Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೊಲೆ ಯತ್ನ ಪ್ರಕರಣ – ಆರೋಪಿಗಳಿಗೆ ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕೊಲೆ ಯತ್ನ ಪ್ರಕರಣ – ಆರೋಪಿಗಳಿಗೆ ಶಿಕ್ಷೆ

    September 10, 2022
    Share

    ಮಂಗಳೂರು: ಕೊಲೆ ಯತ್ನ ನಡೆಸಿದ ಆರೋಪಿಗಳಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

    ಜಾಗದ ತಕರಾರಿನ ದ್ವೇಷದಿಂದ ಮೂಡುಬಿದಿರೆ ತಾಲೂಕು ನಿಡ್ಡೋಡಿ ಗ್ರಾಮದ ಕೊಂಟಡ್ಕದಲ್ಲಿ ವಸಂತರಾಜ ಶೆಟ್ಟಿ ಅವರನ್ನು ಆರೋಪಿಗಳಾದ ಪ್ರಸನ್ನ ಕುಮಾರ್‌, ಜಯಂತಿ ಸುವರ್ಣ ಮತ್ತು ರಕ್ಷಾ ಸುವರ್ಣ ಕೊಲೆ ಮಾಡಲು ಯತ್ನಿಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.ಆರೋಪಿಗಳಿಗೆ ಭಾರತೀಯ ದಂಡ ಸಂಹಿತೆ ಕಲಂ 447ರಂತೆ ತಲಾ 500 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಒಂದು ವಾರದ ಸಾದಾ ಸಜೆ, ಕಲಂ 326ರಂತೆ 3 ವರ್ಷ ಸಾದಾ ಸಜೆ ಮತ್ತು ತಲಾ 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 15 ದಿನಗಳ ಸಾದಾ ಸಜೆ ವಿಧಿಸಿದ್ದಾರೆ. ಕಲಂ 504ರಡಿ 6 ತಿಂಗಳ ಸಜೆ ವಿಧಿಸಿದ್ದಾರೆ. ಕಲಂ 307ರಡಿ 3 ವರ್ಷಗಳ ಸಾದಾ ಸಜೆ ಮತ್ತು ತಲಾ 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ತಲಾ 1 ತಿಂಗಳು ಹೆಚ್ಚುವರಿ ಸಾದಾ ಸಜೆ ವಿಧಿಸಿದ್ದಾರೆ. ಸಂಗ್ರಹಿಸಲಾದ ಮೊತ್ತದಲ್ಲಿ ವಸಂತ ರಾಜ ಶೆಟ್ಟಿ ಅವರಿಗೆ 6,000 ರೂ. ಮೊತ್ತ ಪರಿಹಾರವಾಗಿ ನೀಡಲು ನ್ಯಾಯಾಧೀಶರು ಆದೇಶಿಸಿದ್ದಾರೆ.

    ಘಟನೆ ಏನಾಗಿತ್ತು?2020ರ ಫೆ. 28ರಂದು ಬೆಳಗ್ಗೆ ವಸಂತರಾಜ ಶೆಟ್ಟಿ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಅವರ ಮನೆಯ ಕಾಂಪೌಂಡ್‌ ಒಳಗೆ ಅಕ್ರಮವಾಗಿ ಪ್ರವೇಶಿಸಿದ ಆರೋಪಿಗಳು ಅವಾಚ್ಯ ಶಬ್ದಗಳಿಂದ ಬೈದು ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಕಲ್ಲುಗಳಿಂದಲೂ ಹೊಡೆದು ಹಲ್ಲೆ ನಡೆಸಿದ್ದರು. ಸಂಶಯಾತೀತವಾಗಿ ಹಲ್ಲೆ ರುಜು ಮೂಡುಬಿದಿರೆ ಪೊಲೀಸ್‌ ಉಪನಿರೀಕ್ಷಕರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದಲ್ಲಿ 2 ಮಂದಿ ಪ್ರತ್ಯಕ್ಷ ಸಾಕ್ಷಿದಾರರು ಅಭಿಯೋಜನೆ ಪಕ್ಷದ ಪರ ಸಾಕ್ಷಿ ನೀಡಿದ್ದು, ಆರೋಪಿಗಳು ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಿರುವುದು ಸಂಶಯಾತೀತವಾಗಿ ರುಜುವಾತಾಗಿದೆ ಎಂದು ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ತೀರ್ಪು ನೀಡಿದ್ದಾರೆ.ಪ್ರಕರಣದಲ್ಲಿ ಸರಕಾರದ ಪರ ಅಭಿಯೋಜಕ ನಾರಾಯಣ ಶೇರಿಗಾರ್‌ ಯು. ಅವರು ವಾದಿಸಿದ್ದಾರೆ.

    Post Views: 209

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.