Facebook Twitter Instagram
    Thursday, August 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು

    August 13, 2026
    Share

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದಲ್ಲಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು ಕೆಲಸದ ನಿಮಿತ್ತ ಪರಿಚಯಸ್ಥರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನದತ್ತ ತೆರಳುತ್ತಿದ್ದರು. ಈ ವೇಳೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೊಕ್ಕಡ ಕಾಪಿನಬಾಗಿಲು ಬಳಿ ಕೆಲವರು ಕಾರನ್ನು ತಡೆದು, ಬಾಲಕಿಯ ಕುರಿತು ವಿಚಾರಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ದೂರಿನ ಆಧಾರದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಧನುಷ್ (23), ದಿನೇಶ್ (45), ಪೂರ್ಣಕ್ಷ ಬಿ. (40), ಸೂರಜ್ (25) ಹಾಗೂ ರಂಜಿತ್ ಬಂಡಾರಿ (29) ಎಂಬ ಐವರನ್ನು ವಶಕ್ಕೆ ಪಡೆದಿದ್ದಾರೆ.

    ಪ್ರತಿದೂರು ದಾಖಲು

    ಇದೇ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಾಯಿ ಕೂಡ ಪ್ರತಿದೂರು ನೀಡಿದ್ದಾರೆ. ಶೈಕ್ ಮುಕ್ತಾರ್ (52) ಎಂಬಾತ ತನ್ನ ಮಗಳನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಕರೆದುಕೊಂಡು ಹೋಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

    ಈ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ZERO FIR 03/2026 ದಾಖಲಿಸಿ, BNS ಕಲಂ 137(2)ರಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

    Post Views: 6

    Related Posts

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಕೃತ್ಯಕ್ಕಾಗಿ ಹಣ ವರ್ಗಾವಣೆಗೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳು ವಶಕ್ಕೆ

    August 13, 2026

    ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಬಂಧನ

    August 12, 2026

    ಸುರತ್ಕಲ್ ದೈವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ- ಆರೋಪಿ ಬಂಧನ

    August 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಕೃತ್ಯಕ್ಕಾಗಿ ಹಣ ವರ್ಗಾವಣೆಗೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳು ವಶಕ್ಕೆ

    August 13, 2026

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು

    August 13, 2026

    ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಬಂಧನ

    August 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.