Facebook Twitter Instagram
    Monday, August 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಭಾರೀ ಮಳೆಯಿಂದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಭಾರೀ ಮಳೆಯಿಂದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

    August 3, 2026
    Share

    ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್ ಪಿಂಟೊ (48) ಅವರ ಮೃತದೇಹ ಸೋಮವಾರ ಬೆಳಗ್ಗೆ ಅರಳ ಗ್ರಾಮದ ಪಂಬದಗಡ್ಡೆ ಪ್ರದೇಶದಲ್ಲಿ ಪತ್ತೆಯಾಗಿದೆ.

    ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೊ ಅವರ ಪುತ್ರ ಜೀವನ್ ಪಿಂಟೊ ಅವರು ಶನಿವಾರ ರಾತ್ರಿ ನಾಪತ್ತೆಯಾಗಿದ್ದರು. ಘಟನಾ ಸ್ಥಳದ ಸಮೀಪ ತುಂಬಿ ಹರಿಯುತ್ತಿದ್ದ ಹಳ್ಳದ ಬಳಿ ಅವರ ಚಪ್ಪಲಿ ಹಾಗೂ ಟಾರ್ಚ್ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ, ಅವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿತ್ತು. ಘಟನೆಯ ಮಾಹಿತಿ ದೊರಕಿದ ತಕ್ಷಣ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ತಂಡಗಳು ರಾತ್ರಿ ವೇಳೆಯಿಂದಲೇ ನಿರಂತರ ಶೋಧ ಕಾರ್ಯಾಚರಣೆ ನಡೆಸಿದ್ದವು. ಭಾರಿ ಮಳೆ ಹಾಗೂ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾದರೂ ಶೋಧ ಮುಂದುವರಿಸಲಾಗಿತ್ತು. ಸೋಮವಾರ ಬೆಳಗ್ಗೆ ಅರಳ ಗ್ರಾಮದ ಪಂಬದಗಡ್ಡೆ ಸಮೀಪದ ನೀರಿನಲ್ಲಿ ಜೀವನ್ ಪಿಂಟೊ ಅವರ ಮೃತದೇಹ ಪತ್ತೆಯಾಗಿದೆ ಎಂದು ಎನ್‌ಡಿಆರ್‌ಎಫ್ ತಂಡ ಮಾಹಿತಿ ನೀಡಿದೆ. ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕಾನೂನು ಪ್ರಕ್ರಿಯೆಗಾಗಿ ಸಂಬಂಧಿತ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

    Post Views: 8

    Related Posts

    ಉಳ್ಳಾಲ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಆಘಾತ- ಲೈನ್‌ಮ್ಯಾನ್ ದುರ್ಮರಣ

    August 3, 2026

    ಮಂಗಳೂರು: 7 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಪೊಲೀಸ್ ವಶಕ್ಕೆ

    August 3, 2026

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಇನ್ಸ್‌ಪೆಕ್ಟರ್, ಡಿವೈಎಸ್‌ಪಿ ವರ್ಗಾವಣೆ ನಿಯಮ ಪರಿಷ್ಕರಣೆ, 5 ವರ್ಷಗಳ ‘Cooling period’ ಜಾರಿ

    August 3, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಆಘಾತ- ಲೈನ್‌ಮ್ಯಾನ್ ದುರ್ಮರಣ

    August 3, 2026

    ಬಂಟ್ವಾಳ: ಭಾರೀ ಮಳೆಯಿಂದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

    August 3, 2026

    ಮಂಗಳೂರು: 7 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಪೊಲೀಸ್ ವಶಕ್ಕೆ

    August 3, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.