Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!
    ಇತ್ತೀಚಿನ ಸುದ್ದಿ

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    Share

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟ ಸಮೀಪದ ಪಡುಕರೆ ಬೀಚ್‌ನಲ್ಲಿ ಪತ್ತೆಯಾಗಿದೆ.

    ಶಿವಪುರ ಹೆಬ್ರಿ ನಿವಾಸಿ ಗ್ರೇಪ್ತಾ ಕ್ರಾಸ್ತಾ ಅವರ ಮಾವನ ಮಗ ಶಿವಪ್ರಸಾದ್ (27) ಅವರು ಜುಲೈ 20ರಂದು ನಾಪತ್ತೆಯಾಗಿದ್ದರು. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪೊಲೀಸರು ಹಾಗೂ ಕುಟುಂಬಸ್ಥರು ಯುವಕನಿಗಾಗಿ ಹುಡುಕಾಟ ನಡೆಸಿದಾಗ ಶಿವಪ್ರಸಾದ್ ಅವರು ಚಲಾಯಿಸುತ್ತಿದ್ದ ಬೈಕ್ ಬಾರ್ಕೂರು ಸೇತುವೆ ಸಮೀಪ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯವನ್ನು ಮತ್ತಷ್ಟು ತೀವ್ರಗೊಳಿಸಲಾಗಿತ್ತು.

    ಜುಲೈ 22, ಬೆಳಿಗ್ಗೆ ಸುಮಾರು 7.30 ಗಂಟೆಗೆ ಪಡುಕರೆ ಬೀಚ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಲಭಿಸಿತು. ಸ್ಥಳಕ್ಕೆ ಧಾವಿಸಿದ ಸಂಬಂಧಿಕರು ಮೃತದೇಹವನ್ನು ಪರಿಶೀಲಿಸಿದಾಗ, ಅದು ನಾಪತ್ತೆಯಾಗಿದ್ದ ಶಿವಪ್ರಸಾದ್ ಅವರದ್ದೇ ಎಂಬುದು ದೃಢಪಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಮೃತದೇಹವನ್ನು ಕೋಟ ಜೀವನ್ ಮಿತ್ರ ನಾಗರಾಜ್ ಪುತ್ರನ್ ಹಾಗೂ ಆಂಬುಲನ್ಸ್ ಚಾಲಕ ಕಿಶೋರ್ ಶೆಟ್ಟಿ ಸೇರಿ ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.

    Post Views: 5

    Related Posts

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.