Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಾವಿಯೊಳಗೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿ: ಕ್ಷಿಪ್ರ ಕಾರ್ಯಾಚರಣೆಯಿಂದ ಜೀವ ಉಳಿಸಿದ ಅಗ್ನಿಶಾಮಕ ಸಿಬ್ಬಂದಿ
    ಇತ್ತೀಚಿನ ಸುದ್ದಿ

    ಬಾವಿಯೊಳಗೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿ: ಕ್ಷಿಪ್ರ ಕಾರ್ಯಾಚರಣೆಯಿಂದ ಜೀವ ಉಳಿಸಿದ ಅಗ್ನಿಶಾಮಕ ಸಿಬ್ಬಂದಿ

    June 5, 2026
    Share

    ಸುಳ್ಯ: ದುಗಲಡ್ಕ ಸಮೀಪದ ಕಂದಡ್ಕದಲ್ಲಿ 40 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ವ್ಯಕ್ತಿಯೊಬ್ಬರನ್ನು ಸುಳ್ಯ ಅಗ್ನಿಶಾಮಕ ದಳದ ಸಿಬಂದಿ ಸಾಹಸಮಯ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಜೂನ್ 4ರ ಗುರುವಾರ ನಡೆದಿದೆ.ಸುಳ್ಯ ತಾಲೂಕಿನ ಕಸಬ ಗ್ರಾಮದ ಕಂದಡ್ಕದಲ್ಲಿ ನವೀನ್ ಕುಮಾರ್ ಎಂಬವರು ತಮ್ಮ ಮನೆಯ ಸುಮಾರು ನಲವತ್ತು ಅಡಿ ಆಳದ ಬಾವಿಯನ್ನು ಸ್ವಚ್ಛಗೊಳಿಸುವ ಸಲುವಾಗಿ ಬಾವಿಯೊಳಗೆ ಇಳಿದಿದ್ದರು. ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಬಾವಿಯೊಳಗಿನ ಆಮ್ಲಜನಕದ ಪ್ರಮಾಣ ಕಡಿಮೆಯಾಗಿದ್ದು, ಉಸಿರಾಟದ ತೊಂದರೆಯಿಂದ ಅವರು ಪ್ರಜ್ಞೆ ತಪ್ಪಿ ಬಾವಿಯಲ್ಲೇ ಕುಸಿದು ಬಿದ್ದಿದ್ದರು.ಘಟನೆಯ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತುರ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಬಾವಿಯೊಳಗೆ ಇಳಿದ ಸಿಬ್ಬಂದಿ ನಾಗರಾಜ್ ಪೂಜಾರಿ ಅವರು ಆಮ್ಲಜನಕದ ಕೊರತೆ ಇರುವುದನ್ನು ಅರಿತು ತಕ್ಷಣವೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡರು. ಬಳಿಕ ಆಮ್ಲಜನಕ ಕಿಟ್ ಧರಿಸಿ ಮತ್ತೆ ಬಾವಿಗೆ ಇಳಿದು ಪ್ರಾಣಾಪಾಯದ ಸ್ಥಿತಿಯಲ್ಲಿದ್ದ ನವೀನ್ ಕುಮಾರ್ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾದರು. ರಕ್ಷಿಸಲ್ಪಟ್ಟ ನವೀನ್ ಕುಮಾರ್ ಅವರಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು.ಅಗ್ನಿಶಾಮಕ ಠಾಣಾಧಿಕಾರಿ ಕಿರಣ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬಂದಿಗಳಾದ ನಾಗರಾಜ, ಮಹಮ್ಮದ್ ರಫಿಕ್, ಹರ್ಷವರ್ಧನ್, ಮೋಹನ್ ಬಾಬು, ಹರೀಶ್ ಗೌಡ, ಆನಂದ್ ಹಾಗೂ ರಾಜೇಶ್ ಎಸ್.ಕೆ. ಪಾಲ್ಗೊಂಡಿದ್ದರು.

    Post Views: 105

    dakshina kannada PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.