Facebook Twitter Instagram
    Monday, June 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಒಂಟಿಯಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಿದ ಆರ್‌ಪಿಎಫ್
    ಇತ್ತೀಚಿನ ಸುದ್ದಿ

    ಒಂಟಿಯಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಿದ ಆರ್‌ಪಿಎಫ್

    June 22, 2026
    Share

    ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪ್ರಯಾಣಿಕರ ಸುರಕ್ಷತೆ, ಮಕ್ಕಳ ರಕ್ಷಣೆ ಹಾಗೂ ಸಾರ್ವಜನಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ.
    “ಜನ-ಜಾಗರಣ” ಅಭಿಯಾನದ ಅಂಗವಾಗಿ 18.06.2026 ರಂದು ಚಿಕ್ಕಜಾಜೂರು ರೈಲು ನಿಲ್ದಾಣದಲ್ಲಿ ಹಾಗೂ ರೈಲು ಸಂಖ್ಯೆ 56519 ಕೆಎಸ್‌ಆರ್ ಬೆಂಗಳೂರು–ಹೊಸಪೇಟೆ ಪ್ಯಾಸೆಂಜರ್ ರೈಲಿನಲ್ಲಿ ಆರ್‌ಪಿಎಫ್ ಸಿಬ್ಬಂದಿ ಮತ್ತು ಸಿಗ್ನಲ್ ವಿಭಾಗದ ಸಿಬ್ಬಂದಿಗಳಿಂದ ಪ್ರಯಾಣಿಕರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು
    ಈ ಸಂದರ್ಭದಲ್ಲಿ ಅಪರಿಚಿತರಿಂದ ಆಹಾರ ಪದಾರ್ಥಗಳನ್ನು ಸ್ವೀಕರಿಸದಂತೆ, ತಮ್ಮ ಸಾಮಾನು-ಸರಂಜಾಮುಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಹಾಗೂ ಸರ ಕಳವು ಮತ್ತು ಇತರ ಕಳ್ಳತನಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಪ್ರಯಾಣಿಕರಿಗೆ ತಿಳಿಸಲಾಯಿತು.

    ಅದೇ ರೀತಿ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುವುದು, ರೈಲು ಹಳಿಗಳನ್ನು ಅಕ್ರಮವಾಗಿ ದಾಟುವುದು ಹಾಗೂ ಸುಲಭವಾಗಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ರೈಲಿನಲ್ಲಿ ಸಾಗಿಸುವುದರಿಂದ ಉಂಟಾಗುವ ಅಪಾಯಗಳ ಕುರಿತು ಅರಿವು ಮೂಡಿಸಲಾಯಿತು. ಯಾವುದೇ ಸಹಾಯ ಅಥವಾ ತುರ್ತು ಸಂದರ್ಭಗಳಲ್ಲಿ ರೈಲ್ವೆ ಸಹಾಯವಾಣಿ ಸಂಖ್ಯೆ 139 ಅನ್ನು ಬಳಸುವಂತೆ ಸಲಹೆ ನೀಡಲಾಯಿತು.

    ನನ್ಹೆ ಫರಿಶ್ತೆ – ಇಬ್ಬರು ಮಕ್ಕಳ ರಕ್ಷಣೆ
    ” ನನ್ಹೆ ಫರಿಶ್ತೆ ” ಯೋಜನೆಯಡಿ ಆರ್‌ಪಿಎಫ್ ಅರಸೀಕೆರೆ ತಂಡವು 21.06.2026 ರಂದು ರೈಲು ಸಂಖ್ಯೆ 17309ರಲ್ಲಿ ಯಾವುದೇ ಪ್ರಯಾಣದ ದಾಖಲೆಗಳಿಲ್ಲದೆ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಲಾಯಿತು.

    ರೈಲು ಸಂಖ್ಯೆ 17309ರ ಎಸ್-8 ಬೋಗಿಯಲ್ಲಿ ಇಬ್ಬರು ಮಕ್ಕಳು ಪ್ರಯಾಣಿಸುತ್ತಿರುವ ಕುರಿತು ಮೈಸೂರು ವಿಭಾಗೀಯ ಭದ್ರತಾ ನಿಯಂತ್ರಣ ಕೊಠಡಿಯಿಂದ ಮಾಹಿತಿ ಬಂದ ತಕ್ಷಣ, ಅರಸೀಕೆರೆ ಆರ್‌ಪಿಎಫ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿ ರೈಲಿಗೆ ತೆರಳಿ ಮಕ್ಕಳನ್ನು ಸುರಕ್ಷಿತ ವಶಕ್ಕೆ ಪಡೆದರು.

