Facebook Twitter Instagram
    Sunday, June 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ
    ಇತ್ತೀಚಿನ ಸುದ್ದಿ

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026
    Share

    ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ ಗಡಾಯಿಕಲ್ಲು ಚಾರಣಕ್ಕೆ ಅರಣ್ಯ ಇಲಾಖೆ ಮತ್ತೆ ನಿರ್ಬಂಧ ಹೇರಿದೆ. ಮಳೆಯ ಕಾರಣ ಕಲ್ಲುಗಳು ಜಾರುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಜೂನ್ 14ರಿಂದ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಕುರಿತು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಪ್ರಕಟಣೆ ಹೊರಡಿಸಿದ್ದು, ಸುರಕ್ಷತಾ ದೃಷ್ಟಿಯಿಂದ ಮುಂದಿನ ಆದೇಶದವರೆಗೆ ಗಡಾಯಿಕಲ್ಲು ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.ಈ ಹಿಂದೆ ಬೇಸಿಗೆ ಅವಧಿಯಲ್ಲಿ ಕಾಡ್ಗಿಚ್ಚು ಹಾಗೂ ಇತರ ಅನಾಹುತಗಳನ್ನು ತಡೆಗಟ್ಟುವ ಉದ್ದೇಶದಿಂದ ಗಡಾಯಿಕಲ್ಲಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅಲ್ಲದೆ ಹುಲಿ ಗಣತಿ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಸಹ ಪ್ರವೇಶ ನಿಷೇಧ ಜಾರಿಯಲ್ಲಿತ್ತು. ಬಳಿಕ ಜೂನ್ 1ರಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮತ್ತೆ ತೆರೆಯಲಾಗಿತ್ತು. ಪುನರಾರಂಭಗೊಂಡ ಮೊದಲ ವಾರಾಂತ್ಯದಲ್ಲೇ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದರು. ಜೂನ್ 7ರಂದು ಮಾತ್ರವೇ ಸಾವಿರಕ್ಕೂ ಹೆಚ್ಚು ಮಂದಿ ಗಡಾಯಿಕಲ್ಲಿಗೆ ಭೇಟಿ ನೀಡಿ ಹೊಸ ದಾಖಲೆ ನಿರ್ಮಿಸಿದ್ದರು.ಆದರೆ ಮುಂಗಾರು ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಚಾರಣ ಮಾರ್ಗದಲ್ಲಿನ ಕಲ್ಲುಗಳು ಜಾರುವ ಸಾಧ್ಯತೆ ಹೆಚ್ಚಾಗಿದ್ದು, ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅರಣ್ಯ ಇಲಾಖೆ ಮತ್ತೆ ಪ್ರವೇಶ ನಿರ್ಬಂಧಿಸಿದೆ. ಕೇವಲ 13 ದಿನಗಳ ಅಂತರದಲ್ಲಿ ಗಡಾಯಿಕಲ್ಲು ಮತ್ತೊಮ್ಮೆ ಪ್ರವಾಸಿಗರಿಗೆ ಮುಚ್ಚಲ್ಪಟ್ಟಿದ್ದು, ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಪ್ರವೇಶ ಪುನರಾರಂಭಿಸುವ ಕುರಿತು ಇಲಾಖೆ ನಿರ್ಧಾರ ಕೈಗೊಳ್ಳಲಿದೆ.

    Post Views: 2

    karnataka PoliceInvestigation

    Related Posts

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026

    ರೈಲು ಹಳಿಯಲ್ಲಿ ದುರಂತ ಅಂತ್ಯ: ತಮಿಳುನಾಡು ಮೂಲದ ವ್ಯಕ್ತಿ ಸಾವು

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.