Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ದರೋಡೆ ಪ್ರಕರಣ- 41 ಬಾರಿ ದಸ್ತಗಿರಿ ವಾರೆಂಟ್ ಅದೇಶವಾಗಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು: ದರೋಡೆ ಪ್ರಕರಣ- 41 ಬಾರಿ ದಸ್ತಗಿರಿ ವಾರೆಂಟ್ ಅದೇಶವಾಗಿದ್ದ ಆರೋಪಿಯ ಬಂಧನ

    July 10, 2026
    Share

    ಪುತ್ತೂರು: 2017ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    2017ರ ಡಿಸೆಂಬರ್ 22ರಂದು ಮೂವರು ಅಪರಿಚಿತರು ಮನೆಯೊಂದಕ್ಕೆ ನುಗ್ಗಿ ಪಿಸ್ತೂಲ್ ಹಾಗೂ ಚೂರಿ ತೋರಿಸಿ ಮನೆಯವರನ್ನು ಬೆದರಿಸಿ ಸುಮಾರು ₹2,88,000 ಅಂದಾಜು ಮೌಲ್ಯದ ಚಿನ್ನಾಭರಣ ಹಾಗೂ ₹60,0000 ನಗದು ದರೋಡೆ ಮಾಡಿದ್ದರು. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 200/2017ರಡಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ಆರೋಪಿ ಕೇರಳದ ತ್ರಿಶೂರ್ ನಿವಾಸಿ ನೆಲ್ಸನ್ ಸಿ.ವಿ. (38) 2021ರ ಆಗಸ್ಟ್ 27ರಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಇದುವರೆಗೆ 41 ಬಾರಿ ಬಂಧನ ವಾರಂಟ್ ಜಾರಿಯಾಗಿತ್ತು.

    ಜುಲೈ 8ರಂದು ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಎ., ಪೊಲೀಸ್ ಕಾನ್‌ಸ್ಟೇಬಲ್‌ಗಳಾದ ವಿನಾಯಕ ಹಾಗೂ ಶಿವರಾಜ್ ಅವರ ತಂಡ ಕೇರಳದ ತ್ರಿಶೂರ್ ಜಿಲ್ಲೆಯ ಮಿಯೂರಿನಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿತು.

    ಇದೇ ವೇಳೆ, ಆರೋಪಿ ಈ ಹಿಂದೆ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಜಾಮೀನು ಷರತ್ತುಗಳನ್ನು ಪದೇ ಪದೇ ಉಲ್ಲಂಘಿಸಿದ್ದರಿಂದ, ಆತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 80/2026ರಡಿ ಬಿಎನ್‌ಎಸ್-2023ರ ಕಲಂ 269ರಂತೆ ಮತ್ತೊಂದು ಪ್ರಕರಣವೂ ದಾಖಲಾಗಿದೆ.

    Post Views: 118

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.