Facebook Twitter Instagram
    Friday, June 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»₹20 ಲಕ್ಷ ದರೋಡೆ ಪ್ರಕರಣದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಪರಾರಿ; ನಾಲ್ವರಿಗಾಗಿ ಹುಡುಕಾಟ
    ಇತ್ತೀಚಿನ ಸುದ್ದಿ

    ₹20 ಲಕ್ಷ ದರೋಡೆ ಪ್ರಕರಣದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಪರಾರಿ; ನಾಲ್ವರಿಗಾಗಿ ಹುಡುಕಾಟ

    June 19, 2026
    Share

    ಬೆಂಗಳೂರು: ಬೆಂಗಳೂರಿನಲ್ಲಿ ರಕ್ಷಕರೇ ಭಕ್ಷಕರಾದ ಆಘಾತಕಾರಿ ಘಟನೆಯೊಂದು ನಡೆದಿದೆ. ಸಿಐಡಿ ವಿಭಾಗದ ಇನ್ಸ್‌ಪೆಕ್ಟರ್ ಒಬ್ಬರು ಸ್ವತಃ ತಾವೇ ಗ್ಯಾಂಗ್ ಕಟ್ಟಿಕೊಂಡು, ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕೇರಳ ಮೂಲದ ವ್ಯಕ್ತಿಗಳನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್‌ಪೆಕ್ಟರ್ ದರೋಡೆಯ ಮಾಸ್ಟರ್ ಮೈಂಡ್ ಆಗಿದ್ದು, ಸದ್ಯ ಪೊಲೀಸರ ಕಾರ್ಯಾಚರಣೆ ತೀವ್ರಗೊಳ್ಳುತ್ತಿದ್ದಂತೆಯೇ ಎಸ್ಕೇಪ್ ಆಗಿದ್ದಾರೆ. ಈ ಕುರಿತು ನಗರ ಪೊಲೀಸ್ ಆಯುಕ್ತ (CP) ಸಿಮಂತ್ ಕುಮಾರ್ ಅವರು ಅಧಿಕೃತ ಹೇಳಿಕೆ ನೀಡಿದ್ದು, ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಪಾತ್ರ ಇರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

    ಟ್ರೇಡಿಂಗ್ (ವ್ಯಾಪಾರ) ಉದ್ದೇಶಗಳಿಗಾಗಿ ಹಣ ಹಿಡಿದುಕೊಂಡು ಕೇರಳದ ಉದ್ಯಮಿಗಳು ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಬಗ್ಗೆ ನಿಖರ ಮಾಹಿತಿ ಪಡೆದಿದ್ದ ಇನ್ಸ್‌ಪೆಕ್ಟರ್, ಹ್ಯಾರಿಸ್, ಕುಪೇಂದ್ರ, ಶಪಿ ಮತ್ತು ಶಾನಿ ಎಂಬ ನಾಲ್ವರೊಂದಿಗೆ ಸೇರಿ ದರೋಡೆಗೆ ಪ್ಲಾನ್ ಮಾಡಿದ್ದರು. ಯೋಜನೆಯಂತೆ ಹೋಟೆಲ್ ಮುಂಭಾಗ ಅಧಿಕೃತ ಸಿಐಡಿ ಪೊಲೀಸ್ ಜೀಪ್ ನಿಲ್ಲಿಸಿ ಇನ್ಸ್‌ಪೆಕ್ಟರ್ ಒಳಗೇ ಕುಳಿತಿದ್ದರು. ಅವರ ಗ್ಯಾಂಗ್‌ನ ಇಬ್ಬರು ಹೋಟೆಲ್ ಕೋಣೆಗೆ ನುಗ್ಗಿ, ತಾವು ಪೊಲೀಸರೆಂದು ಇನ್ಸ್‌ಪೆಕ್ಟರ್ ಅವರ ಅಧಿಕೃತ ಗುರುತಿನ ಚೀಟಿ (ID Card) ತೋರಿಸಿ, ‘ಅಕ್ರಮವಾಗಿ ಟ್ರೇಡಿಂಗ್ ಮಾಡಲು ಹಣ ತಂದಿದ್ದೀರಿ’ ಎಂದು ಉದ್ಯಮಿಗಳನ್ನು ತೀವ್ರವಾಗಿ ಬೆದರಿಸಿದ್ದಾರೆ. ಬಳಿಕ ಅವರಿಂದ 20 ಲಕ್ಷ ರೂಪಾಯಿ ನಗದನ್ನು ಕಸಿದುಕೊಂಡು, ಹೊರಗೆ ನಿಂತಿದ್ದ ಪೊಲೀಸ್ ಜೀಪ್‌ನಲ್ಲೇ ಇಡೀ ಗ್ಯಾಂಗ್ ಪರಾರಿಯಾಗಿದೆ.

