Facebook Twitter Instagram
    Friday, July 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿಗೆ ಕಠಿಣ ಜೈಲುಶಿಕ್ಷೆ, ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿಗೆ ಕಠಿಣ ಜೈಲುಶಿಕ್ಷೆ, ದಂಡ

    July 10, 2026
    Share

    ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಗುರುಪುರ ಸಮೀಪದ ಅಡ್ಡರು ಕೆಳಗಿನಕೆರೆ ನಿವಾಸಿ ಅಫ್ರೀದ್ ಯಾನೆ ಅಪ್ಪಿ(20) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್ ಸಿ -2 ಪೊಕ್ಸ್ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ಮತ್ತು 55 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

    ಬಂಟ್ವಾಳ ತಾಲೂಕಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ 17 ವರ್ಷ ಪ್ರಾಯದ ಬಾಲಕಿಗೆ ಕಾರು ಚಾಲಕನಾಗಿದ್ದ ಅಫ್ರೀದ್‌ನ ಪರಿಚಯವಾಗಿದೆ. ಬಳಿಕ ಮಾತುಕತೆ ಮಾಡುತ್ತಲೇ ಪ್ರೀತಿಸುವುದಾಗಿ ಹೇಳಿ. ಮದುವೆಯಾಗುವುದಾಗಿ ನಂಬಿಸಿದ್ದ. 2024ರ ಮೇ 27ರಂದು ಬಾಲಕಿಯು ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಬಲತ್ಕರಿಸಿದ್ದ. ಅಲ್ಲದೆ ಕೃತ್ಯದ ವೀಡಿಯೋ ಮಾಡಿರುವುದಾಗಿ ಹೇಳಿ ಮುಂದೆ ದೈಹಿಕ ಸಂಪರ್ಕಕ್ಕೆ ಒಪ್ಪದಿದ್ದರೆ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಸಿದ್ದ. ನಂತರ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೆ ಮದುವೆಯಾಗುವುದಿಲ್ಲ ಎಂದು ಹೇಳಿ ವಂಚಿಸಿದ್ದ. ಇದರಿಂದ ನೊಂದ ಬಾಲಕಿ ಮನೆಯಲ್ಲಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು ಅಸ್ವಸ್ಥಗೊಂಡ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್‌. ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

    ವಾದ-ಪ್ರತಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್ ಸಿ-2 ಪೊಕ್ಸೊ ನ್ಯಾಯಾಲಯದ ನ್ಯಾಯಾಧೀಶ ಮಾನು ಕೆ.ಎಸ್. ಶಿಕ್ಷೆ ವಿಧಿಸಿದ್ದಾರೆ. ಅಂದರೆ ಪೊಕ್ಸೊ ಕಾಯ್ದೆ ಕಲಂ 6 ಮತ್ತು ಐಪಿಸಿ ಕಲಂ ಸೆಕ್ಷನ್ 376 (2) (ಎನ್) ಅಡಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ದಂಡ,, ದಂಡ ಕಟ್ಟಲು ತಪ್ಪಿದಲ್ಲಿ 4 ತಿಂಗಳ ಸಾದಾಶಿಕ್ಷೆ ವಿಧಿಸಿದ್ದಾರೆ. ಐಪಿಸಿ ಕಲಂ 506 (ಬೆದರಿಕೆ)ರಡಿ 3 ತಿಂಗಳ ಸಾದಾ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ಹಾಗೂ ದಂಡ ತೆರಲು ತಪ್ಪಿದಲ್ಲಿ 15 ದಿನಗಳ ಸಾದಾ ಸಜೆ ಅನುಭವಿಸುವಂತೆ ಆದೇಶಿಸಿದ್ದಾರೆ.

    ದಂಡದ ಮೊತ್ತ 55 ಸಾವಿರ ರೂ.ವನ್ನು ಸಂತ್ರಸ್ತೆಗೆ ಪರಿಹಾರವಾಗಿ ಪಾವತಿಸಬೇಕು. ಅಲ್ಲದೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 5.45 ಲಕ್ಷ ರೂ. ವನ್ನು ಪರಿಹಾರವಾಗಿ ನೀಡುವಂತೆ ತಿಳಿಸಿದ್ದಾರೆ. ಸರಕಾರದ ಪರವಾಗಿ ಪೊಕ್ಸ್ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದ ಮಂಡಿಸಿದ್ದರು.

    Post Views: 6

    Related Posts

    ಉಡುಪಿ: ಶಾಲಾ ಬಸ್ ಪಲ್ಟಿ..!! ಓರ್ವ ವಿದ್ಯಾರ್ಥಿ ಗಂಭೀರ

    July 10, 2026

    ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆ..!!

    July 10, 2026

    ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ..!! ಆರು ಮಂದಿ ಪಾರು

    July 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಶಾಲಾ ಬಸ್ ಪಲ್ಟಿ..!! ಓರ್ವ ವಿದ್ಯಾರ್ಥಿ ಗಂಭೀರ

    July 10, 2026

    ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿಗೆ ಕಠಿಣ ಜೈಲುಶಿಕ್ಷೆ, ದಂಡ

    July 10, 2026

    ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆ..!!

    July 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.