Facebook Twitter Instagram
    Friday, July 31
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!!
    ಇತ್ತೀಚಿನ ಸುದ್ದಿ

    ಉಡುಪಿ: ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!!

    July 31, 2026
    Share

    ಕುಂದಾಪುರ: ವ್ಯಕ್ತಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಕುಂದಾಪುರದ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ನಡೆದಿದೆ.

    ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಗುಂಡೇಟಿಗೆ ಬಲಿಯಾದವರು.

    ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಅವರು ತಮ್ಮ ಮೊದಲ ಪತ್ನಿ ಸೆಲ್ಮಾ ಮಸ್ಕರೇನಸ್ ಅವರನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

    ಶುಕ್ರವಾರ ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬರು ಪಿಸ್ತೂಲ್‌ನಿಂದ ಐವನ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಗುಂಡೇಟಿನಿಂದ ತೀವ್ರ ರಕ್ತಸ್ರಾವಗೊಂಡ ಐವನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಜೊತೆಯಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

    ಐವನ್ ಅವರ ಕೊಲೆಗೆ ಹಣಕಾಸಿನ ವ್ಯವಹಾರ ಅಥವಾ ಇತರ ವ್ಯವಹಾರಿಕ ವಿಚಾರ ಕಾರಣವಾಗಿರಬಹುದೆಂಬ ಶಂಕೆ ಪ್ರಾಥಮಿಕ ತನಿಖೆಯಲ್ಲಿ ವ್ಯಕ್ತವಾಗಿದೆ. ಆದರೆ ಕೊಲೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

    ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್ಸ್‌ಪೆಕ್ಟರ್ ಜಯರಾಮ ಗೌಡ ಹಾಗೂ ಪಿಎಸ್ಐಗಳಾದ ನಂಜಾ ನಾಯ್ಕ್, ಪುಷ್ಪಾ, ಅನೂಪ್ ನಾಯಕ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

    ಸೋಕೋ ತಂಡವೂ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದೆ. ಈ ಕುರಿತು ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

    Post Views: 10

    Related Posts

    ಬೆಳ್ತಂಗಡಿ: ದುಬೈಗೆ ತೆರಳುವ ಮುನ್ನವೇ ಎಂಡಿಎಂಎ ಜಾಲದಲ್ಲಿ ಸಿಕ್ಕಿಬಿದ್ದ ಯುವಕ

    July 31, 2026

    ಆಗಸ್ಟ್ 7 ಮತ್ತು 8ರಂದು 16ನೇ ಆವೃತ್ತಿಯ ಆಳ್ವಾಸ ಪ್ರಗತಿ 2026

    July 30, 2026

    ಶಾಸಕ ಯಶ್ಫಾಲ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಕಾಂಗ್ರೇಸ್ ಕಾರ್ಯಕರ್ತರು ವಶಕ್ಕೆ

    July 30, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ದುಬೈಗೆ ತೆರಳುವ ಮುನ್ನವೇ ಎಂಡಿಎಂಎ ಜಾಲದಲ್ಲಿ ಸಿಕ್ಕಿಬಿದ್ದ ಯುವಕ

    July 31, 2026

    ಉಡುಪಿ: ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!!

    July 31, 2026

    ಆಗಸ್ಟ್ 7 ಮತ್ತು 8ರಂದು 16ನೇ ಆವೃತ್ತಿಯ ಆಳ್ವಾಸ ಪ್ರಗತಿ 2026

    July 30, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.