Facebook Twitter Instagram
    Saturday, May 30
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಘಾತಕಾರಿ ಘಟನೆ: ಆಸ್ಪತ್ರೆ ಶವಾಗಾರದಲ್ಲಿ ವಿಕೃತ ಕೃತ್ಯ ಮಾಡಿದ ಸಿಬ್ಬಂದಿ ಬಂಧನ
    ಇತ್ತೀಚಿನ ಸುದ್ದಿ

    ಆಘಾತಕಾರಿ ಘಟನೆ: ಆಸ್ಪತ್ರೆ ಶವಾಗಾರದಲ್ಲಿ ವಿಕೃತ ಕೃತ್ಯ ಮಾಡಿದ ಸಿಬ್ಬಂದಿ ಬಂಧನ

    May 30, 2026
    Share

    ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ 

    ಘಟನೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಕೇಳಿದೆ. ಬೀದರ್‌ ಜಿಲ್ಲೆಯ ಬ್ರಿಮ್ಸ್‌ ಆಸ್ಪತ್ರೆಯ ಶವಾಗಾರದಲ್ಲಿ ಅಟೆಂಡರ್‌ ಮುನೀರ್‌ ಅಹಮದ್‌ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನ ಶೂಟ್‌ ಮಾಡಿ ವಿಕೃತಿ ಮೆರೆದಿರುವ ಅಮಾನುಷ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ. ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಮುನೀರ್‌ ಅಹಮದ್‌ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ ಎಂದು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಬ್ರಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಶೂಟ್ ಮಾಡಿ ವಿಕೃತಿ ಮೆರೆದಿದ್ದಾನೆ. ಶವಾಗಾರ ಕೋಣೆಯ ಅಟೆಂಡರ್ ಮುನೀರ್ ಅಹ್ಮದ್ ಎಂಬಾತನಿಂದ ಈ ಹೀನ ಕೃತ್ಯವಾಗಿದೆ. ಪಿಎಂಇ ಮಾಡುವ ಕಾಲಕ್ಕೆ ಅನುಮತಿ ಇಲ್ಲದೇ ತನ್ನ ಮೊಬೈಲ್‌ನಲ್ಲಿ ಮುನ್ನಿರ್ ಸತ್ತ ಮಹಿಳೆಯರ ಶವದ ಮೇಲಿನ ಬಟ್ಟೆ ತೆಗೆದು ಫೋಟೋ ತೆಗೆದುಕೊಳ್ತಿದ್ದನಂತ್ತೆ. ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸಿಕೊಂಡು ಮೊಬೈಲ್‌ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದನಂತೆ ಆರೋಪಿ ಮುನೀರ್.

    ಕೃತ್ಯದಿಂದ ಮಹಿಳೆಯರ ಘನತೆ, ಕುಟುಂಬಸ್ಥರ ಗೌರವ, ವೈದ್ಯಕೀಯ ಗೌಪ್ಯತೆಗೆ ಧಕ್ಕೆಯಾಗಿದೆ. ಸದ್ಯ ಆರೋಪಿ ಮುನೀರ್‌ ವಿರುದ್ಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 301, 62 ಅಡಿಯಲ್ಲಿ ಪ್ರಕರಣ ದಾಖಲಾಗಿದೆ

    Post Views: 15

    karnataka PoliceInvestigation

    Related Posts

    ಗನ್ ಲೈಸೆನ್ಸ್ ನವೀಕರಣ ಇನ್ನು ಸುಲಭ: ದಕ್ಷಿಣ ಕನ್ನಡದಲ್ಲಿ ಡಿಜಿಟಲ್ ಟ್ರ್ಯಾಕಿಂಗ್ ಆರಂಭ

    May 30, 2026

    ಮಂಗಳೂರು ಯುವಕ ನಾಪತ್ತೆ: ಸುರೇಶ್ ಪತ್ತೆಗೆ ಪೊಲೀಸರ ಮನವಿ

    May 30, 2026

    ರಾತ್ರಿ ವೇಳೆ ಸಂಭವಿಸಿದ ಭೀಕರ ರಸ್ತೆ ದುರಂತ: ಬೈಕ್ ಸವಾರ ನಾಲ್ವರು ಯುವಕರು ಸಾವು

    May 30, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.