Facebook Twitter Instagram
    Saturday, June 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ
    ಇತ್ತೀಚಿನ ಸುದ್ದಿ

    ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ

    June 27, 2026
    Share

    ಬೆಳ್ತಂಗಡಿ: ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ ಅಭ್ಯಾಸ ಬಹಳ ಮುಖ್ಯವಾಗಿದೆ. ಪಠ್ಯ ಅಧ್ಯಯನ, ಸೂಕ್ತ ಮಾರ್ಗದರ್ಶನ, ಅವೆಲ್ಲಕ್ಕಿಂತ ಮಿಗಿಲಾಗಿ ಸಂಶೋಧನಾತ್ಮಕ ಅಭ್ಯಾಸ ಅತ್ಯಗತ್ಯವಾಗಿದೆ ಎಂದು ಯುವ ಲೆಕ್ಕ ಪರಿಶೋಧಕಿ (ಸಿಎ) ನಿರೀಕ್ಷಾ ನಾವರ ಅಭಿಪ್ರಾಯ ಪಟ್ಟರು.

    ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜೂ.25 ರಂದು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಎಲ್ಲರೂ ಸಿಎ ಪರೀಕ್ಷೆ ಅತ್ಯಂತ ಕ್ಲಿಷ್ಟಕರ ಎಂಬ ಮಾತು ಹೇಳುತ್ತಾರೆ. ಆದರೆ ನಾನು ಕಂಡುಕೊಂಡಂತೆ ಸಿಎ ಪರೀಕ್ಷೆ ಕುರಿತು ಸುಧೀರ್ಘ ತಯಾರಿ ನಡೆಸಿದಲ್ಲಿ ಭವಿಷ್ಯದಲ್ಲಿ ನೀವು ಅಂದುಕೊಂಡ ಹಾದಿ ಸುಗಮವಾಗಿಸಬಹುದು. ಈ ನೆಲೆಯಲ್ಲಿ ನಮ್ಮ ಸುತ್ತಮುತ್ತ ಸೂಕ್ತ ಮನಸ್ಥಿತಿ, ಸಮರ್ಪಕ ಸಿದ್ಧತೆ ಹಾಗೂ ಸರಿಯಾದ ವ್ಯಕ್ತಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದರು.

    ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಸಾಧನೆ ವೇದಿಕೆ ಕಲ್ಪಿಸುವಲ್ಲಿ ವಿದ್ವತ್ ಎಲ್ಲ ರೀತಿಯ ಶೈಕ್ಷಣಿಕ ಉತ್ತೇಜನವನ್ನು ನೀಡುತ್ತಿದೆ. ಅದನ್ನು ಸದ್ಭಳಸಿಕೊಳ್ಳುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ. ಅವಕಾಶಗಳು ನಮ್ಮನ್ನು ಅರಸಿ ಬರುವುದಿಲ್ಲ, ಅವುಗಳನ್ನು ಅರಸಿ ನಾವುಗಳು ಅದಕ್ಕೆ ತಕ್ಕ ಪೂರ್ವತಯಾರಿ ನಡೆಸಬೇಕು ಎಂದು ಸಲಹೆ ನೀಡಿದರು.

    ಶೈಕ್ಷಣಿಕ ನಿರ್ದೇಶಕ ಗಂಗಾಧರ್ ಇ.ಎಂ. ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಆಪ್ತ ಸಮಾಲೋಚನೆ ನಡೆಸುವ ಮಾಡೆಲ್ ಕಾಲೇಜು ದ.ಕ. ಜಿಲ್ಲೆಯಲ್ಲಿ ಇದ್ದರೆ ಅದು ವಿದ್ವತ್ ಪಿಯು ಕಾಲೇಜು ಮಾತ್ರ. ಪ್ರತಿಯೊಬ್ಬರು ತಮ್ಮದೇ ಕಾರ್ಯಪ್ರವೃತ್ತಿಯಲ್ಲಿ ತಲ್ಲೀನರಾಗಿರುತ್ತಾರೆ. ಆದರೆ ವಿಚಾರ, ವಿಷಯಗಳು ಬೇರೆಯಾಗಿರುತ್ತವೆಯಷ್ಟೆ. ಕೆಟ್ಟ ಹವ್ಯಾಸಗಳತ್ತ ಆಕರ್ಷಣೆಗೊಳ್ಳದೆ, ಧನಾತ್ಮಕ ವಿಚಾರಗಳತ್ತ ಆಕರ್ಷಿತರಾದರೆ ನಿರೀಕ್ಷಾ ನಾವರ ಅವರಂತೆ ನೀವು ಸಾಧನೆ ಮಾಡಿ ನಿಮ್ಮ ಊರಿಗೆ, ದೇಶಕ್ಕೆ, ಹೆತ್ತವರಿಗೆ ಹೆಸರು ತರುವಿರಿ ಎಂದು ಕಿವಿಮಾತು ಹೇಳಿದರು.

