Facebook Twitter Instagram
    Tuesday, July 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಕಾಂಬಿಕಾ ದೇವಸ್ಥಾನದಲ್ಲಿ ₹80 ಸಾವಿರ ಕಳ್ಳತನ; 24 ಗಂಟೆಯಲ್ಲಿ ಮೂವರು ಮಹಿಳಾ ಕಳ್ಳಿಯರ ಬಂಧನ
    ಇತ್ತೀಚಿನ ಸುದ್ದಿ

    ಮೂಕಾಂಬಿಕಾ ದೇವಸ್ಥಾನದಲ್ಲಿ ₹80 ಸಾವಿರ ಕಳ್ಳತನ; 24 ಗಂಟೆಯಲ್ಲಿ ಮೂವರು ಮಹಿಳಾ ಕಳ್ಳಿಯರ ಬಂಧನ

    July 7, 2026
    Share

    ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವುಗೊಂಡ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಿದ್ದಾರೆ.

    ಜುಲೈ 5ರಂದು ನಿಮಿಶಾ ಹಾಗೂ ಅವರ ಪತಿ ಪ್ರಜೋಶ್ ದೇವರ ದರ್ಶನ ಮುಗಿಸಿ ದೇವಸ್ಥಾನದ ಹೊರಾಂಗಣಕ್ಕೆ ಬಂದಾಗ, ನಿಮಿಶಾ ಅವರ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ಹೊಂದಿದ್ದ ಪರ್ಸ್ ಕಳವಾಗಿರುವುದು ಪತ್ತೆಯಾಯಿತು. ಸುತ್ತಮುತ್ತ ಹುಡುಕಿದರೂ ಪರ್ಸ್ ಪತ್ತೆಯಾಗದ ಹಿನ್ನೆಲೆಯಲ್ಲಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

    ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 43/2026, ಕಲಂ 303(2) BNS ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಯಿತು.

    ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಠಾಣೆಯ ಉಪನಿರೀಕ್ಷಕ ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ ತಂಡವು ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ತೆಗೆದ ಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಯ ನೆರವಿನಿಂದ ಆರೋಪಿಗಳಾದ ನೇತ್ರಾವತಿ (33), ಶಾರದ (50) ಮತ್ತು ದುರ್ಗಮ್ಮ (44) ಅವರನ್ನು ಪ್ರಕರಣ ದಾಖಲಾದ 24 ಗಂಟೆಯೊಳಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ತನಿಖೆಯಲ್ಲಿ ದುರ್ಗಮ್ಮ ವಿರುದ್ಧ ಈಗಾಗಲೇ ಮೈಸೂರು ಲಷ್ಕರ್ ಪೊಲೀಸ್ ಠಾಣೆ ಹಾಗೂ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಕಳ್ಳತನ ಪ್ರಕರಣ ಸೇರಿದಂತೆ ಒಟ್ಟು ಎರಡು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಶಾರದ ವಿರುದ್ಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಒಂದು ಕಳ್ಳತನ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ.

    ಪ್ರಕರಣವನ್ನು ಶೀಘ್ರವಾಗಿ ಭೇದಿಸಿದ ಪೊಲೀಸ್ ತಂಡದ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿಸಿದ್ದಾರೆ.

    Post Views: 8

    Related Posts

    ಉಡುಪಿ: ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ ಬೆದರಿಕೆ…!!

    July 7, 2026

    ಬೆಳ್ತಂಗಡಿ: ವಾರಂಟ್ ಬಂಧನ ಪ್ರಕರಣದಲ್ಲಿ ಲೋಪ-  ಹೆಡ್ ಕಾನ್‌ಸ್ಟೆಬಲ್ ಅಮಾನತು

    July 7, 2026

    ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಚೂರಿ ಇರಿತ ಪ್ರಕರಣ- ಆರೋಪಿ ಪೊಲೀಸ್ ಠಾಣೆಗೆ ಶರಣು

    July 6, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ ಬೆದರಿಕೆ…!!

    July 7, 2026

    ಮೂಕಾಂಬಿಕಾ ದೇವಸ್ಥಾನದಲ್ಲಿ ₹80 ಸಾವಿರ ಕಳ್ಳತನ; 24 ಗಂಟೆಯಲ್ಲಿ ಮೂವರು ಮಹಿಳಾ ಕಳ್ಳಿಯರ ಬಂಧನ

    July 7, 2026

    ಬೆಳ್ತಂಗಡಿ: ವಾರಂಟ್ ಬಂಧನ ಪ್ರಕರಣದಲ್ಲಿ ಲೋಪ-  ಹೆಡ್ ಕಾನ್‌ಸ್ಟೆಬಲ್ ಅಮಾನತು

    July 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.