Facebook Twitter Instagram
    Saturday, June 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ರೈಲಿನಲ್ಲಿ ಇನ್ಮುಂದೆ ಈ ತಪ್ಪು ಮಾಡಿದ್ರೆ ಜೇಬಿಗೆ ಹೊರೆ; ರೈಲ್ವೆ ಇಲಾಖೆ ಕಠಿಣ ಕ್ರಮ
    ಕರಾವಳಿ ಸುದ್ದಿ

    ರೈಲಿನಲ್ಲಿ ಇನ್ಮುಂದೆ ಈ ತಪ್ಪು ಮಾಡಿದ್ರೆ ಜೇಬಿಗೆ ಹೊರೆ; ರೈಲ್ವೆ ಇಲಾಖೆ ಕಠಿಣ ಕ್ರಮ

    June 20, 2026
    Share

    ನವದೆಹಲಿ: ಟಿಕೆಟ್‌ರಹಿತ ಪ್ರಯಾಣ ಸೇರಿದಂತೆ ಹಲವು ಉಲ್ಲಂಘನೆಗಳಿಗೆ ದುಪ್ಪಟ್ಟು ದಂಡ ವಿಧಿಸಲು ರೈಲ್ವೆ ಇಲಾಖೆ ನಿರ್ಧರಿಸಿದ್ದು, ಈ ಹೊಸ ನಿಯಮ ಜುಲೈ 1ರಿಂದ ಜಾರಿಯಾಗುತ್ತಿದೆ.ಇದುವರೆಗೆ ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದರೆ ಟಿಕೆಟ್ ದರದ ಜೊತೆಗೆ 250 ರೂ. ದಂಡ ವಿಧಿಸಲಾಗುತ್ತಿತ್ತು. ಆದರೆ ಹೊಸ ನಿಯಮದ ಪ್ರಕಾರ ಟಿಕೆಟ್ ದರದ ಜೊತೆಗೆ 500 ರೂ. ದಂಡ ಪಾವತಿಸಬೇಕಾಗುತ್ತದೆ. ಈ ಮೂಲಕ ಟಿಕೆಟ್ ಇಲ್ಲದೇ ರೈಲಿನಲ್ಲಿ ಪ್ರಯಾಣಿಸುವವರ ವಿರುದ್ಧ ಇಲಾಖೆ ಸಮರ ಸಾರಿದೆ.ಸುಮಾರು 13 ವರ್ಷಗಳ ಬಳಿಕ ರೈಲ್ವೆ ಇಲಾಖೆ ದಂಡದ ಮೊತ್ತವನ್ನು ಪರಿಷ್ಕರಿಸಿದೆ. ಪ್ರಯಾಣಿಕರಲ್ಲಿ ಶಿಸ್ತು ಮೂಡಿಸುವುದು ಮತ್ತು ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗುತ್ತಿದೆ.ಮಹಿಳಾ ಕೋಚ್‌ಗೆ ಅನಧಿಕೃತವಾಗಿ ಪ್ರವೇಶಿಸುವ ಪುರುಷ ಪ್ರಯಾಣಿಕರಿಗೆ 2,500 ರೂ. ವರೆಗೆ ದಂಡ, ರೈಲ್ವೆ ಆವರಣದಲ್ಲಿ ಪರವಾನಗಿ ಇಲ್ಲದೇ ವ್ಯಾಪಾರ ನಡೆಸುವುದು ಅಥವಾ ಭಿಕ್ಷೆ ಬೇಡುವುದಕ್ಕೂ 2,000 ರೂ. ದಂಡ ವಿಧಿಸಲಾಗುತ್ತದೆ. ನಿಷೇಧಿತ ವಸ್ತುಗಳನ್ನ ಸಾಗಿಸುವವರಿಗೆ 10,000 ರೂ. ವರೆಗೆ ದಂಡ ವಿಧಿಸುವ ಅವಕಾಶವಿದೆ. ರೈಲು ಅಥವಾ ರೈಲ್ವೆ ನಿಲ್ದಾಣಕ್ಕೆ ಅನಧಿಕೃತವಾಗಿ ಪ್ರವೇಶಿಸಿದವರಿಗೆ 500 ರೂ. ದಂಡ ವಿಧಿಸಲಾಗುತ್ತದೆ.ಕುಡಿದು ಗಲಾಟೆ ಮಾಡಿದರೆ 24 ಗಂಟೆಗಳವರೆಗೆ ಜೈಲು ಶಿಕ್ಷೆ, 1,000 ರೂ. ದಂಡ ಅಥವಾ ಸಮುದಾಯ ಸೇವೆ ವಿಧಿಸಬಹುದು. ಅಶ್ಲೀಲ ವರ್ತನೆ ತೋರಿದರೆ ಅಥವಾ ಸಹ ಪ್ರಯಾಣಿಕರಿಗೆ ಕಿರುಕುಳ ನೀಡಿದರೆ 1,000 ರೂ. ದಂಡ ಅಥವಾ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿದೆ.ಪ್ರಯಾಣಿಕರ ಸುರಕ್ಷತೆ ಮತ್ತು ವ್ಯವಸ್ಥಿತ ಪ್ರಯಾಣಕ್ಕಾಗಿ ಈ ಕ್ರಮಗಳನ್ನು ಜಾರಿಗೆ ತರಲಾಗಿದೆ. ದಂಡ ಪಾವತಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ಜೈಲು ಶಿಕ್ಷೆಯನ್ನೂ ಎದುರಿಸಬೇಕಾಗಬಹುದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    Post Views: 13

