Facebook Twitter Instagram
    Tuesday, July 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹೆದ್ದಾರಿಯಲ್ಲಿ ಯುವಕನ ವಿಚಿತ್ರ ವರ್ತನೆ- ಪೊಲೀಸರ ಮೇಲೆ ಕತ್ತಿ ಬೀಸಿದ ಯುವಕ ಅರೆಸ್ಟ್
    ಇತ್ತೀಚಿನ ಸುದ್ದಿ

    ಉಡುಪಿ: ಹೆದ್ದಾರಿಯಲ್ಲಿ ಯುವಕನ ವಿಚಿತ್ರ ವರ್ತನೆ- ಪೊಲೀಸರ ಮೇಲೆ ಕತ್ತಿ ಬೀಸಿದ ಯುವಕ ಅರೆಸ್ಟ್

    July 14, 2026
    Share

    ಉಡುಪಿ ಜಿಲ್ಲೆಯ ಕೋಟ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಯುವಕನೊಬ್ಬ ವಿಚಿತ್ರ ವರ್ತನೆಯ ಮೂಲಕ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ.

    ಬೆಲ್ಲದ ಗಣಪತಿ ದೇವಸ್ಥಾನ ಸಮೀಪ ನಿವಾಸಿಯಾಗಿರುವ ರಂಜಿತ್ ಸೋಮಯಾಜಿ (25) ಎಂಬಾತ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ ಎನ್ನಲಾಗಿದೆ. ಇದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ಕೆಲಕಾಲ ಗೊಂದಲಕ್ಕೊಳಗಾಗಿ ಆತಂಕ ವ್ಯಕ್ತಪಡಿಸಿದ್ದಾರೆ.

    ಉದ್ದನೆಯ ತಲೆಕೂದಲು ಹಾಗೂ ಗಡ್ಡ ಹೊಂದಿದ್ದ ಯುವಕನ ವರ್ತನೆ ಕಂಡು ಸ್ಥಳೀಯರು ತಕ್ಷಣ ಕೋಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ ವೇಳೆ, ಆರೋಪಿಯು ಕತ್ತಿ ಬೀಸಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

    ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ರಂಜಿತ್ ಸೋಮಯಾಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಆತನ ಮಾನಸಿಕ ಸ್ಥಿತಿಯ ಬಗ್ಗೆ ಅನುಮಾನ ವ್ಯಕ್ತವಾದರೂ, ಮಾನಸಿಕ ಚಿಕಿತ್ಸೆಗೆ ಒಳಗಾಗಿರುವ ಕುರಿತು ಯಾವುದೇ ಅಧಿಕೃತ ದಾಖಲೆಗಳು ಲಭ್ಯವಾಗದ ಕಾರಣ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಮುಂದುವರಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಕುರಿತು ಕೋಟ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    Post Views: 9

    Related Posts

    ಮಂಗಳೂರಿನಲ್ಲಿ ಬಾಂಗ್ಲಾ ವಲಸಿಗರ ಪತ್ತೆ ಪ್ರಕರಣ: ಮೂವರು ದಲ್ಲಾಳಿಗಳ ವಿರುದ್ಧ ಕೇಸ್..!!

    July 14, 2026

    ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವವಾಗಿ ಪತ್ತೆ!!

    July 14, 2026

    ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ

    July 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಬಾಂಗ್ಲಾ ವಲಸಿಗರ ಪತ್ತೆ ಪ್ರಕರಣ: ಮೂವರು ದಲ್ಲಾಳಿಗಳ ವಿರುದ್ಧ ಕೇಸ್..!!

    July 14, 2026

    ಉಡುಪಿ: ಹೆದ್ದಾರಿಯಲ್ಲಿ ಯುವಕನ ವಿಚಿತ್ರ ವರ್ತನೆ- ಪೊಲೀಸರ ಮೇಲೆ ಕತ್ತಿ ಬೀಸಿದ ಯುವಕ ಅರೆಸ್ಟ್

    July 14, 2026

    ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವವಾಗಿ ಪತ್ತೆ!!

    July 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.