Facebook Twitter Instagram
    Thursday, July 30
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಹೆಸರು ಕೈಬಿಡಲು ನಿರ್ಧಾರ: ಚುನಾವಣಾ ಆಯೋಗದ ಮಹತ್ವದ ಮಾಹಿತಿ
    ಇತ್ತೀಚಿನ ಸುದ್ದಿ

    ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಹೆಸರು ಕೈಬಿಡಲು ನಿರ್ಧಾರ: ಚುನಾವಣಾ ಆಯೋಗದ ಮಹತ್ವದ ಮಾಹಿತಿ

    July 30, 2026
    Share

    ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಪ್ರಸ್ತುತ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಸುಕುಮಾ‌ರ್ ಅವರು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ ಹಂಚಿಕೊಂಡಿದ್ದಾರೆ.ಪ್ರತಿಯೊಬ್ಬ ಮತದಾರರ ಮನೆ ಬಾಗಿಲಿಗೆ ತೆರಳಿ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಡೆತ್ ಸರ್ಟಿಫಿಕೇಟ್ ಸಂಗ್ರಹಿಸುವುದರ ಜೊತೆಗೆ ಸಂಬಂಧಪಟ್ಟವರಿಂದ ಸಹಿ ಕೂಡ ಪಡೆಯಲಾಗಿದೆ.

    ಹೀಗಾಗಿ ಈ 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು ಪಟ್ಟಿಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಕರಡು ಪಟ್ಟಿಯಿಂದ ಕೈಬಿಡಲಾಗುತ್ತಿರುವ 84.31 ಲಕ್ಷ ಜನರ ವರ್ಗೀಕರಣ ಚುನಾವಣಾ ಆಯೋಗವು ಮೊದಲ ಕರಡು ಪಟ್ಟಿಯಿಂದ ಹೊರಗಿಡಲು ಗುರುತಿಸಿರುವ ಒಟ್ಟು 84,31,612 ಮತದಾರರಲ್ಲಿ ಶಾಶ್ವತವಾಗಿ ಸ್ಥಳಾಂತರಗೊಂಡವರ ಸಂಖ್ಯೆ ಅತ್ಯಂತ ಹೆಚ್ಚಿದ್ದು, ಬರೋಬ್ಬರಿ 51,74,968 ಈ ವ್ಯಾಪ್ತಿಗೆ ಬರುತ್ತಾರೆ. ಇನ್ನು 14,99,799 ಮೃತಪಟ್ಟ ಮತದಾರರನ್ನು ಗುರುತಿಸಲಾಗಿದ್ದು, 11,61,231 ಜನರು ಯಾವುದೇ ಸುಳಿವು ಸಿಗದೆ ನಾಪತ್ತೆಯಾಗಿರುವುದು ಕಂಡುಬಂದಿದೆ.

    ಇದರ ಜೊತೆಗೆ 5,62,572 ನಕಲಿ ಅಥವಾ ಎರಡೆರಡು ಕಡೆ ಮತ ಹಕ್ಕು ಹೊಂದಿರುವವರನ್ನು ಹಾಗೂ ಸಹಿ ಮಾಡಲು ನಿರಾಕರಿಸಿದ 33,042 ಇತರ ಜನರನ್ನು ಕರಡು ಪಟ್ಟಿಯಿಂದ ಹೊರಗಿಡಲು ಪಟ್ಟಿ ಮಾಡಲಾಗಿದೆ.

    Post Views: 9

    Related Posts

    ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣ: ಮೂವರ ಗುರುತು DNA ಪರೀಕ್ಷೆಯಿಂದ ದೃಢ

    July 30, 2026

    ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಮತ್ತು ಸುಮಾರು 30 ಜನರ ವಿರುದ್ಧ ಪ್ರಕರಣ ದಾಖಲು..!

    July 30, 2026

    ಬಂಟ್ವಾಳ: ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆಗೈದು, ಚಿನ್ನಾಭರಣ ದೋಚಿ, ಸಾಕ್ಷ್ಯನಾಶ ಪಡಿಸಿದ ಪ್ರಕರಣ- ಮೂವರಿಗೆ ಜೀವಾವಧಿ ಶಿಕ್ಷೆ

    July 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣ: ಮೂವರ ಗುರುತು DNA ಪರೀಕ್ಷೆಯಿಂದ ದೃಢ

    July 30, 2026

    ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಹೆಸರು ಕೈಬಿಡಲು ನಿರ್ಧಾರ: ಚುನಾವಣಾ ಆಯೋಗದ ಮಹತ್ವದ ಮಾಹಿತಿ

    July 30, 2026

    ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಮತ್ತು ಸುಮಾರು 30 ಜನರ ವಿರುದ್ಧ ಪ್ರಕರಣ ದಾಖಲು..!

    July 30, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.