ ಸೂತ್ರಧಾರಿ ಹಂಝತ್ ಕರಾರ್ ಪತ್ತೆಗಾಗಿ ವೇಣೂರು ಪೊಲೀಸರು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ

    Post Views: 111

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.