Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೇಷ ಬದಲಿಸಿ ಪರಿಶೀಲಿಸಿದ ಪೊಲೀಸರಿಗೆ ಬಯಲಾಯ್ತು ಸತ್ಯ: ಇಬ್ಬರು ಹೋಟೆಲ್ ಮಾಲೀಕರ ಬಂಧನ
    ಇತ್ತೀಚಿನ ಸುದ್ದಿ

    ವೇಷ ಬದಲಿಸಿ ಪರಿಶೀಲಿಸಿದ ಪೊಲೀಸರಿಗೆ ಬಯಲಾಯ್ತು ಸತ್ಯ: ಇಬ್ಬರು ಹೋಟೆಲ್ ಮಾಲೀಕರ ಬಂಧನ

    May 31, 2026
    Share

    ಬೆಂಗಳೂರು: ಮಟನ್ ಎಂದು ಹೇಳಿ ಗ್ರಾಹಕರಿಗೆ ಗೋಮಾಂಸ (ಬೀಫ್) ನೀಡುತ್ತಿದ್ದ ಆರೋಪದ ಮೇಲೆ ಪೊಲೀಸರು ಇಬ್ಬರು ಹೋಟೆಲ್​​ ಮಾಲೀಕರನ್ನು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬಂಧಿತರನ್ನು ಬ್ಯಾರತಿ ಗ್ರಾಮದ ಜಿಜೂ ಅಲೆಕ್ಸಾಂಡರ್ ಹಾಗೂ ಟಿಪ್ಪಣ್ಣ ಲೇಔಟ್‌ನ ಶಿಬು ಕೆ.ಬಿ. ಎಂದು ಗುರುತಿಸಲಾಗಿದೆ. ಕೇರಳ ಮೂಲದವರಾದ ಇವರು ಭೈರತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಆರೋಪಿಗಳು ಬೊಮ್ಮನಹಳ್ಳಿಯಲ್ಲಿರುವ ಐಸಿರಿ ಹಬ್ ಕಾಯಲೋರಂ ರೆಸ್ಟೋರೆಂಟ್‌ನ ಮಾಲೀಕರು ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕಾಯಲೋರಂ ರೆಸ್ಟೋರೆಂಟ್‌ನಲ್ಲಿ ಮಟನ್ ಎಂದು ಹೇಳಿ ಬೀಫ್ ನೀಡಲಾಗುತ್ತಿದೆ ಎಂಬ ಆರೋಪದ ಕುರಿತು ಗ್ರಾಹಕರಿಂದ ಹಲವು ದೂರುಗಳು ಬಂದಿದ್ದವು. ರೆಸ್ಟೋರೆಂಟ್‌ನ ಮೆನು ಕಾರ್ಡ್‌ನಲ್ಲಿ ಎಲ್ಲಿಯೂ ಬೀಫ್ ಉಲ್ಲೇಖಿಸಿರಲಿಲ್ಲ. ಆದರೆ ಮಟನ್ ಖಾದ್ಯಗಳನ್ನು ಆರ್ಡರ್ ಮಾಡಿದಾಗ ಗೋಮಾಂಸವನ್ನು ನೀಡಲಾಗುತ್ತಿದೆ ಎಂದು ಅನೇಕರು ದೂರಿದ್ದರು. ಈ ದೂರುಗಳ ಆಧಾರದ ಮೇಲೆ ಸಿವಿಲ್ ಉಡುಪಿನಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಗ್ರಾಹಕರ ಸೋಗಿನಲ್ಲಿ ಕಳುಹಿಸಲಾಗಿತ್ತು. ಅವರು ಖರೀದಿಸಿ ತಂದಿದ್ದ ಮಟನ್​​ ಖಾದ್ಯಗಳನ್ನು ಪರಿಶೀಲಿಸಿದಾಗ ಅದು ಮಟನ್ ಅಲ್ಲ, ಗೋಮಾಂಸ ಎಂಬುದು ದೃಢಪಟ್ಟಿತ್ತು

    ಆರೋಪಿಗಳ ವಿರುದ್ಧ ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ-2020 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಪ್ರಕರಣದ ಮತ್ತೊಬ್ಬ ಪಾಲುದಾರ ಅಭಿಲಾಶ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

    Post Views: 159

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.