    ಸಂಸ್ಥೆಯ ಕಾರ್ಯದರ್ಶಿ ಪ್ರಜ್ವಲ್ ರೈ, ಟ್ರಸ್ಟಿ ಕಾಶಿನಾಥ್ ಎಂ.ಕೆ., ಆಡಳಿತಾಧಿಕಾರಿ ಅಶೋಕ್ ಶೆಟ್ಟಿ, ವಾಣಿಜ್ಯ ವಿಭಾಗ ಮುಖ್ಯಸ್ಥೆ ಹಾಗೂ ಕಾರ್ಯಕ್ರಮ ಸಂಯೋಜಕಿ ಡಾ.ಮಹಿತಾ ಉಪಸ್ಥಿತರಿದ್ದರು.

    ವಿದ್ಯಾರ್ಥಿ ಸ್ಪಂದನ್ ಶೆಟ್ಟಿ ಸ್ವಾಗತಿಸಿದರು. ಮೈಲಾರ್ ಕಾಳಿಂಗೇಶ್ವರ್ ಚಿಳ್ಳಾಲೆ ಅತಿಥಿ ಪರಿಚಯ ಮಾಡಿದರು. ಬುವಿ ಎಸ್.ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

    ಮನೋಶಕ್ತಿಯೇ ಸಾಧನೆಯ ಸಿದ್ಧಹಾದಿ !

    ಇಂದಿನ ವಿದ್ಯಾರ್ಥಿಗಳು ಸವಾಲು ಎದುರಿಸಲು ಸಿದ್ಧರಿರುವುದಿಲ್ಲ. ಸವಾಲನ್ನು ಸ್ವೀಕರಿಸಲು ಸಿದ್ಧರಿಲ್ಲದವರು ನಿಮ್ಮ ಕನಸು ಸಾಕಾರಗೊಳಿಸಲು ಸಾಧ್ಯವಾಗುವುದಿಲ್ಲ.
    ಜೀವನದಲ್ಲಿ ಯಾವುದೂ ಸುಲಭವಿಲ್ಲ, ಅದೇ ರೀತಿ ಯಾವುದನ್ನು ಸಾಧಿಸಲು ಸಾಧ್ಯವಿಲ್ಲ ಎಂದಿಲ್ಲ. ಎಲ್ಲವನ್ನೂ ಸರಿಹಾದಿಗೆ ತರಬೇಕಾಗಿರುವುದು ನಮ್ಮ ಮನೋಶಕ್ತಿ. ಪ್ರತಿಯೊಬ್ಬರ ಸಾಮರ್ಥ್ಯ ಒಂದೇ ಆಗಿರುವುದಿಲ್ಲ, ಎಲ್ಲವೂ ಭಿನ್ನವಾಗಿರುತ್ತದೆ. ಇದು ನಿಮ್ಮ ಆಯ್ಕೆಯಾಗಿದೆ, ನಿಮ್ಮದೇ ಕನಸಾಗಿದೆ. ನನಸು ಮಾಡುವವರೆಗೆ ವಿರಮಿಸದಿರಿ.

    • ನಿರೀಕ್ಷಾ ನಾವರ, ಲೆಕ್ಕಪರಿಶೋಧಕಿ (ಸಿಎ)
    Post Views: 16

    Related Posts

    ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಹೃದಯಾಘಾತ: ಆಸ್ಪತ್ರೆಗೆ ಬಂದ ಕೆಲವೇ ಕ್ಷಣಗಳಲ್ಲಿ ಸಾವು

    June 27, 2026

    ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಭೀಕರ ಅಪಘಾತ; ಮಂತ್ರಾಲಯಕ್ಕೆ ತೆರಳುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು

    June 27, 2026

    ಅಂತ್ಯಕ್ರಿಯೆ ಮುಗಿದ ಬಳಿಕ ಜೀವಂತವಾಗಿ ‘ಪುನರ್ಜನ್ಮ’ದಂತೆ ಮನೆಗೆ ಮರಳಿದ ವ್ಯಕ್ತಿ

    June 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಹೃದಯಾಘಾತ: ಆಸ್ಪತ್ರೆಗೆ ಬಂದ ಕೆಲವೇ ಕ್ಷಣಗಳಲ್ಲಿ ಸಾವು

    June 27, 2026

    ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ

    June 27, 2026

    ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಭೀಕರ ಅಪಘಾತ; ಮಂತ್ರಾಲಯಕ್ಕೆ ತೆರಳುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು

    June 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.