Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»7 ಲಕ್ಷಕ್ಕೆ ಮಗಳನ್ನೇ ಮಾರಾಟ ಮಾಡಿದ ಪೋಷಕರು-ಚಿಕ್ಕಮಗಳೂರಿನ ಬೆಚ್ಚಿಬೀಳಿಸುವ ಆರೋಪ
    ಇತ್ತೀಚಿನ ಸುದ್ದಿ

    7 ಲಕ್ಷಕ್ಕೆ ಮಗಳನ್ನೇ ಮಾರಾಟ ಮಾಡಿದ ಪೋಷಕರು-ಚಿಕ್ಕಮಗಳೂರಿನ ಬೆಚ್ಚಿಬೀಳಿಸುವ ಆರೋಪ

    July 16, 2026
    Share

    ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹಕ್ಕಿಪಿಕ್ಕಿ ಕಾಲೋನಿಯ ಯುವತಿಯೊಬ್ಬಳನ್ನು ಹಣಕ್ಕಾಗಿ ಪೋಷಕರೇ ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘವು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

    ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯ ನಿವಾಸಿಗಳಾದ ಕ್ರಾಂತಿ ಹಾಗೂ ರಾಜಶೇಖರ್ ಅವರ ಪುತ್ರಿ ನಂದಿತಾ (20) ನಾಲ್ಕು ತಿಂಗಳ ಹಿಂದೆ ಕುಟುಂಬದೊಂದಿಗೆ ಗಿಡಮೂಲಿಕೆ ವ್ಯಾಪಾರದ ನೆಪದಲ್ಲಿ ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶಕ್ಕೆ ತೆರಳಿದ್ದರು.

    7 ಲಕ್ಷ ರೂ.ಗೆ ವೇಶ್ಯಾವಾಟಿಕೆ ದಂಧೆಗೆ ಮಾರಾಟ!

    ಸುಮಾರು 10 ದಿನಗಳ ಹಿಂದೆ ನಂದಿತಾಳನ್ನು 7 ಲಕ್ಷ ರೂಪಾಯಿಗೆ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ನಂದಿತಾ ಕಷ್ಟಪಟ್ಟು ಪರಿಚಯದವರನ್ನು ಸಂಪರ್ಕಿಸಿ, ತನ್ನನ್ನು ಪೋಷಕರೇ ಹಣಕ್ಕಾಗಿ ಮಾರಾಟ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಳು ಎನ್ನಲಾಗಿದೆ. ನಡೆದಿರುವ ಅನ್ಯಾಯವನ್ನು ವಿವರಿಸಿ ವಿಡಿಯೋ ಸಂದೇಶವನ್ನೂ ರವಾನಿಸಿದ್ದಳು ಎಂದು ಮೂಲಗಳು ತಿಳಿಸಿವೆ.

    ರಾಯಭಾರ ಕಚೇರಿ ನೆರವಿನಿಂದ ಯುವತಿಯ ರಕ್ಷಣೆ

    ಈ ಮಾಹಿತಿ ಭಾರತೀಯ ರಾಯಭಾರ ಕಚೇರಿ ಗಮನಕ್ಕೆ ಬಂದ ಬಳಿಕ, ಸ್ಥಳೀಯರ ಸಹಕಾರ ಮತ್ತು ಸೆನೆಗಲ್ ಪೊಲೀಸರ ನೆರವಿನಿಂದ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಇದೇ ವೇಳೆ, ಮಗಳನ್ನು ಭಾರತಕ್ಕೆ ಕಳುಹಿಸಲಾಗಿದೆ ಎಂದು ಹೇಳಿ ಪೋಷಕರು ಸಂಬಂಧಿಕರಿಗೆ ಬೇರೆ ಕಥೆ ಹೇಳಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಯುವತಿಯ ರಕ್ಷಣೆಯಾದ ವಿಷಯ ತಿಳಿದ ಬಳಿಕ ಪೋಷಕರು ಭಾರತಕ್ಕೆ ಮರಳಿರುವುದಾಗಿ ತಿಳಿದುಬಂದಿದೆ.

    ಹಕ್ಕಿಪಿಕ್ಕಿ ಬುಡಕಟ್ಟು ಸಂಘದದಿಂದ ಎಸ್​ಪಿಗೆ ಪತ್ರ

    ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘವು ಜುಲೈ 15ರಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯ್ಮಾ ಅವರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದೆ. ಗಿಡಮೂಲಿಕೆ ವ್ಯಾಪಾರದ ಹೆಸರಿನಲ್ಲಿ ಕ್ರಾಂತಿ ಹಾಗೂ ರಾಜಶೇಖರ್ ತಮ್ಮ ಮಗಳನ್ನು ಆಫ್ರಿಕಾದ ಸೆನೆಗಲ್ ದೇಶದಲ್ಲಿ ಮಾರಾಟ ಮಾಡಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದ್ದು, ಈ ಘಟನೆ ಹಕ್ಕಿಪಿಕ್ಕಿ ಸಮುದಾಯಕ್ಕೆ ಕಪ್ಪು ಚುಕ್ಕೆ. ಸಮಾಜದ ಗೌರವಕ್ಕೆ ಧಕ್ಕೆ ಉಂಟುಮಾಡಿದೆ ಎಂದು ಸಂಘ ಹೇಳಿದೆ. ಇಂತಹ ಕೃತ್ಯ ಎಸಗಿರುವ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೇರಿದಂತೆ ಅನ್ವಯವಾಗುವ ಕಾನೂನುಗಳಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

    ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಸತ್ಯಾಂಶವನ್ನು ಹೊರತಂದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸಂಘವು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.

    Post Views: 186

    karnataka PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.