Facebook Twitter Instagram
    Wednesday, July 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ 
    ಇತ್ತೀಚಿನ ಸುದ್ದಿ

    ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ 

    July 15, 2026
    Share

    ಮಂಗಳೂರು: ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಹುಪ್ರಕರಣಗಳ ಆರೋಪಿಯನ್ನು ಮಂಗಳೂರು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಬಂಧಿತ ಆರೋಪಿಯನ್ನು ಉಮ್ಮರ್ ಫಾರುಖ್ (ತಂದೆ: ದಿ. ಮೊಹಮ್ಮದ್ ಶರೀಫ್), ಶ್ರೀನಿವಾಸ್ ಕೇಬಲ್ ಆಪರೇಟರ್ ಸಮೀಪ, ಚಕ್ರವರ್ತಿ ಮೈದಾನ, ಕೃಷ್ಣಾಪುರ, ಸುರತ್ಕಲ್, ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ.

    ಆರೋಪಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 41/2019ರಲ್ಲಿ ಶಸ್ತ್ರಾಸ್ತ್ರ ಕಾಯ್ದೆ (Arms Act) ಕಲಂ 4, 25(1)(B)(b) ಹಾಗೂ ಭಾರತೀಯ ದಂಡ ಸಂಹಿತೆಯ 143, 147, 148, 115 ಮತ್ತು 120(ಬಿ) ಕಲಂಗಳಡಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

    ಈ ಹಿನ್ನೆಲೆಯಲ್ಲಿ ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಯ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು. ವಿಳಾಸ ಬದಲಾಯಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿಯ ಸುಳಿವು ಪತ್ತೆಹಚ್ಚಿದ ಕಂಕನಾಡಿ ನಗರ ಠಾಣೆಯ ಎಎಸ್‌ಐ ಜಗದೀಶ್, ಹೆಡ್ ಕಾನ್ಸ್‌ಟೇಬಲ್ ಬಾಲರಾಜ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ರವಿಕುಮಾರ್ ಅವರ ತಂಡವು ಜುಲೈ 14ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

    ಪೊಲೀಸರ ಮಾಹಿತಿ ಪ್ರಕಾರ, ಉಮ್ಮರ್ ಫಾರುಖ್ ವಿರುದ್ಧ ಮಂಗಳೂರು ನಗರ ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ದರೋಡೆ, ಮಾರಕಾಸ್ತ್ರ ಹೊಂದಿಕೆ, ಎನ್‌ಡಿಪಿಎಸ್ ಕಾಯ್ದೆ, ಗಲಭೆ, ಜೀವ ಬೆದರಿಕೆ ಸೇರಿದಂತೆ 10ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ.

    ಇವುಗಳಲ್ಲಿ ಕಾವೂರು, ಸುರತ್ಕಲ್, ಕಂಕನಾಡಿ ನಗರ, ಬರ್ಕೆ, ದಕ್ಷಿಣ ಪೊಲೀಸ್ ಠಾಣೆ, ಮಂಗಳೂರು ಗ್ರಾಮಾಂತರ, ಪಡುಬಿದ್ರೆ, ಕೆಟಿಪಿಎಸ್ ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರಕರಣಗಳು ಸೇರಿವೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

    Post Views: 11

    Related Posts

    ಮಂಗಳೂರು: ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ 23 ಲಕ್ಷ ಆನ್‌ಲೈನ್ ವಂಚನೆ!!

    July 15, 2026

    ಬೆಳ್ತಂಗಡಿ: ಅಂಗನವಾಡಿ ಕೇಂದ್ರದಲ್ಲಿ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿ ಗಂಭೀರ

    July 15, 2026

    ಮಂಗಳೂರು: ಅಪಾರ್ಟ್ ಮೆಂಟ್ 4ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ!!

    July 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ 23 ಲಕ್ಷ ಆನ್‌ಲೈನ್ ವಂಚನೆ!!

    July 15, 2026

    ಬೆಳ್ತಂಗಡಿ: ಅಂಗನವಾಡಿ ಕೇಂದ್ರದಲ್ಲಿ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿ ಗಂಭೀರ

    July 15, 2026

    ಮಂಗಳೂರು: ಅಪಾರ್ಟ್ ಮೆಂಟ್ 4ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ!!

    July 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.