Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋಟಿ ಕೋಟಿ ಡ್ರಗ್ಸ್ ಸಾಗಾಟ ಪತ್ತೆ: ಪೊಲೀಸರ ಭರ್ಜರಿ ಕಾರ್ಯಾಚರಣೆ
    ಇತ್ತೀಚಿನ ಸುದ್ದಿ

    ಕೋಟಿ ಕೋಟಿ ಡ್ರಗ್ಸ್ ಸಾಗಾಟ ಪತ್ತೆ: ಪೊಲೀಸರ ಭರ್ಜರಿ ಕಾರ್ಯಾಚರಣೆ

    June 16, 2026
    Share

    ಬೆಂಗಳೂರು: ಮಾದಕ ದ್ರವ್ಯ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಕೊಕೇನ್ ಜಪ್ತಿಯಾಗಿದೆ. ಈ ಸಂಬಂಧ ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ನಗರದ ವಿವಿಧ ಭಾಗಗಳಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಸಾಗಾಟ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿರುವ ಅಧಿಕಾರಿಗಳು, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಂಪರ್ಕಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹೈಡ್ರೋ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 3 ಕೆಜಿ 180 ಗ್ರಾಂ ತೂಕದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 2.20 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಈ ಮಾದಕ ವಸ್ತುವನ್ನು ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ತರಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇಮ್ರಾನ್ ವಿರುದ್ಧ ಈಗಾಗಲೇ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ದೊಡ್ಡ ಪ್ರಮಾಣದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನೊಬ್ಬನ ಲಗೇಜ್ ಪರಿಶೀಲಿಸಿದ ವೇಳೆ 7.92 ಕೆಜಿ ತೂಕದ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 2.77 ಕೋಟಿ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡ್ರಗ್ಸ್ ಜಪ್ತಿ ಮಾಡಿರುವ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.ಇನ್ನೊಂದು ಕಾರ್ಯಾಚರಣೆಯಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಚಿಕ್ಕಬಾಣಾವರ ಪ್ರದೇಶದಲ್ಲಿ ದಾಳಿ ನಡೆಸಿ 70.50 ಲಕ್ಷ ರೂಪಾಯಿ ಮೌಲ್ಯದ 130 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ. ಈ ವೇಳೆ ಉಗಾಂಡಾ ಮೂಲದ ಮಹಿಳೆ ಜನತ್ ಹಾಗೂ ಡ್ರಗ್ಸ್ ಖರೀದಿದಾರನಾಗಿದ್ದ ವಾಹಬ್ ಎಲ್ವಿಸ್ ಯುನಿಸ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ವಾಹಬ್ ಯಶವಂತಪುರ ಹಾಗೂ ಗೊರಗುಂಟೆಪಾಳ್ಯ ಭಾಗಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಬಂಧಿತ ಮಹಿಳೆ ಬಿಸಿನೆಸ್ ವೀಸಾದಡಿ ಭಾರತಕ್ಕೆ ಬಂದು ಮಾದಕ ದ್ರವ್ಯ ಮಾರಾಟ ಜಾಲದಲ್ಲಿ ತೊಡಗಿಕೊಂಡಿದ್ದಳು ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅಲ್ಲದೆ, ಈಕೆ ಈ ಹಿಂದೆ ದೆಹಲಿಯಲ್ಲಿ ನಡೆದ ಡ್ರಗ್ಸ್ ಪ್ರಕರಣವೊಂದರಲ್ಲಿ ಬಂಧಿತಳಾಗಿ ಐದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ವಿಚಾರವೂ ಬೆಳಕಿಗೆ ಬಂದಿದೆ. ಜಪ್ತಿಯಾದ ಮಾದಕ ದ್ರವ್ಯಗಳು ಬೆಂಗಳೂರು ನಗರಕ್ಕೆ ಹೇಗೆ ತಲುಪುತ್ತಿದ್ದವು, ಇದರ ಹಿಂದೆ ಕಾರ್ಯನಿರ್ವಹಿಸುತ್ತಿರುವ ದೊಡ್ಡ ಜಾಲ ಯಾವುದು ಎಂಬ ಕುರಿತು ಪೊಲೀಸರು ಹಾಗೂ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

    Post Views: 107

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.