Facebook Twitter Instagram
    Tuesday, July 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಾಲ್ವರು ಅಪ್ರಾಪ್ತರು ಸೇರಿ ಒಟ್ಟು 11 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ನಾಲ್ವರು ಅಪ್ರಾಪ್ತರು ಸೇರಿ ಒಟ್ಟು 11 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ

    July 14, 2026
    Share

    ಮಂಗಳೂರು: ಉರ್ವಾ ಠಾಣೆ ವ್ಯಾಪ್ತಿಯ ಕೋಡಿಕಲ್ ಮತ್ತು ಕುಂಟಿಕಾನದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಒಟ್ಟು 11 ಮಂದಿ ಬಾಂಗ್ಲಾ ನಿವಾಸಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ನಾಲ್ವರು ಅಪ್ರಾಪ್ತರು ಅನ್ನುವ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.

    ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿಗಳಾದ ಕೌಸರ್ ಅಲಿ (21), ನೂರ್ ಅಮೀನ್ (34), ನಹೀದುಲ್ ಇಸ್ಲಾಂ (22), ಹುಮಾಯೂನ್ ಕಬೀರ್ (22), ರಮ್ಯಾನ್ ಅಲಿ(23), ಅಬ್ದುಲ್ ರಹಮಾನ್ (19), ನೂಯಾನ್ (24) ಮತ್ತು ಇತರ ನಾಲ್ಕು ಮಂದಿ ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇವೆರಲ್ಲ ರಾಜಶಾಹಿ ಜಿಲ್ಲೆಯ ಒಂದೇ ಭಾಗದ ನಿವಾಸಿಗಳೆಂದು ಪೊಲೀಸರು ದೃಢಪಡಿಸಿದ್ದಾರೆ.

    ವಿದೇಶಿಗರ ಪ್ರಾದೇಶಿಕ ನೋಂದಣಿ ವಿಭಾಗಕ್ಕೆ ಮಾಹಿತಿ ನೀಡಲಾಗಿದ್ದು ಅವರನ್ನು ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಎಸ್‌ಐಆರ್ ಹಿನ್ನೆಲೆಯಲ್ಲಿ ಅಕ್ರಮವಾಗಿ ಕಟ್ಟಡ ಇನ್ನಿತರ ಕೆಲಸಗಳಿಗಾಗಿ ಬಂದು ಉಳಿಯುತ್ತಿರುವ ಕಾರ್ಮಿಕರ ಬಗ್ಗೆ ನಿಗಾ ಇಟ್ಟಿರುವ ಜನರು ಶಂಕೆಯ ಮೇರೆಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಬಂದು ಅಲ್ಲಿ ಸ್ಥಳೀಯ ಏಜಂಟರ ಮೂಲಕ ಅಕ್ರಮವಾಗಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಬಳಿಕ ಭಾರತದ ಇತರ ಕಡೆಗಳಿಗೆ ಕೆಲಸಗಳಿಗಾಗಿ ತೆರಳುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಮಂಗಳೂರಿಗೆ ಇವರನ್ನು ಕೆಲಸಕ್ಕೆ ಕಳಿಸಿಕೊಟ್ಟ ಏಜಂಟರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 9

    Related Posts

    ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ

    July 14, 2026

    ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಸುಪ್ರೀಂ ಅರ್ಜಿ ವಜಾ

    July 13, 2026

    ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

    July 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ

    July 14, 2026

    ಮಂಗಳೂರು: ನಾಲ್ವರು ಅಪ್ರಾಪ್ತರು ಸೇರಿ ಒಟ್ಟು 11 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ

    July 14, 2026

    ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಸುಪ್ರೀಂ ಅರ್ಜಿ ವಜಾ

    July 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.