Facebook Twitter Instagram
    Friday, August 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲೈಸೆನ್ಸ್ ಇಲ್ಲದೆ ಬಸ್ ಚಾಲನೆ -ಚಾಲಕ, ಮಾಲಕನಿಗೆ ಜೈಲು ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಲೈಸೆನ್ಸ್ ಇಲ್ಲದೆ ಬಸ್ ಚಾಲನೆ -ಚಾಲಕ, ಮಾಲಕನಿಗೆ ಜೈಲು ಶಿಕ್ಷೆ

    August 27, 2026
    Share

    ಮಂಗಳೂರು : ಚಾಲನಾ ಅನುಜ್ಞಾ ಪತ್ರ (ಲೈಸೆನ್ಸ್) ಇಲ್ಲದೆ ಬಸ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಪ್ರಕರಣದಲ್ಲಿ ಬಸ್ ಚಾಲಕ ಹಾಗೂ ಮಾಲಕನಿಗೆ ಮಂಗಳೂರು ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

    2024ರ ಜುಲೈ 10ರಂದು ನಗರದ ಬೆಂದೂರ್‌ವೆಲ್ ಜಂಕ್ಷನ್ ಬಳಿ 66 ವರ್ಷದ ಸುಂದರಿ ಎಂಬವರು ಶಕ್ತಿನಗರಕ್ಕೆ ತೆರಳುವ ಬಸ್ ಹತ್ತಲು ರಸ್ತೆ ದಾಟುತ್ತಿದ್ದ ವೇಳೆ ಕರಾವಳಿ ವೃತ್ತದ ಕಡೆಯಿಂದ ಸ್ಟೇಟ್‌ಬ್ಯಾಂಕ್‌ ಕಡೆಗೆ ತೆರಳುತ್ತಿದ್ದ ಬಸ್ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಸುಂದರಿ ಅವರ ಬಲಕಾಲಿನ ಮೇಲೆ ಬಸ್ ಹರಿದಿತ್ತು.ಈ ಕುರಿತು ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಬಸ್ ಚಾಲಕ ನಿಶಿತ್ ಶೆಟ್ಟಿಗೆ ಚಾಲನಾ ಪರವಾನಗಿ ಇಲ್ಲದಿರುವುದನ್ನು ಪತ್ತೆಹಚ್ಚಿದ್ದರು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಹೆಡ್‌ಕಾನ್‌ಸ್ಟೆಬಲ್‌ ಲಕ್ಷ್ಮಿಕಾಂತ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಜೆಎಂಎಫ್‌ಸಿ 8ನೇ ನ್ಯಾಯಾಲಯದ ನ್ಯಾಯಾಧೀಶೆ ಮೋನಿಷಾ ಆರ್. ಅವರು, ಲೈಸೆನ್ಸ್ ಇಲ್ಲದೆ ಬಸ್ ಚಲಾಯಿಸಿದ್ದಕ್ಕಾಗಿ ಚಾಲಕ ನಿಶಿತ್ ಶೆಟ್ಟಿಗೆ 1 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿದ್ದಾರೆ.ಅದೇ ರೀತಿ, ಲೈಸೆನ್ಸ್ ಇಲ್ಲದ ವ್ಯಕ್ತಿಗೆ ಬಸ್ ಚಲಾಯಿಸಲು ಅವಕಾಶ ನೀಡಿದ್ದಕ್ಕಾಗಿ ಬಸ್ ಮಾಲಕ ಪ್ರೀತಮ್ ದೇವೇಂದ್ರ ಕುಲಾಲ್ ಅವರಿಗೆ 1 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

    ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಆರೋನ್ ಡಿಸೋಜ ವಿಟ್ಲ ಅವರು ವಾದಿಸಿದ್ದರು.

    Post Views: 35

    Related Posts

    ಉಡುಪಿ : ಸತ್ತ ಮಗನ ಹೆಸರಲ್ಲಿ ₹5 ಲಕ್ಷ ವಂಚನೆ- ಕುಟುಂಬಕ್ಕೆ ಜೀವ ಬೆದರಿಕೆ, ಇಬ್ಬರು ಅರೆಸ್ಟ್

    August 28, 2026

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ-ನಾಲ್ವರು ಆರೋಪಿಗಳ ಬಂಧನ

    August 27, 2026

    ಉಳ್ಳಾಲ: ಮಾದಕ ವಸ್ತು ಸೇವನೆ : ಆರೋಪಿಯ ಬಂಧನ

    August 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ : ಸತ್ತ ಮಗನ ಹೆಸರಲ್ಲಿ ₹5 ಲಕ್ಷ ವಂಚನೆ- ಕುಟುಂಬಕ್ಕೆ ಜೀವ ಬೆದರಿಕೆ, ಇಬ್ಬರು ಅರೆಸ್ಟ್

    August 28, 2026

    ಮಂಗಳೂರು: ಲೈಸೆನ್ಸ್ ಇಲ್ಲದೆ ಬಸ್ ಚಾಲನೆ -ಚಾಲಕ, ಮಾಲಕನಿಗೆ ಜೈಲು ಶಿಕ್ಷೆ

    August 27, 2026

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ-ನಾಲ್ವರು ಆರೋಪಿಗಳ ಬಂಧನ

    August 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.