Facebook Twitter Instagram
    Saturday, August 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕಾಂಗ್ರೆಸ್‌ ಮುಖಂಡ, ಉದ್ಯಮಿ ಡೇವಿಡ್‌ ಡಿಸೋಜಾ ಕೊಲೆ ಕೇಸ್: ಆರೋಪಿ ಕಾಲಿಗೆ ಗುಂಡೇಟು
    ಇತ್ತೀಚಿನ ಸುದ್ದಿ

    ಉಡುಪಿ: ಕಾಂಗ್ರೆಸ್‌ ಮುಖಂಡ, ಉದ್ಯಮಿ ಡೇವಿಡ್‌ ಡಿಸೋಜಾ ಕೊಲೆ ಕೇಸ್: ಆರೋಪಿ ಕಾಲಿಗೆ ಗುಂಡೇಟು

    August 8, 2026
    Share

    ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ರಾಜು ಎಂಬಾತನಿಗೆ ಪೊಲೀಸರು ಗುಂಡೇಟು ಹಾರಿಸಿರುವ ಘಟನೆ ಉಡುಪಿ ಜಿಲ್ಲೆಯ ಗಡಿಭಾಗದ ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ನಡೆದಿದೆ.

    ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು.

    ಆರೋಪಿಯನ್ನು ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಪೋಲಿಸರಿಗೆ ಹಲ್ಲೆ ನಡೆಸಿ ಅರೋಪಿ ರಾಜು ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಪು ಪಿಎಸ್ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ರಾಜುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನೆಯ ವೇಳೆ ಎಸ್ಐ ತೇಜಸ್ವಿ ಅವರಿಗೂ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಗೆ ಉಡುಪಿ ಎಸ್ ಹರಿರಾಮ್ ಶಂಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
    ಪೊಲೀಸರ ಕಾರ್ಯಾಚರಣೆ ವೇಳೆ ಪರಾರಿಯಾದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಹಾಗೂ ಶೋಧ ಕಾರ್ಯ ಮುಂದುವರಿಸಿದ್ದಾರೆ.

    ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ಚಲನವಲನದ ಕುರಿತು ತನಿಖೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.

    Post Views: 14

    Related Posts

    ಆಳ್ವಾಸ್ ಪ್ರಗತಿ 16ನೇ ಆವೃತ್ತಿಗೆ ಚಾಲನೆ: ಕೌಶಲ್ಯಾಭಿವೃದ್ಧಿ, ವೃತ್ತಿಪರ ಸಂಪರ್ಕ ಹಾಗೂ ಕೃತಕ ಬುದ್ಧಿಮತ್ತೆಯ ಜವಾಬ್ದಾರಿಯುತ ಬಳಕೆಗೆ ಒತ್ತು

    August 8, 2026

    ಪಡುಬಿದ್ರಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಹತ್ಯೆ

    August 7, 2026

    ಮಂಗಳೂರು: ಮಾದಕವಸ್ತು ಸೇವನೆ ಆರೋಪ- 6 ಮಂದಿಯ ಬಂಧನ

    August 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆಳ್ವಾಸ್ ಪ್ರಗತಿ 16ನೇ ಆವೃತ್ತಿಗೆ ಚಾಲನೆ: ಕೌಶಲ್ಯಾಭಿವೃದ್ಧಿ, ವೃತ್ತಿಪರ ಸಂಪರ್ಕ ಹಾಗೂ ಕೃತಕ ಬುದ್ಧಿಮತ್ತೆಯ ಜವಾಬ್ದಾರಿಯುತ ಬಳಕೆಗೆ ಒತ್ತು

    August 8, 2026

    ಉಡುಪಿ: ಕಾಂಗ್ರೆಸ್‌ ಮುಖಂಡ, ಉದ್ಯಮಿ ಡೇವಿಡ್‌ ಡಿಸೋಜಾ ಕೊಲೆ ಕೇಸ್: ಆರೋಪಿ ಕಾಲಿಗೆ ಗುಂಡೇಟು

    August 8, 2026

    ಪಡುಬಿದ್ರಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಹತ್ಯೆ

    August 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.