Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಉತ್ತರ ಪೊಲೀಸರಿಂದ ದೀರ್ಘಕಾಲ ವಾಂಟೆಡ್ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು ಉತ್ತರ ಪೊಲೀಸರಿಂದ ದೀರ್ಘಕಾಲ ವಾಂಟೆಡ್ ಆರೋಪಿ ಅರೆಸ್ಟ್

    June 25, 2026
    Share

    ಮಂಗಳೂರು: ಕಳವು ಪ್ರಕರಣದಲ್ಲಿ ಸುಮಾರು ಒಂದು ದಶಕದಿಂದ ತಲೆಮರೆಸಿಕೊಂಡು ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಂಪಾಡಿಯ ಕುಂತಲ್ಪಾಡಿ ನಿವಾಸಿ ಪ್ರಸಾದ್ (33) ಎಂದು ಗುರುತಿಸಲಾಗಿದೆ. ಆತ ಉದಯ ಪೂಜಾರಿ ಅವರ ಪುತ್ರನಾಗಿದ್ದಾನೆ.

    ಪೊಲೀಸರ ಮಾಹಿತಿ ಪ್ರಕಾರ, ಪ್ರಸಾದ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 289/2016 ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 379ರಡಿ ಕಳವು ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಯ ವೇಳೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಆರೋಪಿ ದೀರ್ಘಕಾಲ ಪತ್ತೆಯಾಗದ ಹಿನ್ನೆಲೆ, ನ್ಯಾಯಾಲಯವು ಪ್ರಕರಣವನ್ನು ಎಲ್‌ಪಿಸಿ ಎಂದು ಪರಿಗಣಿಸಿ ದಾಖಲಿಸಿತ್ತು.ತನಿಖೆ ವೇಳೆ ಪ್ರಸಾದ್ ವಿರುದ್ಧ ಹಿರಿಯಡ್ಕ, ಕೊಣಾಜೆ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ಸಹ ವಿವಿಧ ಪ್ರಕರಣಗಳು ದಾಖಲಾಗಿರುವ ಮಾಹಿತಿ ಪೊಲೀಸರಿಗೆ ಲಭಿಸಿದೆ. ಸುಮಾರು 10 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೂನ್ 24ರಂದು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪೊಲೀಸರ ನಿರಂತರ ಕಾರ್ಯಾಚರಣೆಯಿಂದ ದೀರ್ಘಕಾಲ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಕಾನೂನಿನ ಬಲೆಗೆ ಬಿದ್ದಿದ್ದಾನೆ.

    Post Views: 106

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.