Facebook Twitter Instagram
    Thursday, October 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಭೀಕರ ಅಪಘಾತ; ಮಂತ್ರಾಲಯಕ್ಕೆ ತೆರಳುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು
    ಇತ್ತೀಚಿನ ಸುದ್ದಿ

    ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಭೀಕರ ಅಪಘಾತ; ಮಂತ್ರಾಲಯಕ್ಕೆ ತೆರಳುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು

    June 27, 2026
    Share

    ಕೊಪ್ಪಳ: ಕುಕನೂರು ತಾಲೂಕಿನ ಭಾನಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

    ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಹಾಗೂ ಪ್ರವೀಣ್ (23) ಮೃತಪಟ್ಟ ದುರ್ದೈವಿಗಳು. ಇವರೆಲ್ಲರೂ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ಓಮಿನಿ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

    ಮಂತ್ರಾಲಯಕ್ಕೆ ಭಾನಾಪುರ ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ಪಕ್ಕದ ರಸ್ತೆಯಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ದಾಟಿದ ಲಾರಿ, ಎದುರು ದಿಕ್ಕಿನಿಂದ ಬರುತ್ತಿದ್ದ ಓಮಿನಿ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭೀಕರತೆಗೆ ಓಮಿನಿ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

    ಅಪಘಾತದ ಭೀಕರತೆ ಕಂಡು ಸ್ಥಳೀಯರು ಕಂಗಾಲಾಗಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಕುಕನೂರು ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದರು. ವಾಹನದಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆದು ತಕ್ಷಣವೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡ ಆರು ಜನರಲ್ಲಿ ಇಬ್ಬರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
    ಘಟನೆಗೆ ಸಂಬಂಧಿಸಿದಂತೆ ಕುಕನೂರು ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಚಾಲನೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

    Post Views: 116

    dakshina kannada PoliceInvestigation

    Related Posts

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.