Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ರಮ ಜಾನುವಾರು ಹತ್ಯೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಿಢೀರ್ ದಾಳಿ: ಮೂವರ ಬಂಧನ
    ಇತ್ತೀಚಿನ ಸುದ್ದಿ

    ಅಕ್ರಮ ಜಾನುವಾರು ಹತ್ಯೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಿಢೀರ್ ದಾಳಿ: ಮೂವರ ಬಂಧನ

    May 31, 2026
    Share

    ಕಡಬ : ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಎಂಬಲ್ಲಿ ತೋಟವೊಂದರಲ್ಲಿ ಅಕ್ರಮವಾಗಿ ಜಾನುವಾರು ಹತ್ಯೆ ಮಾಡುತ್ತಿದ್ದ ಅಡ್ಡೆಗೆ ಬೆಳ್ಳಾರೆ ಪೊಲೀಸರು ದಿಢೀರ್ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮೇ 29ರ ಶುಕ್ರವಾರ ಸಂಜೆ ನಡೆದಿದೆ.

    ಬೆಳ್ಳಾರೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ (SI) ಸಂತೋಷ್ ಬಿ.ಪಿ. ಅವರಿಗೆ ಕಡಬ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಪರಿಸರದಲ್ಲಿ ಅಕ್ರಮವಾಗಿ ಗೋವಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಎಸ್‌ಐ ಅವರು ತಮ್ಮ ಸಿಬ್ಬಂದಿಗಳೊಂದಿಗೆ ನಿಗದಿಪಡಿಸಿದ ಸ್ಥಳಕ್ಕೆ ತೆರಳಿ ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ತೋಟವೊಂದರಲ್ಲಿ ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದೆ.

    ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ ಸಂದರ್ಭದಲ್ಲಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತರನ್ನು ಕೆ. ಅಬ್ದುಲ್ ರಫೀಕ್ (37 ವರ್ಷ), ಅದ್ರಾಮ ಮಂತೂರು (41 ವರ್ಷ) ಹಾಗೂ ಅಬ್ದುಲ್ ಖಾದರ್ ಪಣೆಮಜಲು (57 ವರ್ಷ) ಎಂದು ಗುರುತಿಸಲಾಗಿದೆ. ಆರೋಪಿಗಳು ಯಾವುದೇ ಕಾನೂನಾತ್ಮಕ ಪರವಾನಿಗೆ ಪಡೆಯದೆ ಅಕ್ರಮವಾಗಿ ಗೋವಧೆ ನಡೆಸಿರುವುದು ವಿಚಾರಣೆಯ ವೇಳೆ ದೃಢಪಟ್ಟಿದೆ.
    ಪೊಲೀಸರು ಸ್ಥಳದಲ್ಲಿದ್ದ ಜಾನುವಾರು ಮಾಂಸ, ಕೃತ್ಯಕ್ಕೆ ಬಳಸಿದ ಇತರೆ ಸೊತ್ತುಗಳನ್ನು ಹಾಗೂ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 36/2026, ಕಲಂ 4, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2023 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ

    Post Views: 93

    karnataka PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.