Facebook Twitter Instagram
    Tuesday, July 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಎಂ.ಡಿ.ಎಂ.ಎ, ಹೈಡ್ರೋಗಾಂಜಾ ಮಾರಾಟ: ಮೂವರ ಬಂಧನ, ₹3.31 ಲಕ್ಷ ಮೌಲ್ಯದ ಸೊತ್ತು ವಶ
    ಇತ್ತೀಚಿನ ಸುದ್ದಿ

    ಎಂ.ಡಿ.ಎಂ.ಎ, ಹೈಡ್ರೋಗಾಂಜಾ ಮಾರಾಟ: ಮೂವರ ಬಂಧನ, ₹3.31 ಲಕ್ಷ ಮೌಲ್ಯದ ಸೊತ್ತು ವಶ

    July 20, 2026
    Share

    ಉಡುಪಿ: ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ (MDMA) ಪೌಡರ್, ಹೈಡ್ರೋಗಾಂಜಾ ಹಾಗೂ ಎಂಡಿಎಂಎ ಟ್ಯಾಬ್ಲೆಟ್ಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ₹3,31,500 ಮೌಲ್ಯದ ಮಾದಕ ವಸ್ತುಗಳು, ಕಾರು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಹಾಗೂ ಉಡುಪಿ ಸಂಚಾರ ಠಾಣೆಯ ಪಿಎಸ್ಐ ಮಹೇಶ್ ಟಿ.ಎಂ. ಅವರೊಂದಿಗೆ ಕಾರ್ಯಾಚರಣೆ ನಡೆಸಿದ ವಿಶೇಷ ತಂಡವು, ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಬುಡ್ನಾರ್ ಸಾರ್ವಜನಿಕ ಸ್ಥಳದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದೆ.

    ಬಂಧಿತ ಆರೋಪಿಗಳನ್ನು, ಉದ್ಯಾವರ ಪಿತ್ರೋಡಿ ನಿವಾಸಿ ದಿ. ಸದಾಶಿವ ಅವರ ಪುತ್ರ ವಿಜಯ ಪೂಜಾರಿ (36), ಕುಕ್ಕಂದೂರು ನಿವಾಸಿ ಎಂ ಡಿ ಅಬ್ದುಲ್ ಜಬ್ಬಾರ್ ಅವರ ಪುತ್ರ ಪಿ.ಎ. ಮೊಹಮ್ಮದ್ ಸಮ್ಮಾಸ್ (24), ಮತ್ತು ಮಿಯಾರು ಕುಂಟಿಬೈಲು ನಿವಾಸಿ ದಿ. ರಘು ಶೆಟ್ಟಿ ಅವರ ಪುತ್ರ ಆಕಾಶ್ ಶೆಟ್ಟಿ (20 ಎಂದು ಗುರುತಿಸಲಾಗಿದೆ.

    ಆರೋಪಿಗಳಿಂದ, 4 ಗ್ರಾಂ ಎಂಡಿಎಂಎ ಪೌಡರ್, 2.5 ಗ್ರಾಂ ಹೈಡ್ರೋಗಾಂಜಾ, 3.65 ಗ್ರಾಂ ಎಂಡಿಎಂಎ ಟ್ಯಾಬ್ಲೆಟ್, 3 ಗ್ರಾಂ ಗಾಂಜಾ, ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಒಂದು ಕಾರು, ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ವಶಪಡಿಸಿಕೊಂಡ ಸೊತ್ತಿನ ಮೌಲ್ಯ ₹3,31,500 ಎಂದು ಅಂದಾಜಿಸಲಾಗಿದೆ.

    ಆರೋಪಿಗಳು ಕಾಪು, ಉಡುಪಿ, ಮಣಿಪಾಲ ಹಾಗೂ ಕಾರ್ಕಳ ಭಾಗಗಳಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು ಎಂಬ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

    ಈ ಕಾರ್ಯಾಚರಣೆಯಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪ್ರವೀಣ್ ಕುಮಾರ್, ಹಿರಿಯಡ್ಕ ಪೊಲೀಸ್ ಠಾಣೆಯ ಪ್ರವೀಣ್ ಶೆಟ್ಟಿಗಾರ್, ಮಲ್ಪೆ ವೃತ್ತ ಕಚೇರಿಯ ಇಂದ್ರೇಶ್, ಹನುಮಂತ ಅಸ್ಕಿ, ಮನು ಕುಮಾರ್, ರಶ್ಮೀ ಹೆಗಡೆ, ರವಿ ಕುಮಾರ್ ಹಾಗೂ ಉಡುಪಿ ಸಂಚಾರ ಠಾಣೆಯ ಶ್ರೀನಿವಾಸ, ಸಂತೋಷ ಮತ್ತು ದಿನೇಶ್ ಅವರನ್ನೊಳಗೊಂಡ ವಿಶೇಷ ತಂಡ ಭಾಗವಹಿಸಿತ್ತು.

    Post Views: 44

    Related Posts

    ಮ್ಯಾಟ್ರಿಮೋನಿ ಆ್ಯಪ್‌ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಮಹಿಳೆ!!

    July 21, 2026

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026

    FIR ದಾಖಲಿಸುವುದಲ್ಲ, ಕೊಲೆಗಡುಕರನ್ನು ಪತ್ತೆಹಚ್ಚಿ ಜೈಲಿಗಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮ್ಯಾಟ್ರಿಮೋನಿ ಆ್ಯಪ್‌ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಮಹಿಳೆ!!

    July 21, 2026

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026

    FIR ದಾಖಲಿಸುವುದಲ್ಲ, ಕೊಲೆಗಡುಕರನ್ನು ಪತ್ತೆಹಚ್ಚಿ ಜೈಲಿಗಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

    July 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.