Facebook Twitter Instagram
    Thursday, August 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದೈವಸ್ಥಾನದ ಹುಂಡಿ ಕದ್ದ ಆರೋಪಿ ಅರೆಸ್ಟ್- 18 ಪ್ರಕರಣಗಳು ಬಯಲಿಗೆ
    ಇತ್ತೀಚಿನ ಸುದ್ದಿ

    ಮಂಗಳೂರು: ದೈವಸ್ಥಾನದ ಹುಂಡಿ ಕದ್ದ ಆರೋಪಿ ಅರೆಸ್ಟ್- 18 ಪ್ರಕರಣಗಳು ಬಯಲಿಗೆ

    August 12, 2026
    Share

    ಮಂಗಳೂರು: ದೈವಸ್ಥಾನದ ಬಾಗಿಲು ಹಾಗೂ ಕಿಟಕಿಯನ್ನು ಮುರಿದು ಒಳನುಗ್ಗಿ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು ₹15 ಸಾವಿರ ನಗದು ಕಳವು ಮಾಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

    ಆಗಸ್ಟ್ 5ರಂದು ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸುರತ್ಕಲ್ ಮಧ್ಯ ಕೊಡಿಪಾಡಿಯಲ್ಲಿರುವ ಕೋರ್ದಗಬ್ಬು ದೈವಸ್ಥಾನಕ್ಕೆ ನುಗ್ಗಿದ ಕಳ್ಳ, ಕಬ್ಬಿಣದ ಆಯುಧ ಬಳಸಿ ಬಾಗಿಲು ಮತ್ತು ಕಿಟಕಿಯನ್ನು ಮುರಿದು ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಹೋಗಿದ್ದನು. ಹುಂಡಿಯಲ್ಲಿದ್ದ ಸುಮಾರು ₹15 ಸಾವಿರ ನಗದು ಕಳವಾಗಿತ್ತು.ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದರು.

    ಆಗಸ್ಟ್ 10ರಂದು ಖಚಿತ ಮಾಹಿತಿಯ ಮೇರೆಗೆ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಉಡುಪಿ ತಾಲೂಕಿನ ಕುಕ್ಕಿಕಟ್ಟೆ ನಿವಾಸಿ ಸುಖೇಶ್ ನಾಯ್ಕ್ (40) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯವೆಸಗಿರುವುದನ್ನು ಒಪ್ಪಿಕೊಂಡಿದ್ದಾನೆ.ಆರೋಪಿಯನ್ನು ಆಗಸ್ಟ್ 11ರಂದು ಮಂಗಳೂರು ನಗರದ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

    ತನಿಖೆಯಲ್ಲಿ ಆರೋಪಿಯ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿರುವುದು ಹಾಗೂ ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿರುವುದು ತಿಳಿದುಬಂದಿದೆ. ಅಲ್ಲದೆ, ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ದಸ್ತಗಿರಿ ವಾರಂಟ್‌ಗಳಿರುವುದೂ ಪತ್ತೆಯಾಗಿದೆ.

    Post Views: 34

    Related Posts

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಕೃತ್ಯಕ್ಕಾಗಿ ಹಣ ವರ್ಗಾವಣೆಗೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳು ವಶಕ್ಕೆ

    August 13, 2026

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು

    August 13, 2026

    ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಬಂಧನ

    August 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಕೃತ್ಯಕ್ಕಾಗಿ ಹಣ ವರ್ಗಾವಣೆಗೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳು ವಶಕ್ಕೆ

    August 13, 2026

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು

    August 13, 2026

    ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಬಂಧನ

    August 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.