ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರ ಮುಲ್ಕಿ ಪೊಲೀಸರು ಬಂಧಿಸಿ, ಕಳುವಾದ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಆಗಸ್ಟ್ 18 ರಂದು ಮಧ್ಯರಾತ್ರಿ ಆರೋಪಿ ದೇವಸ್ಥಾನದ ಮೇಲ್ಛಾವಣಿಯ ಜಾಲರಿ ಮೂಲಕ ಒಳನುಗ್ಗಿದ್ದಾನೆ. ಸಿಸಿ ಕ್ಯಾಮರಾವನ್ನು ತಿರುಗಿಸಿ ಕಾಣಿಕೆ ಡಬ್ಬಿಯ ಬೀಗ ಮುರಿದು ಹಣ ಕಳ್ಳತನ ಮಾಡಿದ್ದನು.ಈ ಕುರಿತು ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಕೊಡಗು ಜಿಲ್ಲೆಯ, ಮಡಿಕೇರಿ ತಾಲೂಕಿನ ಸಣ್ಣಪುಲಿಕೊಟ್ಟ ಗ್ರಾಮದ ನಿವಾಸಿ ರವಿಕುಮಾರ @ರವಿ ಹೆಚ್.ಜಿ ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ.
ಆರೋಪಿಯಿಂದ ಕಳವು ಮಾಡಿದ್ದ ಸುಮಾರು 2195 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಲ್ಕಿ ಠಾಣೆಯ ಪಿಎಸ್ಐ ಹಾಗೂ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ.
ಆರೋಪಿತನ ಮೇಲೆ ಈ ಕೆಳಗಿನಂತೆ ಪ್ರಕರಣ ದಾಖಲಾಗಿರುತ್ತದೆ.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 44/2024 ಕಲಂ: 457, 380 ಐಪಿಸಿ
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 148/2024 ಕಲಂ: 457, 380 ಐಪಿಸಿ
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 365/2024 ಕಲಂ: 303(2) ಬಿ.ಎನ್ಎಸ್ ಜೊತೆಗೆ 86 ಕೆ.ಎಫ್. ಆಕ್ಟ್,
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 386/2024 ಕಲಂ: 303(2) ಬಿ.ಎನ್.ಎಸ್ ಜೊತೆಗೆ 86 ಕೆ.ಎಫ್. ಆಕ್ಟ್
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 354/2024 ಕಲಂ: 331(3), 305 ಬಿ.ಎನ್.ಎಸ್




