Facebook Twitter Instagram
    Friday, August 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: 16ರ ಬಾಲಕಿಯನ್ನು ಹಿಂಬಾಲಿಸಿದ ಆರೋಪ- 47 ವರ್ಷದ ವ್ಯಕ್ತಿ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: 16ರ ಬಾಲಕಿಯನ್ನು ಹಿಂಬಾಲಿಸಿದ ಆರೋಪ- 47 ವರ್ಷದ ವ್ಯಕ್ತಿ ಪೊಲೀಸ್ ವಶಕ್ಕೆ

    August 21, 2026
    Share

    ಬಂಟ್ವಾಳ: ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯನ್ನು 47 ವರ್ಷದ ಅಪರಿಚಿತ ವ್ಯಕ್ತಿ ಹಿಂಬಾಲಿಸಿದ ಆರೋಪದ ಮೇಲೆ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಕಳೆದ ಕೆಲವು ದಿನಗಳಿಂದ ಬಾಲಕಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅಪರಿಚಿತ ಮಧ್ಯವಯಸ್ಕ ವ್ಯಕ್ತಿಯೊಬ್ಬ ಆಕೆಯನ್ನು ಹಿಂಬಾಲಿಸುತ್ತಿದ್ದ. ಆಗಸ್ಟ್ 19, 2026 ರ ಸಂಜೆ ಬಾಲಕಿ ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಾಗ, ಅದೇ ಅಪರಿಚಿತ ವ್ಯಕ್ತಿ ಆಕೆಯನ್ನು ಗಮನಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಭಯಗೊಂಡ ಬಾಲಕಿ ತಾಯಿ ಕೆಲಸ ಮಾಡುತ್ತಿದ್ದಲ್ಲಿಗೆ ಹೋಗಿ ತಿಳಿಸಿದ್ದಾಳೆ. ಬಳಿಕ ದೂರುದಾರರು ತನ್ನ ಕಛೇರಿಯ ಮಾಲಿಕರೊಂದಿಗೆ ಬಸ್ ನಿಲ್ದಾಣದ ಬಳಿ ಬಂದಾಗ ಅಪರಿಚಿತ ವ್ಯಕ್ತಿ ಅಲ್ಲಿದ್ದ ಎನ್ನಲಾಗಿದೆ. ಆತನನ್ನು ವಿಚಾರಿಸಿದಾಗ ತನ್ನ ಹೆಸರು ಜಯಂತ್ ಎಂಬುದಾಗಿ ತಿಳಿಸಿ ತೆರಳಿದ್ದಾನೆ.

    ದೂರಿನ ಆಧಾರದ ಮೇಲೆ, ಬಂಟ್ವಾಳ ಪಟ್ಟಣ ಪೊಲೀಸರು ಅಪರಾಧ ಸಂಖ್ಯೆ 116/2026 ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023 ರ ಸೆಕ್ಷನ್ 78 ಮತ್ತು 2012 ರ ಪೋಕ್ಸೋ ಕಾಯ್ದೆಯ ಸೆಕ್ಷನ್ 12 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು.

    ಬಂಟ್ವಾಳದ ಸರಪಾಡಿ ನಿವಾಸಿ ಜಯಂತ್ ಎಂದು ಗುರುತಿಸಲಾದ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು, ವಿಚಾರಣೆ ನಡೆಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

    Post Views: 11

    Related Posts

    ಸುಳ್ಯ: ಅರಣ್ಯ ಇಲಾಖೆ ಎಡವಟ್ಟು, ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಬೈಕ್ ಸವಾರನಿಗೆ ಗುಂಡು!

    August 21, 2026

    ಮುದರಂಗಡಿ ಡೇವಿಡ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

    August 21, 2026

    ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು

    August 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸುಳ್ಯ: ಅರಣ್ಯ ಇಲಾಖೆ ಎಡವಟ್ಟು, ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಬೈಕ್ ಸವಾರನಿಗೆ ಗುಂಡು!

    August 21, 2026

    ಬಂಟ್ವಾಳ: 16ರ ಬಾಲಕಿಯನ್ನು ಹಿಂಬಾಲಿಸಿದ ಆರೋಪ- 47 ವರ್ಷದ ವ್ಯಕ್ತಿ ಪೊಲೀಸ್ ವಶಕ್ಕೆ

    August 21, 2026

    ಮುದರಂಗಡಿ ಡೇವಿಡ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

    August 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.