Facebook Twitter Instagram
    Wednesday, June 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಹೆಚ್ಚಿನ ಲಾಭದ ಆಸೆಗೆ ಬಿದ್ದು ₹3.5 ಲಕ್ಷ ಕಳೆದುಕೊಂಡ ಮಹಿಳೆ: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ
    ಕರಾವಳಿ ಸುದ್ದಿ

    ಹೆಚ್ಚಿನ ಲಾಭದ ಆಸೆಗೆ ಬಿದ್ದು ₹3.5 ಲಕ್ಷ ಕಳೆದುಕೊಂಡ ಮಹಿಳೆ: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ

    June 24, 2026
    Share

    ಹಿರಿಯಡ್ಕ : ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿ, ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಳೆದ ಎರಡು ತಿಂಗಳ ಹಿಂದೆ ಅಪರಿಚಿತರು ಸಾಮಾಜಿಕ ಜಾಲತಾಣ ಅಥವಾ ಸಂದೇಶದ ಮೂಲಕ ಸಂಪರ್ಕಿಸಿ, ‘Stake JP’ ಎಂಬ ವೆಬ್‌ಸೈಟ್ ಬಗ್ಗೆ ಮಾಹಿತಿ ನೀಡಿದ್ದರು. ಈ ವೆಬ್‌ಸೈಟ್‌ನಲ್ಲಿ ಹಣವನ್ನು ಡಿಪಾಸಿಟ್ ಮಾಡಿದರೆ ಹೆಚ್ಚಿನ ಹಣ ಬರುತ್ತದೆ ಎಂದು ನಂಬಿಕೆ ಬರುವಂತೆ ಮಾತನಾಡಿದ್ದರು.ವಂಚಕರ ಮಾತನ್ನು ನಂಬಿದ ಮಹಿಳೆ ಅವರು, ಹಂತ ಹಂತವಾಗಿ ಒಟ್ಟು ₹4,02,000 ಹಣವನ್ನು ಡಿಪಾಸಿಟ್ ಮಾಡಿದ್ದಾರೆ. ಆರಂಭದಲ್ಲಿ ವಂಚಕರು ನಂಬಿಕೆ ಹುಟ್ಟಿಸಲು ಅಲ್ಪಸ್ವಲ್ಪ ಹಣವನ್ನು ವಾಪಸ್ ನೀಡಿದ್ದಾರೆ. ಆದರೆ, ಹೆಚ್ಚಿನ ಹಣವನ್ನು ಜಮೆ ಮಾಡಿದ ಬಳಿಕ, ಯಾವುದೇ ಲಾಭ ನೀಡದೆ ಅಥವಾ ಜಮೆ ಮಾಡಿದ ಹಣವನ್ನು ಮರಳಿಸದೆ ಸತಾಯಿಸಿದ್ದಾರೆ. ಒಟ್ಟಾರೆಯಾಗಿ ಶೀಲಾವತಿ ಅವರು ₹3,50,000 ಹಣವನ್ನು ಕಳೆದುಕೊಂಡು ವಂಚನೆಗೆ ಒಳಗಾಗಿದ್ದಾರೆ.ಈ ಕುರಿತು ಮಹಿಳೆ ನೀಡಿದ ದೂರಿನ ಮೇರೆಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ (IT Act) ಪ್ರಕರಣ ದಾಖಲಾಗಿದೆ. ಅಪರಾಧ ಕ್ರಮಾಂಕ: 42/2026, ಕಲಂ: 66(D) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಾರ್ವಜನಿಕರು ಇಂತಹ ಅಪರಿಚಿತ ಲಿಂಕ್‌ಗಳನ್ನು ನಂಬಿ ಹಣ ಹೂಡಿಕೆ ಮಾಡದಂತೆ ಹಾಗೂ ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ಸೂಚಿಸಿದ್ದಾರೆ.

    Post Views: 13

    karnataka PoliceInvestigation

    Related Posts

    ಮಂಗಳೂರು: OLX ಮೂಲಕ ಐಷಾರಾಮಿ ಬೈಕ್ ಮೋಸ; ಹಣ ಕಳೆದುಕೊಂಡ ತಂದೆ-ಮಗ

    June 24, 2026

    17 ಕೋಟಿ ರೂ. ಮದುವೆ ಸಿದ್ಧತೆ ನಡುವೆಯೇ ಭಾವಿ ಪತಿಯನ್ನು ಕಂದಕಕ್ಕೆ ತಳ್ಳಿ ಕೊಂದ ವಧು

    June 24, 2026

    ಭೀಕರ ಅಗ್ನಿ ಅವಘಡಕ್ಕೆ ಕಠಿಣ ಕ್ರಮ: ಕೋಚಿಂಗ್ ಸೆಂಟರ್ ಮಾಲೀಕರು ಸೇರಿ ನಾಲ್ವರು ಬಂಧನ

    June 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: OLX ಮೂಲಕ ಐಷಾರಾಮಿ ಬೈಕ್ ಮೋಸ; ಹಣ ಕಳೆದುಕೊಂಡ ತಂದೆ-ಮಗ

    June 24, 2026

    17 ಕೋಟಿ ರೂ. ಮದುವೆ ಸಿದ್ಧತೆ ನಡುವೆಯೇ ಭಾವಿ ಪತಿಯನ್ನು ಕಂದಕಕ್ಕೆ ತಳ್ಳಿ ಕೊಂದ ವಧು

    June 24, 2026

    ಹೆಚ್ಚಿನ ಲಾಭದ ಆಸೆಗೆ ಬಿದ್ದು ₹3.5 ಲಕ್ಷ ಕಳೆದುಕೊಂಡ ಮಹಿಳೆ: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ

    June 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.