Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»8 ಗಂಟೆಯ ಪ್ರಯಾಣ ಇನ್ನು 5 ಗಂಟೆಗೆ: ಮಂಗಳೂರು-ಬೆಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್
    ಇತ್ತೀಚಿನ ಸುದ್ದಿ

    8 ಗಂಟೆಯ ಪ್ರಯಾಣ ಇನ್ನು 5 ಗಂಟೆಗೆ: ಮಂಗಳೂರು-ಬೆಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್

    May 31, 2026
    Share

    ಮಂಗಳೂರು: ಕರಾವಳಿ ಜನತೆಯ ಬಹುದಿನಗಳ ಕನಸಾದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಕೊನೆಗೂ ಆರಂಭವಾಗುತ್ತಿದ್ದು, ಜೂನ್ 1 ರಿಂದ ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ. ಪ್ರಸ್ತುತ ಶಿರಾಡಿ ಘಾಟ್ ರಸ್ತೆಯ ಮೂಲಕ ರಾಜ್ಯ ರಾಜಧಾನಿ ಮತ್ತು ಮಂಗಳೂರಿಗೆ ಪ್ರಯಾಣಿಸಲು ಬೇಕಾಗುವ 8 ರಿಂದ 10 ಗಂಟೆಗಳ ಸಮಯವನ್ನು, ಈ ವಂದೇ ಭಾರತ್ ರೈಲಿನಿಂದ ಕೇವಲ 5 ಗಂಟೆಗಳಿಗೆ ಇಳಿಕೆಯಾಗಲಿದೆ.ಸ್ಪೀಡ್ ಪ್ರಾಯೋಗಿಕ ಕಾರ್ಯಾಚರಣೆಯನ್ನು ನಡೆಸಲಿದೆ. ಸುಮಾರು ಒಂದು ವಾರದ ಅವಧಿಯಲ್ಲಿ ಲೋಡ್ ಟ್ರಯಲ್ಸ್ ಮತ್ತು ತಾಂತ್ರಿಕ ಮೌಲ್ಯಮಾಪನಗಳು ನಡೆಯಲಿದ್ದು, ಆ ಬಳಿಕ ವಾಣಿಜ್ಯ ಕಾರ್ಯಾಚರಣೆಗೆ ಅಂತಿಮ ಅನುಮತಿ ಸಿಗುವ ನಿರೀಕ್ಷೆಯಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಮೇ 23 ರಂದು ಮಂಗಳೂರಿಗೆ ಭೇಟಿ ನೀಡಿದ್ದ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು, ‘ನಾವು ಜೂನ್‌ನಲ್ಲಿ ವಂದೇ ಭಾರತ್ ರೈಲು ಕಾರ್ಯಾಚರಣೆ ಆರಂಭಿಸುತ್ತೇವೆ’ ಎಂದು ಹೇಳಿಕೆ ನೀಡಿದ್ದರು. ಇದೀಗ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರೂ ಸಹ ಸಿದ್ಧತಾ ಕಾರ್ಯಗಳು ಮತ್ತು ತಾಂತ್ರಿಕ ಪರಿಶೀಲನೆಗಳು ಅಂತಿಮ ಹಂತದಲ್ಲಿವೆ ಎಂದು ಖಚಿತಪಡಿಸಿದ್ದಾರೆ.