ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಡಗದಾಲು ಗ್ರಾಮದಲ್ಲಿ ಸರ್ಕಾರದ ಪರವಾನಗಿಯಿಲ್ಲದೆ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ 28 ಮಂದಿಯನ್ನು ಕೊಡಗು ಜಿಲ್ಲಾ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಜುಲೈ 1ರಂದು ಮಂಡ್ಯ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಮೂಲದ 28 ಆರೋಪಿಗಳನ್ನು ವಶಕ್ಕೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಬಂಧಿತರಿಂದ ₹11,08,130 ನಗದು, 5 ಕಾರುಗಳು, 1 ದ್ವಿಚಕ್ರ ವಾಹನ ಹಾಗೂ 35 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಡಿ.ಎಸ್.ಪಿ. ಸೂರಜ್ ಪಿ.ಎಂ., ಪಿ.ಐ. ಚಂದ್ರಶೇಖರ್ ಎಚ್.ಎಂ. ಹಾಗೂ ಮಡಿಕೇರಿ ಉಪವಿಭಾಗದ ಅಪರಾಧ ತನಿಖೆ/ಪತ್ತೆ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿತು.




