Facebook Twitter Instagram
    Tuesday, June 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ
    ಇತ್ತೀಚಿನ ಸುದ್ದಿ

    ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ

    June 23, 2026
    Share

    ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ.

    ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

    ಈ ಕುರಿತು ಮಾತನಾಡಿದ ರೋಹನ್ ಕಾರ್ಪೊರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರೋಹನ್ ಮೊಂತೇರೊ, “ಭಾರತದ ಅತ್ಯಂತ ಜನಪ್ರಿಯ ಕಲಾವಿದರಲ್ಲಿ ಒಬ್ಬರಾದ ಶಾರುಖ್ ಖಾನ್ ಅವರನ್ನು ಮಂಗಳೂರಿನ ನೆಲದಲ್ಲಿ ಸ್ವಾಗತಿಸುವ ಅವಕಾಶ ದೊರೆತಿರುವುದು ನಮಗೆ ಹೆಮ್ಮೆಯ ವಿಷಯ. ಈ ಕಾರ್ಯಕ್ರಮವು ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಕ್ಷಣವಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಗೂ ವಿಶಿಷ್ಟ ಅನುಭವವನ್ನು ನೀಡಲಿದೆ” ಎಂದು ಹೇಳಿದರು.

    ಕಾರ್ಯಕ್ರಮದ ಸಿದ್ದತೆಗಳ ಕುರಿತು ಮಾಹಿತಿ ನೀಡಿದ ಸಂಸ್ಥೆಯ ನಿರ್ದೇಶಕರಾದ ಶ್ರೀ ಡಿಯಾನ್ ಮೊಂತೇರೊ, “ಇದು ಮಂಗಳೂರಿನಲ್ಲಿ ನಡೆಯಲಿರುವ ಅತಿದೊಡ್ಡ ಕಾರ್ಪೊರೇಟ್ ಕಾರ್ಯಕ್ರಮಗಳಲ್ಲಿ ಒಂದಾಗಲಿದೆ. ನಮ್ಮ ಸಂಸ್ಥೆಗೆ ಮತ್ತು ನಗರಕ್ಕೆ ಮಹತ್ವದ ಕ್ಷಣವಾಗಿರುವ ಈ ಕಾರ್ಯಕ್ರಮವು ಸುರಕ್ಷಿತವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ’ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದ್ದು, ಅಧಿಕೃತವಾಗಿ ನೋಂದಾಯಿತ ಪಾಸ್‌ ಹೊಂದಿರುವವರಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

    ಶಾರುಖ್ ಖಾನ್ ಅವರ ಮಂಗಳೂರು ಭೇಟಿ ಘೋಷಣೆಯಾಗುತ್ತಿದ್ದಂತೆ ಕರಾವಳಿ ಭಾಗದಲ್ಲಿ ಅಪಾರ ಕುತೂಹಲ ಮತ್ತು ನಿರೀಕ್ಷೆ ಮೂಡಿದ್ದು, ಈ ಕಾರ್ಯಕ್ರಮವು ಮಂಗಳೂರಿನ ಕಾರ್ಪೊರೇಟ್ ಹಾಗೂ ಸಾಮಾಜಿಕ ವಲಯದಲ್ಲಿ ವಿಶೇಷ ಗಮನ ಸೆಳೆಯುವ ನಿರೀಕ್ಷೆಯಿದೆ.

    ರೋಹನ್ ಕಾರ್ಪೊರೇಶನ್ ಬಗ್ಗೆ

    ರೋಹನ್ ಕಾರ್ಪೊರೇಶನ್ ಕರಾವಳಿ ಕರ್ನಾಟಕದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾಗಿದ್ದು, ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಗ್ರಾಹಕರ ವಿಶ್ವಾಸವನ್ನು ತನ್ನ ಪ್ರಮುಖ ಮೌಲ್ಯಗಳಾಗಿ ಹೊಂದಿದೆ. ಸಂಸ್ಥೆಯು ಹಲವು ವಸತಿ ಹಾಗೂ ವಾಣಿಜ್ಯ ಯೋಜನೆಗಳ ಮೂಲಕ ತನ್ನದೇ ಆದ ಗುರುತನ್ನು ನಿರ್ಮಿಸಿಕೊಂಡಿದೆ.

    ಹೆಚ್ಚಿನ ಮಾಹಿತಿಗಾಗಿ 📞 : +91 90355 64026

    Post Views: 12

    Related Posts

    ಭೀಕರ ಅಗ್ನಿ ಅವಘಡಕ್ಕೆ ಕಠಿಣ ಕ್ರಮ: ಕೋಚಿಂಗ್ ಸೆಂಟರ್ ಮಾಲೀಕರು ಸೇರಿ ನಾಲ್ವರು ಬಂಧನ

    June 23, 2026

    ಲಿವ್-ಇನ್ ಸಂಬಂಧಕ್ಕೆ ವಿರೋಧ: ಪ್ರಿಯಕರನೊಂದಿಗೆ ಸೇರಿ ತಂದೆ-ತಾಯಿ, ತಂಗಿಯ ಹತ್ಯೆ

    June 23, 2026

    ಬಸ್‌ಗಾಗಿ ಕಾಯುತ್ತಿದ್ದವರ ಮೇಲೆ ಎರಗಿದ ಟಿಪ್ಪರ್ ಲಾರಿ: ಮಗು ಸೇರಿ ಮೂವರು ಸಾವು

    June 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಭೀಕರ ಅಗ್ನಿ ಅವಘಡಕ್ಕೆ ಕಠಿಣ ಕ್ರಮ: ಕೋಚಿಂಗ್ ಸೆಂಟರ್ ಮಾಲೀಕರು ಸೇರಿ ನಾಲ್ವರು ಬಂಧನ

    June 23, 2026

    ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ

    June 23, 2026

    ಲಿವ್-ಇನ್ ಸಂಬಂಧಕ್ಕೆ ವಿರೋಧ: ಪ್ರಿಯಕರನೊಂದಿಗೆ ಸೇರಿ ತಂದೆ-ತಾಯಿ, ತಂಗಿಯ ಹತ್ಯೆ

    June 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.