Facebook Twitter Instagram
    Friday, August 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಅರಣ್ಯ ಇಲಾಖೆ ಎಡವಟ್ಟು, ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಬೈಕ್ ಸವಾರನಿಗೆ ಗುಂಡು!
    ಇತ್ತೀಚಿನ ಸುದ್ದಿ

    ಸುಳ್ಯ: ಅರಣ್ಯ ಇಲಾಖೆ ಎಡವಟ್ಟು, ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಬೈಕ್ ಸವಾರನಿಗೆ ಗುಂಡು!

    August 21, 2026
    Share

    ಸುಳ್ಯ: ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ಇಬ್ಬರಿಗೆ ತಗುಲಿದೆ. ಓರ್ವನಿಗೆ ಗಾಯವಾಗಿದ್ದು, ಮತ್ತೊಬ್ಬ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದ ಅರಣ್ಯ ಇಲಾಖೆ ಮತ್ತೆ ಎಡವಟ್ಟು ಮಾಡಿಕೊಂಡಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೆಂಗಮಲೆ ಎಂಬಲ್ಲಿ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡು ತಗುಲಿ ಬೈಕ್ ಸವಾರನೊಬ್ಬ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತೊಬ್ಬ ಸವಾರನ ಶರ್ಟ್ ಜೇಬಿನಲ್ಲಿದ್ದ ಮೊಬೈಲ್‌ಗೆ ಗುಂಡು ತಗುಲಿದ್ದು, ಆತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    ಸುಮಾರು ನಾಲ್ಕೈದು ದಿನಗಳ ಹಿಂದೆ ಐವರ್ನಾಡು ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ಕಾಡಾನೆಗಳನ್ನು ಓಡಿಸಲು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸಿಬ್ಬಂದಿ ಹಾರಿಸಿದ ಗುಂಡು, ಅದೇ ಮಾರ್ಗವಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ರಾಘವ ಪ್ರಭು ಎಂಬುವವರ ಕಾಲಿಗೆ ತಗುಲಿದೆ. ತಕ್ಷಣವೇ ಗಾಯಗೊಂಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅರಣ್ಯಾಧಿಕಾರಿಗಳೇ ಚಿಕಿತ್ಸಾ ವೆಚ್ಚವನ್ನು ಭರಿಸಿ ರಾಜಿ ಸಂಧಾನಕ್ಕೆ ಮುಂದಾಗಿದ್ದರಿಂದ ಅವರು ಯಾವುದೇ ಪೊಲೀಸ್ ದೂರು ದಾಖಲಿಸಿಲ್ಲ ಎನ್ನಲಾಗಿದೆ.

    ಜೀವ ಉಳಿಸಿದ ಮೊಬೈಲ್!

    ಇದೇ ಘಟನೆಯಲ್ಲಿ ಮತ್ತೊಬ್ಬ ಸವಾರ ಧನರಾಜ್ ಎಂಬುವವರು ಕೂದಲೆಳೆಯ ಅಂತರದಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗುಂಡಿನ ಚೂರು ನೇರವಾಗಿ ಧನರಾಜ್ ಅವರ ಎದೆಯ ಭಾಗಕ್ಕೆ ನುಗುತ್ತಿತ್ತು, ಆದರೆ ಶರ್ಟ್ ಜೇಬಿನಲ್ಲಿ ಇಟ್ಟುಕೊಂಡಿದ್ದ ಮೊಬೈಲ್‌ಗೆ ತಗುಲಿದೆ. ಇದರಿಂದ ಮೊಬೈಲ್​​ ಜಖಂಗೊಂಡಿದೆ. ಒಂದು ವೇಳೆ ಆ ಜಾಗದಲ್ಲಿ ಮೊಬೈಲ್ ಇಲ್ಲದಿದ್ದರೆ ಗುಂಡು ನೇರವಾಗಿ ಅವರ ಹೃದಯ ಭಾಗಕ್ಕೆ ತೂರಿ ಭಾರಿ ಅನಾಹುತವೇ ಸಂಭವಿಸುತ್ತಿತ್ತು. ಸದ್ಯ ಮೊಬೈಲ್‌ನಿಂದಾಗಿ ಜೀವ ಉಳಿದಿದ್ದು, ಅರಣ್ಯ ಇಲಾಖೆಯ ಈ ಅಜಾಗರೂಕತೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

    Post Views: 1

    Related Posts

    ಬಂಟ್ವಾಳ: 16ರ ಬಾಲಕಿಯನ್ನು ಹಿಂಬಾಲಿಸಿದ ಆರೋಪ- 47 ವರ್ಷದ ವ್ಯಕ್ತಿ ಪೊಲೀಸ್ ವಶಕ್ಕೆ

    August 21, 2026

    ಮುದರಂಗಡಿ ಡೇವಿಡ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

    August 21, 2026

    ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು

    August 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸುಳ್ಯ: ಅರಣ್ಯ ಇಲಾಖೆ ಎಡವಟ್ಟು, ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಬೈಕ್ ಸವಾರನಿಗೆ ಗುಂಡು!

    August 21, 2026

    ಬಂಟ್ವಾಳ: 16ರ ಬಾಲಕಿಯನ್ನು ಹಿಂಬಾಲಿಸಿದ ಆರೋಪ- 47 ವರ್ಷದ ವ್ಯಕ್ತಿ ಪೊಲೀಸ್ ವಶಕ್ಕೆ

    August 21, 2026

    ಮುದರಂಗಡಿ ಡೇವಿಡ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

    August 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.