Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯ ತಮ್ಮನಿಂದ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ 
    ಇತ್ತೀಚಿನ ಸುದ್ದಿ

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯ ತಮ್ಮನಿಂದ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ 

    September 11, 2022
    Share

    ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದು  ಜರುಗಿದೆ.

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್‌ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ ಘಟನೆ ಸೆ 10 ರಂದು ಬೆಳಿಗ್ಗೆ ಬೆಳ್ಳಾರೆಯಲ್ಲಿ ನಡೆದಿದೆ.

    ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್‌ ನ ಮ್ಯಾನೇಜರ್‌ ಪ್ರಶಾಂತ್‌ ರೈವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಶಫೀಕ್‌ ತಮ್ಮ, ಸಫ್ರಿದ್‌ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಈತ ದಿ. ಪ್ರವೀಣ್ ನೆಟ್ಟಾರ್ ಅವರ ಕೋಳಿ ಫಾರ್ಮ್‌ ನಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರ.

    ಸಂಜೆ ಪ್ರಶಾಂತ್ ರೈಯವರಿಗೆ ಕರೆ ಮಾಡಿರುವ ಸಫ್ರಿದ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದಾಗಿಯೂ, ಕೊಲ್ಲುವುದಾಗಿ ಬೆದರಿಸಿರುವುದಾಗಿಯೂ ಆರೋಪಿಸಲಾಗಿದೆ. ಈ ಬಗೆಗಿನ ಆಡಿಯೋ ರೆಕಾರ್ಡ್‌ ಪ್ರಶಾಂತ್ ಬಳಿ ಇದೆ ಎನ್ನಲಾಗುತ್ತಿದೆ. ಪ್ರಶಾಂತ್‌ ಅವರು ದೂರು ನೀಡಿರುತ್ತಾರೆ.

    Post Views: 193

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.