Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಗಲಾಟೆ ಮಾಡಬೇಡ’ ಎಂದಿದ್ದಕ್ಕೆ ರಕ್ತಸಿಕ್ತ ಅಂತ್ಯ; ಸಂಬಂಧವನ್ನೇ ಮರೆತ ಸೋದರಳಿಯ
    ಇತ್ತೀಚಿನ ಸುದ್ದಿ

    ‘ಗಲಾಟೆ ಮಾಡಬೇಡ’ ಎಂದಿದ್ದಕ್ಕೆ ರಕ್ತಸಿಕ್ತ ಅಂತ್ಯ; ಸಂಬಂಧವನ್ನೇ ಮರೆತ ಸೋದರಳಿಯ

    June 1, 2026
    Share

    ಬಂಟ್ವಾಳ : ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಅತ್ಯಂತ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮನೆಯಲ್ಲಿ ದೈವಿಕ ಕಾರ್ಯಕ್ರಮ ನಡೆಯುತ್ತಿದ್ದಾಗಲೇ, ಮದ್ಯದ ಅಮಲಿನಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಯುವಕನೋರ್ವ ತನ್ನ ಸ್ವಂತ ಚಿಕ್ಕಪ್ಪನ ಕುತ್ತಿಗೆಗೇ ಬಿಯರ್ ಬಾಟಲಿಯಿಂದ ಇರಿದು ಕೊಲೆಗೈದಿದ್ದಾನೆ.ಇಲ್ಲಿನ ನಿವಾಸಿ ಮಧುಸೂಧನ ( 38) ಅವರು ಮೃತಪಟ್ಟವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಕೊಲೆಗೈದವನಾಗಿದ್ದಾನೆ.ಕಾಡಬೆಟ್ಟು ನಿವಾಸಿ ಕೇಶವ ಪೂಜಾರಿ ಅವರ ಮನೆಯಲ್ಲಿ ರವಿವಾರ ರಾತ್ರಿ ದೈವಕ್ಕೆ ‘ತಂಬಿಲ’ ಸೇವೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23 ವರ್ಷ) ಮತ್ತು ಆತನ ಸ್ನೇಹಿತರು ಮನೆಯಿಂದ ಹೊರಗಡೆ ಮದ್ಯಸೇವನೆ ಮಾಡಿ ಜೋರಾಗಿ ಗದ್ದಲ ಎಬ್ಬಿಸುತ್ತಿದ್ದರು. ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿರುವುದರಿಂದ ಹೊರಗೆ ಗಲಾಟೆ ಮಾಡದಂತೆ ರಾಹುಲ್‌ನ ಚಿಕ್ಕಪ್ಪ, ಇಲೆಕ್ಟ್ರಿಷಿಯನ್ ಆಗಿದ್ದ ಮಧುಸೂಧನ (38 ವರ್ಷ) ಅವರು ಆಕ್ಷೇಪ ವ್ಯಕ್ತಪಡಿಸಿ ಬುದ್ಧಿವಾದ ಹೇಳಿದ್ದಾರೆ.ಚಿಕ್ಕಪ್ಪ ತನಗೆ ಬುದ್ಧಿವಾದ ಹೇಳಿದ್ದರಿಂದ ತೀವ್ರ ಕೋಪಗೊಂಡ ರಾಹುಲ್, ತಕ್ಷಣವೇ ಕೈಯಲ್ಲಿದ್ದ ಬಿಯರ್ ಬಾಟಲಿಯಿಂದ ಮಧುಸೂಧನ ಅವರ ಕುತ್ತಿಗೆಯ ಭಾಗಕ್ಕೆ ಬಲವಾಗಿ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಬಿಯರ್ ಬಾಟಲಿ ಚುಚ್ಚಿದ ರಭಸಕ್ಕೆ ತೀವ್ರ ರಕ್ತಸ್ರಾವ ಉಂಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮಧುಸೂಧನ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.ಮೃತ ಮಧುಸೂಧನ ಅವರು ಅವಿವಾಹಿತರಾಗಿದ್ದು, ಇಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಕೊಲೆಗಡುಕ ಸೋದರಳಿಯ ರಾಹುಲ್ ಪೆಟ್ರೋಲ್ ಬಂಕ್‌ ಉದ್ಯೋಗಿಯಾಗಿದ್ದ ಎನ್ನಲಾಗಿದೆ. ಮೃತದೇಹವನ್ನು ಸದ್ಯ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

    Post Views: 102

    dakshina kannada PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.