Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026
    Share

    ಶ್ರೀಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಹಾಗೂ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಕುಂಬ್ಳೆ ನಿವಾಸಿ ಸುರೇಶ್ ಹಾಗೂ ಶಾಂತಿಯಂಗಡಿ ನಿವಾಸಿ ಅಬ್ದುಲ್ ರಝಾಕ್ ಬಂಧಿತರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

    ಕೆಲ ದಿನಗಳ ಹಿಂದೆ ದೇವಸ್ಥಾನದಲ್ಲಿ ಭಕ್ತರು ಸುಮಾರು ನಾಲ್ಕು ದಶಕಗಳಿಂದ ಸಮರ್ಪಿಸಿದ್ದ ತಾಮ್ರ ಹಾಗೂ ಪಿತ್ತಳದ ಪೂಜಾ ಪರಿಕರಗಳು ಕಳವಾಗಿರುವುದು ಬೆಳಕಿಗೆ ಬಂದಿತ್ತು. ಕಳವಾದ ವಸ್ತುಗಳಲ್ಲಿ ಹಳೆಯ ಕೊಪ್ಪರಿಗೆ, ಆರು ದೀಪಗಳು, ಸುಮಾರು 20 ಗಿಂಡೆಗಳು, ಹರಿವಾಣ ತಟ್ಟೆ, ಭಜನಾ ತಾಳ, ತಾಮ್ರದ ಕೊಡಪಾನ, ತಾಮ್ರದ ಅಕ್ಕಿ ಸೋಸುವ ಪಾತ್ರೆ ಸೇರಿದಂತೆ ಹಲವು ಪೂಜಾ ಸಾಮಗ್ರಿಗಳು ಸೇರಿದ್ದವು.

    ಘಟನೆಯ ಸಂದರ್ಭದಲ್ಲಿ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಮೂವರು ವ್ಯಕ್ತಿಗಳು ಗೋಣಿಯಲ್ಲಿ ಸಾಮಗ್ರಿಗಳನ್ನು ತುಂಬಿಕೊಂಡು ಸಾಗಿಸುತ್ತಿರುವ ದೃಶ್ಯಗಳು ಸೆರೆಯಾಗಿದ್ದವು. ಅಲ್ಲದೆ, ದೇವಸ್ಥಾನ ಆವರಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕೆಲವರನ್ನು ಸ್ಥಳೀಯರು ಪ್ರಶ್ನಿಸಿದಾಗ, ದೇವಸ್ಥಾನದ ಪರವಾಗಿ ಕೆಲಸಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿತ್ತು. ಬಳಿಕ ದೇವಸ್ಥಾನದ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ವಿಚಾರಿಸಿದಾಗ, ಅಂತಹ ಯಾವುದೇ ಕೆಲಸಕ್ಕೆ ಯಾರನ್ನೂ ನಿಯೋಜಿಸಿಲ್ಲ ಎಂಬುದು ತಿಳಿದುಬಂದಿತ್ತು.

    ಅನಂತರ ಸ್ಥಳೀಯರು ಪ್ರಶ್ನಿಸಿದಾಗ, ದೇವಸ್ಥಾನದ ಪರವಾಗಿ ಕೆಲಸಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿತ್ತು. ಬಳಿಕ ದೇವಸ್ಥಾನದ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ವಿಚಾರಿಸಿದಾಗ, ಅಂತಹ ಯಾವುದೇ ಕೆಲಸಕ್ಕೆ ಯಾರನ್ನೂ ನಿಯೋಜಿಸಿಲ್ಲ ಎಂಬುದು ತಿಳಿದುಬಂದಿತ್ತು.

    ದೇವಸ್ಥಾನದಲ್ಲಿ ಪರಿಶೀಲನೆ ನಡೆಸಿದಾಗ, ಅನ್ನಪಾತ್ರೆಗಳನ್ನು ಗೋಣಿಯಲ್ಲಿ ತುಂಬಿಸಿಟ್ಟಿರುವುದು ಹಾಗೂ ಗೋದ್ರೆಜ್ ಕಪಾಟುಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಶಂಕಿತರನ್ನು ಬಂಟ್ವಾಳ ನಗರ ಪೊಲೀಸ್‌ ಠಾಣೆಗೆ ಒಪ್ಪಿಸಿ ದೂರು ದಾಖಲಿಸಲಾಗಿತ್ತು.

    ಪ್ರಕರಣ ದಾಖಲಿಸಿಕೊಂಡ ಬಂಟ್ವಾಳ ನಗರ ಠಾಣೆ ಪೊಲೀಸರು ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಕಳವಾದ ಪೂಜಾ ಸಾಮಗ್ರಿಗಳ ಪತ್ತೆ ಹಾಗೂ ಪ್ರಕರಣದಲ್ಲಿ ಇತರರ ಭಾಗವಹಿಸುವಿಕೆ ಕುರಿತು ತನಿಖೆ ಮುಂದುವರಿದಿದೆ.

    Post Views: 1

    CrimeNews PoliceInvestigation

    Related Posts

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.