    ವಿಚಾರಣೆ ವೇಳೆ, 11 ಮತ್ತು 12 ವರ್ಷದ ಈ ಮಕ್ಕಳು ತುಮಕೂರಿನ ಶಾಲೆಯೊಂದರ ವಸತಿ ನಿಲಯದಲ್ಲಿ ವಾಸವಾಗಿದ್ದು, ಮೊಹರಂ ರಜೆ ಹಿನ್ನೆಲೆಯಲ್ಲಿ ತಮ್ಮ ಸಹಪಾಠಿಗಳು ಮನೆಗೆ ತೆರಳಿದ್ದರೂ ತಮ್ಮ ಪೋಷಕರು ಕರೆದುಕೊಂಡು ಹೋಗಲು ಬರದ ಕಾರಣ ಬೇಸರಗೊಂಡು ಶಾಲೆಯ ಕಾಂಪೌಂಡ್ ಗೋಡೆಯನ್ನು ಹಾರಿ ಹೊರಬಂದು ಹುಬ್ಬಳ್ಳಿಯ ಕಡೆಗೆ ಹೋಗುವ ಉದ್ದೇಶದಿಂದ ರೈಲು ಹತ್ತಿದ್ದಾಗಿ ತಿಳಿಸಿದರು.

    ನಂತರ ಕಾನೂನು ಮತ್ತು ರಕ್ಷಣಾತ್ಮಕ ಕ್ರಮಗಳನ್ನು ಅನುಸರಿಸಿ, ಮಕ್ಕಳನ್ನು ಅರಸೀಕೆರೆ ಘಟಕದ ಮೂಲಕ ಹಾಸನ ಜಿಲ್ಲಾ ಮಕ್ಕಳ ರಕ್ಷಣಾ ಘಟಕ/ ಚೈಲ್ಡ್‌ಲೈನ್ ಅಧಿಕಾರಿಗಳಿಗೆ ಸೂಕ್ತ ದಾಖಲೆಗಳೊಂದಿಗೆ ಹಾಗೂ ರೈಲ್ವೆ ಅಧಿಕಾರಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಮುಂದಿನ ಆರೈಕೆ, ಸಮಾಲೋಚನೆ ಹಾಗೂ ಪುನರ್ವಸತಿ ಕ್ರಮಗಳನ್ನು ಸಂಬಂಧಿತ ಇಲಾಖೆ ಕೈಗೊಳ್ಳಲಿದೆ.

    ಆರ್‌ಪಿಎಫ್ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಮಕ್ಕಳು ಸುರಕ್ಷಿತವಾಗಿದ್ದು, ಯಾವುದೇ ಅನಾಹುತ ಅಥವಾ ಅಪಾಯ ಸಂಭವಿಸುವುದನ್ನು ತಡೆಯಲು ಸಾಧ್ಯವಾಯಿತು. ಪ್ರಯಾಣಿಕರ ಸುರಕ್ಷತೆ, ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳಲ್ಲಿ ಮೈಸೂರು ವಿಭಾಗದ ಆರ್‌ಪಿಎಫ್ ನಿರಂತರವಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ.

    Post Views: 1

    karnataka PoliceInvestigation

    Related Posts

    ಮಂಗಳೂರಿನಲ್ಲಿ ಹಸು ರಕ್ಷಣಾ ಕಾರ್ಯಾಚರಣೆ; ಬಾವಿಯಿಂದ ಸುರಕ್ಷಿತವಾಗಿ ಮೇಲೆತ್ತಿದ ತಂಡ

    June 22, 2026

    15 ಲಕ್ಷ ಸುಪಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹೇಶ್ ತಳವಾರ್ ಅರೆಸ್ಟ್

    June 22, 2026

    ಕೆಲಸಕ್ಕೆ ತೆರಳುತ್ತಿದ್ದ ಯುವಕನಿಗೆ ಅಪಘಾತ: ಲಾರಿ-ಬೈಕ್ ಢಿಕ್ಕಿಯಲ್ಲಿ ಸಾವು

    June 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಒಂಟಿಯಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಿದ ಆರ್‌ಪಿಎಫ್

    June 22, 2026

    ಮಂಗಳೂರಿನಲ್ಲಿ ಹಸು ರಕ್ಷಣಾ ಕಾರ್ಯಾಚರಣೆ; ಬಾವಿಯಿಂದ ಸುರಕ್ಷಿತವಾಗಿ ಮೇಲೆತ್ತಿದ ತಂಡ

    June 22, 2026

    15 ಲಕ್ಷ ಸುಪಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹೇಶ್ ತಳವಾರ್ ಅರೆಸ್ಟ್

    June 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.