Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»PMGDY ಯೋಜನೆ ಹೆಸರಿನಲ್ಲಿ ವಂಚನೆ: ಸೈಬರ್ ಖದೀಮರ ಜಾಲ ಬಯಲು
    ಇತ್ತೀಚಿನ ಸುದ್ದಿ

    PMGDY ಯೋಜನೆ ಹೆಸರಿನಲ್ಲಿ ವಂಚನೆ: ಸೈಬರ್ ಖದೀಮರ ಜಾಲ ಬಯಲು

    June 5, 2026
    Share

    ಕುಂದಾಪುರ: ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ (PMGDY) ಯೋಜನೆಯಡಿ ಕಡಿಮೆ ಬಡ್ಡಿದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ ಹಂತ ಹಂತವಾಗಿ 5.69 ಲಕ್ಷ ರೂಪಾಯಿ ಹಣ ಪಡೆದು ಆನ್‌ಲೈನ್ ವಂಚಕರು ವಂಚಿಸಿರುವ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.ಕುಂದಾಪುರ ತಾಲೂಕಿನ ಕಸಬ ಗ್ರಾಮದ ಕೆಳ ಖಾರ್ವಿಕೇರಿ, ಡೋಗಿ ಪೇರಿ ರಸ್ತೆ ನಿವಾಸಿ ಪ್ರಣೀತ (38) ವಂಚನೆಗೊಳಗಾದ ಮಹಿಳೆ. 2026 ರ ಮಾರ್ಚ್ 10 ರಂದು ಪ್ರಣೀತ ಅವರು ತಮ್ಮ ಮೊಬೈಲ್‌ನಲ್ಲಿ ಫೇಸ್‌ಬುಕ್ ವೀಕ್ಷಿಸುತ್ತಿದ್ದಾಗ, ಅದರಲ್ಲಿ ‘PMGDY ಅಡಿಯಲ್ಲಿ ಸುಲಭವಾಗಿ ಲೋನ್ ಕೊಡಿಸಲಾಗುವುದು’ ಎಂಬ ಆಕರ್ಷಕ ಜಾಹೀರಾತು ಕಂಡುಬಂದಿದೆ. ಸಾಲದ ಹಣ ಬೇಕಿದ್ದಲ್ಲಿ 7082732342 ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಅದರಲ್ಲಿ ನಮೂದಿಸಲಾಗಿತ್ತು. ಅದನ್ನು ನಂಬಿದ ಪ್ರಣೀತ ಅವರು ಸದ್ರಿ ನಂಬರ್‌ಗೆ ಕರೆ ಮಾಡಿದಾಗ, ಆ ಕಡೆಯಿಂದ ಮಾತನಾಡಿದ ವ್ಯಕ್ತಿ ತನ್ನ ಹೆಸರು ‘ಶ್ರೀನಿವಾಸ್ ರಾವ್’ ಎಂದು ಪರಿಚಯಿಸಿಕೊಂಡಿದ್ದಾನೆ.ಪಿರ್ಯಾದಿದಾರರಿಗೆ 40 ಲಕ್ಷ ರೂಪಾಯಿ ಮೊತ್ತದ ಬೃಹತ್ ಲೋನ್ ಕೊಡಿಸುವುದಾಗಿ ನಂಬಿಸಿದ ಶ್ರೀನಿವಾಸ್ ರಾವ್, ಸಾಲ ಮಂಜೂರಾತಿಗೆ ಮುನ್ನ ಪ್ರೊಸೆಸಿಂಗ್ ಫೀಸ್, ಇನ್ಶೂರೆನ್ಸ್ ಹಾಗೂ ಇತರೆ ಶುಲ್ಕಗಳ ಹೆಸರಿನಲ್ಲಿ ಮೊದಲು ಹಣ ಪಾವತಿಸಬೇಕು ಎಂದು ನಂಬಿಸಿದ್ದಾನೆ. ಆತನ ಮಾತುಗಳನ್ನು ಸತ್ಯವೆಂದು ನಂಬಿದ ಪ್ರಣೀತ ಅವರು 2026 ರ ಮಾರ್ಚ್ 11 ರಿಂದ ಏಪ್ರಿಲ್ 13 ರವರೆಗಿನ ಅವಧಿಯಲ್ಲಿ ವಿವಿಧ ಕಂತುಗಳಲ್ಲಿ ಒಟ್ಟು 5,69,069/- ರೂಪಾಯಿ (ಐದು ಲಕ್ಷದ ಅರವತ್ತೊಂಬತ್ತು ಸಾವಿರದ ಅರವತ್ತೊಂಬತ್ತು ರೂ.) ಹಣವನ್ನು ಫೋನ್ ಪೇ (PhonePe) ಮೂಲಕ ಆಪಾದಿತನು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ.ಇಷ್ಟೆಲ್ಲಾ ಹಣ ಪಡೆದ ಮೇಲೂ ಆರೋಪಿಯು ಯಾವುದೇ ಲೋನ್ ಹಣವನ್ನು ನೀಡದೇ ಸತಾಯಿಸಿದ್ದಾನೆ. ಇದರಿಂದ ಬೇಸತ್ತ ಮಹಿಳೆ ತಾವು ಕಟ್ಟಿದ ಹಣವನ್ನು ವಾಪಸ್ ನೀಡುವಂತೆ ಕೇಳಿದಾಗ, ಲೋನ್ ರಿಲೀಸ್ ಆಗಬೇಕಾದರೆ ಇನ್ನು ಹೆಚ್ಚಿನ ಹಣವನ್ನು ಖಾತೆಗೆ ಹಾಕಬೇಕು ಎಂದು ಆರೋಪಿ ಮತ್ತೆ ಬೇಡಿಕೆ ಇಟ್ಟಿದ್ದಾನೆ. ತಾವು ಆನ್‌ಲೈನ್ ವಂಚನೆಗೆ ಒಳಗಾಗಿರುವುದನ್ನು ಅರಿತ ಪ್ರಣೀತ ಅವರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Post Views: 118

    dakshina kannada PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.