Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಾಪನಾಶಿನಿ ಹೊಳೆಯಲ್ಲಿ ಜಾನುವಾರು ಅವಶೇಷ ಪತ್ತೆ ಪ್ರಕರಣ: ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಪಾಪನಾಶಿನಿ ಹೊಳೆಯಲ್ಲಿ ಜಾನುವಾರು ಅವಶೇಷ ಪತ್ತೆ ಪ್ರಕರಣ: ಆರೋಪಿಯ ಬಂಧನ

    June 6, 2026
    Share

    ಜೂನ್ 1 ರಂದು ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ತೇಲುತ್ತಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ ಕಾರ್ಯಪ್ರವೃತ್ತರಾಗಿದ್ದ ಶಿರ್ವ ಪೊಲೀಸರು, ಕಾಪು ಪಶು ವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಅಪರಾಧ ಪರಿಶೀಲನಾ ಅಧಿಕಾರಿಗಳ ಸಮಕ್ಷಮದಲ್ಲಿ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಹೊಳೆಯಲ್ಲಿದ್ದ ಜಾನುವಾರಿನ ಮೇಲ್ದವಡೆಯ ಭಾಗ, ಎರಡು ಗೆರಸುಗಳು, ಮಾಂಸ ಹಾಗೂ ಹೊಟ್ಟೆಯ ಒಳಗಿನ ಭಾಗಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಕಾನೂನುಬದ್ಧವಾಗಿ ಪ್ರಕರಣ ದಾಖಲಿಸಲಾಗಿತ್ತು.ಹೊಳೆಗೆ ಜಾನುವಾರು ಅವಶೇಷ ಎಸೆದ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಸಂಘ ಪರಿವಾರದ ವಿವಿಧ ಸಂಘಟನೆಗಳು, ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿದ್ದವು. ಅಲ್ಲದೆ, ಪೊಲೀಸರಿಗೆ ಗಡುವು ವಿಧಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದವು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡಿದ್ದ ಶಿರ್ವ ಪೊಲೀಸರು, ಜೂನ್ 5 ರಂದು ಶಿರ್ವ ಗ್ರಾಮದ ಪದವು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ಅಶೋಕನನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತನಿಂದ ಜಾನುವಾರಿನ ಚರ್ಮ ಹಾಗೂ ಕೃತ್ಯ ಎಸಗಲು ಬಳಸಿದ್ದ ಹರಿತವಾದ ಅಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

    Post Views: 82

    karnataka PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.