Facebook Twitter Instagram
    Wednesday, August 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋ‌ರ್ ಪೂಜಾರಿಯಿಂದ ಸುಪಾರಿ -ಎಸ್ಪಿ ಹರಿರಾಮ್
    ಇತ್ತೀಚಿನ ಸುದ್ದಿ

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋ‌ರ್ ಪೂಜಾರಿಯಿಂದ ಸುಪಾರಿ -ಎಸ್ಪಿ ಹರಿರಾಮ್

    August 25, 2026
    Share

    ಉಡುಪಿ : ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ, ಉದ್ಯಮಿ, ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟ್‌ಔಟ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅದಾನಿ ಯುಪಿಸಿಎಲ್‌ನ ಗುತ್ತಿಗೆ ಕೈತಪ್ಪಿದ ಕಾರಣಕ್ಕಾಗಿ ಗುತ್ತಿಗೆದಾರ ಕಿಶೋ‌ರ್ ಪೂಜಾರಿ, ತನ್ನ ಸಹೋದರ ಭೂಗತ ಪಾತಕಿ ಹೇಮಂತ್ ಪೂಜಾರಿ ಮೂಲಕ ಈ ಕೃತ್ಯ ಎಸಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕ‌ರ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಶೂಟ್‌ಔಟ್ ಪ್ರಕರಣದ ಬೆಳವಣಿಗೆಯ ಮಾಹಿತಿಗಳನ್ನು ನೀಡಿದರು.

    ಉಚ್ಚಿಲ ನಿವಾಸಿ ಕಿಶೋರ್ ರಾಮ ಪೂಜಾರಿ ಈ ಹಿಂದೆ ಯುಪಿಸಿಎಲ್ ನಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದನು. ಆರು ತಿಂಗಳ ಹಿಂದೆ ಎರ್ಮಾಳಿನಲ್ಲಿ ಯುಪಿಸಿಎಲ್ ಕಂಪೆನಿಯ ಪೈಪ್‌ಲೈನ್ ಮತ್ತು ಕಾಂಕ್ರಿಟ್ ರಸ್ತೆ ಕಾಮಗಾರಿ ಯೋಜನೆಯ ಗುತ್ತಿಗೆಯನ್ನು ತನಗೆ ನೀಡುವಂತೆ ಕಿಶೋರ್ ಪೂಜಾರಿ ಕೇಳಿ ಕೊಂಡಿದ್ದನು. ಅದಕ್ಕೆ ಕಂಪೆನಿಯವರು ಕೂಡ ಒಪ್ಪದೆ ಡೇವಿಡ್ ಡಿಸೋಜಗೆ ನೀಡಿದ್ದರು. ಈ ಕೋಟ್ಯಂತರ ರೂ. ಮೊತ್ತದ ಯೋಜನೆ ಕೈತಪ್ಪಿ ಹೋದ ಸಿಟ್ಟಿನಲ್ಲಿ ಕಿಶೋರ್ ಪೂಜಾರಿ, ಡೇವಿಡ್ ಡಿಸೋಜರನ್ನು ಕೊಲೆ ಮಾಡುವ ಈ ಕೃತ್ಯಕ್ಕೆ ಸಂಚು ರೂಪಿಸಿದ್ದಾನೆ.

    ಅಗಸ್ಟ್ 7ರಂದು ನಡೆದ ಕೃತ್ಯಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು, ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಆರೋಪಿ ಗಳಾದ ರಾಜು, ಅನ್ಮೋಲ್ ರಸ್ತೋಗಿ ಮತ್ತು ಜಿಯಾಹುಲ್ ಶೇಖ್‌ರನ್ನು ಬಂಧಿಸಿ, ಅನ್ಮೋಲ್ ಮತ್ತು ಜಿಯಾಹುಲ್‌ನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಯಿತು. ಈ ತನಿಖೆಯಿಂದ ಗುತ್ತಿಗೆಗೆ ಸಂಬಂಧಿಸಿ ಕೋಟ್ಯಂತರ ಹಣಕಾಸಿನ ವಿಚಾರವಾಗಿ ಇವರಿಬ್ಬರಿಗೆ ಡೀಲ್ ನೀಡಿರುವ ವಿಚಾರ ಬೆಳಕಿಗೆ ಬಂತು

