Facebook Twitter Instagram
    Tuesday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಐಎಎಫ್ ಅಧಿಕಾರಿಯ ಪತ್ನಿಗೆ ಕಿರುಕುಳ ಆರೋಪ: ವೈರಲ್ ವಿಡಿಯೋ ಬೆನ್ನಲ್ಲೇ ಇಬ್ಬರ ಅರೆಸ್ಟ್
    ಇತ್ತೀಚಿನ ಸುದ್ದಿ

    ಐಎಎಫ್ ಅಧಿಕಾರಿಯ ಪತ್ನಿಗೆ ಕಿರುಕುಳ ಆರೋಪ: ವೈರಲ್ ವಿಡಿಯೋ ಬೆನ್ನಲ್ಲೇ ಇಬ್ಬರ ಅರೆಸ್ಟ್

    June 16, 2026
    Share

    ನಾಗ್ಪುರ: ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ ಮಾಡಿ, ಮತಾಂತರಕ್ಕೆ ಯತ್ನಿಸಿರುವದಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.ಮಾದಕ ದ್ರವ್ಯ ಸೇವಿಸಿದ ಮೂವರು ತನನ್ನು ಅತ್ಯಾಚಾರ, ಬೆದರಿಕೆ ಹಾಕುವ ಮೂಲಕ ಬಲವಂತದಿಂದ ಮತಾಂತರಕ್ಕೆ ಯತ್ನಿಸಿದ್ದಾರೆ ಎಂದು ಭಾರತೀಯ ವಾಯುಪಡೆಯ ಅಧಿಕಾರಿಯ ಪತ್ನಿ ಆರೋಪಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿಯು ಮಹಿಳೆಯ ಕೈಗಳನ್ನು ಬಲವಂತವಾಗಿ ಹಿಡಿದುಕೊಂಡು ಧಾರ್ಮಿಕ ಶ್ಲೋಕಗಳನ್ನು ಪಠಿಸುತ್ತಾ ಆಕೆಯ ಮುಖಕ್ಕೆ ಊದುತ್ತಿರುವುದು ಮತ್ತು ಮಹಿಳೆಯು ತಡೆಯಲಾರದೆ ‘ನನ್ನನ್ನು ಬಿಟ್ಟುಬಿಡಿ’ ಎಂದು ಜೋರಾಗಿ ಅಳುತ್ತಿರುವುದನ್ನು ಕಾಣಬಹುದಾಗಿದೆ.ಮತಾಂತರ ಪ್ರಕ್ರಿಯೆ ಮುಗಿದ ನಂತರ ತನ್ನ ಮೇಲೆ ಮತ್ತೊಮ್ಮೆ ಅತ್ಯಾಚಾರ ಮಾಡಲು ಯತ್ನಿಸಲಾಗಿತ್ತು. ಆರೋಪಿಯು ತನ್ನ ಒಪ್ಪಿಗೆಯಿಲ್ಲದೆ ತನ್ನನ್ನು ಧಾರ್ಮಿಕ ವಿಧಿವಿಧಾನಗಳಿಗೆ ಒಳಪಡಿಸಿದ್ದು, ಮತಾಂತರಕ್ಕೆ ಯತ್ನಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.ಕಳೆದ ವರ್ಷದ ಫೆಬ್ರವರಿಯಲ್ಲಿ ಆಸ್ತಿ ಖರೀದಿಸುವ ನೆಪದಲ್ಲಿ ಆಕೆಯನ್ನು ಸಂಪರ್ಕಿಸಿದ ಆರೋಪಿಯು, ವಾರ್ದಾ ರಸ್ತೆಯಲ್ಲಿನ ಹೋಟೆಲ್ ವೊಂದಕ್ಕೆ ಕರೆದೊಯ್ದಿದ್ದು, ಅಲ್ಲಿ ಜ್ಯೂಸ್‌ನಲ್ಲಿ ಮಾದಕ ದ್ರವ್ಯ ಬೆರೆಸಿ, ಆಕೆ ಪ್ರಜ್ಞೆ ತಪ್ಪಿದಾಗ ಅತ್ಯಾಚಾರ ಎಸಗಿದ್ದಲ್ಲದೆ, ಆ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದನು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಆ ಬಳಿಕ ಆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಾ ನಿರಂತರವಾಗಿ ಲೈಂಗಿಕ ಶೋಷಣೆ ನಡೆಸಿದ್ದಾನೆ. ಅಷ್ಟೇ ಅಲ್ಲದೇ ಸುಮಾರು 3.09 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.ಅತ್ಯಾಚಾರ, ಸುಲಿಗೆ, ಬಲವಂತದ ಮತಾಂತರ ಯತ್ನ ಹಾಗೂ ಮಹಾರಾಷ್ಟ್ರದ ಮಾಟಮಂತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿಯಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

    Post Views: 2

    karnataka PoliceInvestigation

    Related Posts

    ಕೋಟಿ ಕೋಟಿ ಡ್ರಗ್ಸ್ ಸಾಗಾಟ ಪತ್ತೆ: ಪೊಲೀಸರ ಭರ್ಜರಿ ಕಾರ್ಯಾಚರಣೆ

    June 16, 2026

    ಕೆಮ್ಮಿನ ಸಿರಪ್‌ಗೂ ಡಾಕ್ಟರ್ ಚೀಟಿ ಬೇಕು: ಕೇಂದ್ರದಿಂದ ಹೊಸ ಆದೇಶ

    June 16, 2026

    ಮಂಗಳೂರು : ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

    June 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಐಎಎಫ್ ಅಧಿಕಾರಿಯ ಪತ್ನಿಗೆ ಕಿರುಕುಳ ಆರೋಪ: ವೈರಲ್ ವಿಡಿಯೋ ಬೆನ್ನಲ್ಲೇ ಇಬ್ಬರ ಅರೆಸ್ಟ್

    June 16, 2026

    ಕೋಟಿ ಕೋಟಿ ಡ್ರಗ್ಸ್ ಸಾಗಾಟ ಪತ್ತೆ: ಪೊಲೀಸರ ಭರ್ಜರಿ ಕಾರ್ಯಾಚರಣೆ

    June 16, 2026

    ಕೆಮ್ಮಿನ ಸಿರಪ್‌ಗೂ ಡಾಕ್ಟರ್ ಚೀಟಿ ಬೇಕು: ಕೇಂದ್ರದಿಂದ ಹೊಸ ಆದೇಶ

    June 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.