Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ
    ಇತ್ತೀಚಿನ ಸುದ್ದಿ

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026
    Share

    ಗಂಗಾವತಿ : ಆನ್‌ಲೈನ್ ಗೇಮ್ ಆಡುವುದನ್ನು ವಿರೋಧಿಸಿ ಬುದ್ಧಿವಾದ ಹೇಳಿದ ಒಂದೇ ಕಾರಣಕ್ಕೆ, ಜನ್ಮ ನೀಡಿದ ತಂದೆ ಮತ್ತು ಒಡಹುಟ್ಟಿದ ಅಕ್ಕನನ್ನೇ ಚಾಕುವಿನಿಂದ ಇರಿದು ಕ್ರೂರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ತಾಯಿಗೂ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಪಾಪಿ ಮಗ, ಬಳಿಕ ತನಗೂ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಘಟನೆಯಲ್ಲಿ ತಂದೆ ವೆಂಕಟನಾಯ್ಡು (45) ಹಾಗೂ ಅಕ್ಕ ಪ್ರಗತಿ (19) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ತಾಯಿ ಸೌಜನ್ಯ ಅವರ ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಸದ್ಯ ಆರೋಪಿ ಸಾಯಿವೆಂಕಟ ಮಣಿದೀಪ (18) ಹಾಗೂ ತಾಯಿ ಸೌಜನ್ಯ ಇಬ್ಬರಿಗೂ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮೃತ ವೆಂಕಟನಾಯ್ಡು ಅವರು ಹೊಸ ಅಯೋಧ್ಯೆ ಗ್ರಾಮದಲ್ಲಿ ವಾಸವಾಗಿದ್ದು, ಖಾಸಗಿ ಶಾಲೆಯೊಂದರಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ ಎಂದಿನಂತೆ ವೆಂಕಟನಾಯ್ಡು, ಪತ್ನಿ, ಇಬ್ಬರು ಮಕ್ಕಳು ಹಾಗೂ ವೆಂಕಟನಾಯ್ಡು ಅವರ ಪೋಷಕರು ಒಟ್ಟಿಗೆ ಕುಳಿತು ಹಣ್ಣು ತಿಂದು, ಊಟ ಮುಗಿಸಿದ್ದಾರೆ. ಬಳಿಕ ವೆಂಕಟನಾಯ್ಡು ಕುಟುಂಬದ ನಾಲ್ವರು ಒಂದು ಕೊಠಡಿಯಲ್ಲಿ ಹಾಗೂ ಅವರ ಪೋಷಕರು ಮತ್ತೊಂದು ಕೊಠಡಿಯಲ್ಲಿ ಮಲಗಿದ್ದಾರೆ.ರಾತ್ರಿ 10.30ರ ಸುಮಾರಿಗೆ ವೆಂಕಟನಾಯ್ಡು ಮಲಗಿದ್ದ ಕೊಠಡಿಯಿಂದ ಚೀರಾಟ ಮತ್ತು ಗಲಾಟೆಯ ಸದ್ದು ಕೇಳಿಸಿದೆ. ಬಾಗಿಲು ತೆರೆಯುವಂತೆ ವೆಂಕಟನಾಯ್ಡು ರಕ್ಷಣೆಗೆ ಕಿರುಚಾಡಿದ್ದಾರೆ. ಸದ್ದು ಕೇಳಿ ಓಡಿಬಂದ ವೆಂಕಟನಾಯ್ಡು ಅವರ ತಂದೆ ತಾತಾರಾವ್‌ ಬಾಗಿಲು ತೆರೆಯಲು ಯತ್ನಿಸಿದರೂ ಒಳಗಿನಿಂದ ಲಾಕ್ ಆಗಿದ್ದರಿಂದ ಸಾಧ್ಯವಾಗಿಲ್ಲ. ತಕ್ಷಣವೇ ಅವರು ನೆರೆಹೊರೆಯವರ ಸಹಾಯ ಪಡೆದು ಬಾಗಿಲು ಮುರಿದು ಒಳಹೋದಾಗ ಇಡೀ ಕೊಠಡಿ ರಕ್ತದ ಮಡುವಾಗಿ ಮಾರ್ಪಟ್ಟಿತ್ತು. ತಂಗಿ ಪ್ರಗತಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ತಂದೆ ವೆಂಕಟನಾಯ್ಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.ಮೊಮ್ಮಗ ಸಾಯಿವೆಂಕಟ ಮಣಿದೀಪ ಆನ್‌ಲೈನ್ ಗೇಮ್ ವ್ಯಸನಿಯಾಗಿದ್ದ. ಅದಕ್ಕೆ ಬುದ್ಧಿ ಹೇಳಿದ್ದಕ್ಕೆ ರಾತ್ರಿ ಏಕಾಏಕಿ ಸಿಟ್ಟಿಗೆ ಬಂದು ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಈ ಕ್ರೂರ ಕೃತ್ಯ ಎಸಗಿದ್ದಾನೆ. ಆತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಮೃತರ ತಂದೆ ತಾತಾರಾವ್ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ರಾಮ್ ಎಲ್. ಅರಸಿದ್ಧಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ ಕುಟುಂಬದ ಒಳಗಿನ ಕಲಹ ಮತ್ತು ಗೇಮ್ ವ್ಯಸನವೇ ಈ ಭೀಕರ ಹತ್ಯಾಕಾಂಡಕ್ಕೆ ಕಾರಣ ಎಂದು ತಿಳಿದುಬಂದಿದ್ದು, ತನಿಖೆ ಮುಂದುವರಿದಿದೆ.

    Post Views: 63

    karnataka PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.