    ಅಲ್ಲದೆ ಬಂಧಿತರ ಬ್ಯಾಂಕ್ ಖಾತೆ ಪರಿಶೀಲಿಸಿದಾಗ ಇವರ ಖಾತೆಗೆ ಮೊಹಮ್ಮದ್ ಇರ್ಷಾದ್, ಚಿರಾಗ್ ಪೂಜಾರಿ ಹಾಗೂ ಸದಾನಂದ ದೇವಾಡಿಗ ಹಣ ಜಮಾ ಮಾಡಿ ಕೃತ್ಯಕ್ಕೆ ಸಹಕರಿಸಿರುವುದು ಕಂಡುಬಂತು. ಅದರಂತೆ ಅವರನ್ನು ಬಂಧಿಸಿ, ತನಿಖೆ ಮುಂದುವರೆಸಿದಾಗ ಇವರೆಲ್ಲರಿಗೂ ಹಣಕಾಸಿನ ವ್ಯವಸ್ಥೆ ಮಾಡಿರುವುದು ಹಾಗೂ ಕೃತ್ಯಕ್ಕೆ ಸೂಪಾರಿ ನೀಡಿರುವುದು ಎರ್ಮಾಳಿನ ಗುತ್ತಿಗೆದಾರ ಕಿಶೋ‌ರ್ ಪೂಜಾರಿ ಎಂಬುದು ಪತ್ತೆಯಾಯಿತು ಎಂದು ಅವರು ತಿಳಿಸಿದರು.

    ಉತ್ತರ ಭಾರತದ ರಾಜ್ಯದಲ್ಲಿ ತನಿಖೆ ನಡೆಸುತ್ತಿದ್ದ ಪೊಲೀಸ್‌ ತಂಡ ಆರೋಪಿಗಳಿಗೆ ಹಣಕಾಸಿನ ವ್ಯವಸ್ಥೆ ಮಾಡಿರುವ ಬಿಹಾರದ ಸೂರಜ್ ಕುಮಾರ್ ಎಂಬಾತನನ್ನು
    ಉತ್ತರಖಾಂಡ್‌ನಲ್ಲಿ ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿತು. ಆಗ ಈ ಕೊಲೆಯಲ್ಲಿ ನೇರವಾಗಿ ಭಾಗಿಯಾಗಿರುವ ಮೂವರು ಶೂಟರ್‌ಗಳನ್ನು ವ್ಯವಸ್ಥೆ ಮಾಡಿರುವ ಅನೂಜ್ ಬಗ್ಗೆ ಮಾಹಿತಿ ದೊರೆತಿದೆ.

    Post Views: 38

    Related Posts

    ಪುತ್ತೂರು: ಆಸಿಡ್ ದಾಳಿ ಪ್ರಕರಣ- ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

    August 26, 2026

    ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಣೆ ಜಾಲ ಪತ್ತೆ- ಇಬ್ಬರು ಅರೆಸ್ಟ್

    August 25, 2026

    ಉಡುಪಿ: ಮಲ್ಪೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನ ಕೊಲೆ-ಆರೋಪಿಯ ಬಂಧನ

    August 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಆಸಿಡ್ ದಾಳಿ ಪ್ರಕರಣ- ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

    August 26, 2026

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋ‌ರ್ ಪೂಜಾರಿಯಿಂದ ಸುಪಾರಿ -ಎಸ್ಪಿ ಹರಿರಾಮ್

    August 25, 2026

    ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಣೆ ಜಾಲ ಪತ್ತೆ- ಇಬ್ಬರು ಅರೆಸ್ಟ್

    August 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.