Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»15 ಲಕ್ಷ ಸುಪಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹೇಶ್ ತಳವಾರ್ ಅರೆಸ್ಟ್
    ಇತ್ತೀಚಿನ ಸುದ್ದಿ

    15 ಲಕ್ಷ ಸುಪಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹೇಶ್ ತಳವಾರ್ ಅರೆಸ್ಟ್

    June 22, 2026
    Share

    ವಿಜಯಪುರ: ಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಮುಖ್ಯ ಆರೋಪಿ ಮಹೇಶ್ ತಳವಾರ್ ಮೇಲೆ ಫೈರಿಂಗ್ ನಡೆದಿದೆ.
    ಕಾಲಿಗೆ ಗುಂಡು ಹಾರಿಸಿ ಚಡಚಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಟ್ಟಿಂಗಿಹಾಳ ಗ್ರಾಮದ ಹೊರವಲಯದಲ್ಲಿ ಮಹೇಶ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಮಹೇಶನನ್ನ ಬಂಧಿಸಲು ಹೋದಾಗ ಓಡಿ ಹೋಗಲು ಯತ್ನಿಸಿದ ಮಹೇಶ್ ತಳವಾರ್ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಮೇಲೆ ಕೂಡ ದಾಳಿಗೆ ಯತ್ನಿಸಿದ್ದಾನೆ. ಆಗ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದ್ದಾರೆ. ಆದರೆ ಮಹೇಶ್ ಇದಕ್ಕೆ ಜಗ್ಗದೆ ಕಲ್ಲಿನ ದಾಳಿ ನಡೆಸಿದ್ದಾನೆ. ಹೀಗಾಗಿ ಕಾಲಿಗೆ ಗುಂಡು ಹಾರಿಸಿ ಮಹೇಶ್ ಬಂಧನ ಮಾಡಿದ್ದಾರೆ.


    ಮಹೇಶ್ ಬಲಗಾಲಿಗೆ ಚಡಚಣ ಸಿಪಿಐ ಪರಶುರಾಮ್ ಮನಗೂಳಿ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿ ಮಹೇಶ್‌ನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆ ವೇಳೆ ಚಡಚಣ ಠಾಣೆ ಸಿಬ್ಬಂದಿ ಶೇಖರ್ ಪವಾರ್, ವಿಜಯಕುಮಾರ್ ಬನಸೋಡೆಗೆ ಗಾಯಗಳಾಗಿವೆ. ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ಸಿಬ್ಬಂದಿಯನ್ನ ದಾಖಲಿಸಲಾಗಿದೆ.

    ಮೇ 29 ರಂದು ಭೀಮಾತೀರದ ಗೋವಿಂದಪುರ ಗ್ರಾಮ ಜಮೀನಿನಲ್ಲಿ ಚಡಚಣದ ನಿರಾಳೆ ಕುಟುಂಬ 5 ಜನ ಹಾಗೂ ಇನ್ನೋರ್ವ ಸೇರಿ 6 ಜನರ ಭೀಕರ ಹತ್ಯೆ ನಡೆದಿತ್ತು. ಕೊಲೆಗೆ ಆರೋಪಿ ಮಹೇಶ್ & ಗ್ಯಾಂಗ್ 15 ಲಕ್ಷಕ್ಕೆ ಸುಪಾರಿ ಪಡೆದಿತ್ತು. 6 ಜನರ ಸಾಮೂಹಿಕ ಹತ್ಯೆಗೆ ಮಹೇಶ್ ತಳವಾರ್ ಹುಡುಗರನ್ನ ಸೇರಿಸಿದ್ದ. ಕಳೆದ 23 ದಿನಗಳಿಂದ ಪೊಲೀಸರಿಂದ ತಪ್ಪಿಸಿಕೊಂಡು ಅಡ್ಡಾಡುತ್ತಿದ್ದ ಮಹೇಶ್ ಈಗ ಪೊಲೀಸ್ ಕೈಗೆ ಸಿಕ್ಕಿಬಿದ್ದಿದ್ದಾನೆ.

    Post Views: 116

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.