ಕಠಿಣವಾದ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ಸೆಕ್ಷನ್ಈ ಮಾರ್ಗದಲ್ಲಿ ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ವರೆಗಿನ ಘಾಟ್ ಸೆಕ್ಷನ್ ಅತ್ಯಂತ ಕಠಿಣವಾಗಿದೆ. ಈ 55 ಕಿಲೋಮೀಟರ್ ಉದ್ದದ ಕಾರಿಡಾರ್‌ನಲ್ಲಿ 57 ಸುರಂಗಗಳು, 258 ಸೇತುವೆಗಳು ಮತ್ತು 108 ಕಡಿದಾದ ತಿರುವುಗಳಿವೆ. ಈಗಾಗಲೇ ರೈಲ್ವೆ ಇಲಾಖೆಯು ಸುಮಾರು 93.55 ಕೋಟಿ ರೂ. ವೆಚ್ಚದಲ್ಲಿ ಈ ಘಾಟ್ ಸೆಕ್ಷನ್‌ನಲ್ಲಿ ವಿದ್ಯುದೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಿದೆ. ಈ ಮಾರ್ಗದಲ್ಲಿ ಖಾಲಿ ಎಲೆಕ್ಟ್ರಿಕ್ ರೈಲಿನ ಪ್ರಾಯೋಗಿಕ ಸಂಚಾರವನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಒಟ್ಟಾರೆಯಾಗಿ ಸುಮಾರು 400 ಕಿಲೋಮೀಟರ್ ವ್ಯಾಪಿಸಿರುವ ಮೈಸೂರು-ಹಾಸನ-ಮಂಗಳೂರು ವಿದ್ಯುದೀಕರಣದ ಯೋಜನೆಗೆ ಅಂದಾಜು 461.23 ಕೋಟಿ ರೂ. ನಿಂದ 729.28 ಕೋಟಿ ರೂ. ಗೆ ಏರಿಕೆಯಾಗಿದೆ. ಈ ಮಾರ್ಗದಲ್ಲಿ ಗಂಟೆಗೆ 120 ಕಿಮೀ ವೇಗದಲ್ಲಿ ರೈಲು ಸಂಚರಿಸುವಂತೆ ಆಧುನಿಕ ಓವರ್‌ಹೆಡ್ ವಿದ್ಯುದೀಕರಣ ವ್ಯವಸ್ಥೆಯನ್ನು ಅಳವಡಿಸಲಾಗಿದೆ.ಪ್ರವಾಸೋದ್ಯಮಕ್ಕೆ ಭಾರಿ ಬೂಸ್ಟ್ವಂದೇ ಭಾರತ್ ಎಕ್ಸ್‌ಪ್ರೆಸ್ ಕಾರ್ಯಾಚರಣೆ ಆರಂಭವಾದರೆ, ಬೆಂಗಳೂರು ಮತ್ತು ಕರಾವಳಿ ನಡುವಿನ ಪ್ರಯಾಣದ ಚಿತ್ರಣವೇ ಬದಲಾಗಲಿದೆ. ಶಿರಾಡಿ ಘಾಟ್ ಮೂಲಕ ಸಂಚರಿಸುವ ದೀರ್ಘಾವಧಿಯ ರಸ್ತೆ ಪ್ರಯಾಣದ ಮೇಲಿನ ಅವಲಂಬನೆ ಕಡಿಮೆಯಾಗುವುದರ ಜೊತೆಗೆ, ಉಡುಪಿ, ಕಾರವಾರ ಮತ್ತು ಮಂಗಳೂರು ಭಾಗಗಳಲ್ಲಿ ಪ್ರವಾಸೋದ್ಯಮಕ್ಕೆ ಭಾರಿ ಉತ್ತೇಜನ ಸಿಗಲಿದೆ.ಕಾರ್ಯಾಚರಣೆಯ ಸಾಧ್ಯತೆಗಳನ್ನು ಆಧರಿಸಿ, ಈ ರೈಲು ಸೇವೆಯನ್ನು ಗೋವಾದ ಮಡಗಾಂವ್‌ವರೆಗೆ ವಿಸ್ತರಿಸುವ ಆಲೋಚನೆಯೂ ಇದೆ ಎಂದು ಅಧಿಕಾರಿಗಳು ಸುಳಿವು ನೀಡಿದ್ದಾರೆ. ಈ ಪ್ರಾಯೋಗಿಕ ಸಂಚಾರ ಯಶಸ್ವಿಯಾದರೆ, ಇದು ಕರ್ನಾಟಕದ ರೈಲ್ವೆ ಸೇವೆಯಲ್ಲಿ ಅತ್ಯಂತ ಪ್ರಮುಖ ಮೈಲಿಗಲ್ಲಾಗಲಿದೆ.

    Post Views: 210

    karnataka mangalore

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.