    dakshina kannada karnataka

    Related Posts

    ಮಹಾಕುಂಭದಲ್ಲಿ ವೈರಲ್ ಆಗಿದ್ದ ಮೊನಾಲಿಸಾಗೆ ಸಂಕಷ್ಟ; ರಕ್ಷಣೆ ನೀಡುವಂತೆ ಪೊಲೀಸರಿಗೆ ಹೈಕೋರ್ಟ್ ಸೂಚನೆ

    June 20, 2026

    ಪೆಟ್ರೋಲ್ ಬಂಕ್ ಬಳಿ ಯೂಟರ್ನ್‌ ವೇಳೆ ಅಪಘಾತ; ಸ್ಕೂಟರ್ ಸವಾರನಿಗೆ ಗಂಭೀರ ಗಾಯ

    June 20, 2026

    ಕರ್ತವ್ಯದ ನಡುವೆ ಕೆಎಸ್‌ಆರ್‌ಪಿ ASIಗೆ ಹೃದಯಾಘಾತ; ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ಸಾವು

    June 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಹಾಕುಂಭದಲ್ಲಿ ವೈರಲ್ ಆಗಿದ್ದ ಮೊನಾಲಿಸಾಗೆ ಸಂಕಷ್ಟ; ರಕ್ಷಣೆ ನೀಡುವಂತೆ ಪೊಲೀಸರಿಗೆ ಹೈಕೋರ್ಟ್ ಸೂಚನೆ

    June 20, 2026

    ರೈಲಿನಲ್ಲಿ ಇನ್ಮುಂದೆ ಈ ತಪ್ಪು ಮಾಡಿದ್ರೆ ಜೇಬಿಗೆ ಹೊರೆ; ರೈಲ್ವೆ ಇಲಾಖೆ ಕಠಿಣ ಕ್ರಮ

    June 20, 2026

    ಪೆಟ್ರೋಲ್ ಬಂಕ್ ಬಳಿ ಯೂಟರ್ನ್‌ ವೇಳೆ ಅಪಘಾತ; ಸ್ಕೂಟರ್ ಸವಾರನಿಗೆ ಗಂಭೀರ ಗಾಯ

    June 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.