    ಆರಂಭದಲ್ಲಿ ಹೆದರಿದ್ದ ಕೇರಳದ ವ್ಯಕ್ತಿಗಳಿಗೆ ನಂತರದ ಬೆಳವಣಿಗೆಗಳಿಂದ ದರೋಡೆಯ ಬಗ್ಗೆ ತೀವ್ರ ಅನುಮಾನ ಮೂಡಿದೆ. ತಕ್ಷಣವೇ ಅವರು ಮಡಿವಾಳ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪ್ರಕರಣದ ಗಾಂಭೀರ್ಯತೆ ಅರಿತು ತಕ್ಷಣವೇ ತನಿಖೆಗೆ ಇಳಿದ ಮಡಿವಾಳ ಪೊಲೀಸರು, ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ದರೋಡೆ ಗ್ಯಾಂಗ್‌ನಲ್ಲಿದ್ದ ಕುಪೇಂದ್ರ ಎಂಬಾತನನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಯ ವಿಚಾರಣೆ ನಡೆಸಿದಾಗ ಇಡೀ ದರೋಡೆ ಪ್ರಕರಣದ ಅಸಲಿ ಕಿಂಗ್‌ಪಿನ್ ಸಿಐಡಿ ಇನ್ಸ್‌ಪೆಕ್ಟರ್ ಎಂಬ ಆಘಾತಕಾರಿ ಸತ್ಯ ಬಾಯ್ಬಿಟ್ಟಿದ್ದಾನೆ.

    ಕುಪೇಂದ್ರ ಅರೆಸ್ಟ್ ಆಗುತ್ತಿದ್ದಂತೆಯೇ ಇನ್ಸ್‌ಪೆಕ್ಟರ್ ಹಾಗೂ ಉಳಿದ ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಸದ್ಯ ಪೊಲೀಸರು ಆರೋಪಿ ಕುಪೇಂದ್ರ ಮತ್ತು ದರೋಡೆಗೆ ಬಳಸಲಾಗಿದ್ದ ಸಿಐಡಿ ಜೀಪನ್ನು ಜಪ್ತಿ ಮಾಡಿದ್ದು, ತಲೆಮರೆಸಿಕೊಂಡಿರುವ ಖಾಕಿ ಅಧಿಕಾರಿ ಸೇರಿದಂತೆ ನಾಲ್ವರಿಗಾಗಿ ಬಲೆ ಬೀಸಿದ್ದಾರೆ.

    Post Views: 11

    karnataka PoliceInvestigation

    Related Posts

    ಪೊಲೀಸ್ ಕ್ಲಿಯರೆನ್ಸ್ ಹಗರಣ: ಬಜಪೆ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳು ಅಮಾನತು

    June 19, 2026

    ಸ್ನೇಹಿತರೊಂದಿಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ಕಣಿವೆಗೆ ಬಿದ್ದು ಮೃತ್ಯು

    June 19, 2026

    ಮಂಗಳೂರು-ಉಡುಪಿ ಮಾರ್ಗದಲ್ಲಿ ಅಪಘಾತ; ಎಕ್ಸ್‌ಪ್ರೆಸ್ ಬಸ್ ಡಿಕ್ಕಿಗೆ ಸವಾರನಿಗೆ ಗಂಭೀರ ಗಾಯ

    June 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪೊಲೀಸ್ ಕ್ಲಿಯರೆನ್ಸ್ ಹಗರಣ: ಬಜಪೆ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳು ಅಮಾನತು

    June 19, 2026

    ₹20 ಲಕ್ಷ ದರೋಡೆ ಪ್ರಕರಣದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಪರಾರಿ; ನಾಲ್ವರಿಗಾಗಿ ಹುಡುಕಾಟ

    June 19, 2026

    ಸ್ನೇಹಿತರೊಂದಿಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ಕಣಿವೆಗೆ ಬಿದ್ದು ಮೃತ್ಯು

    June 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.